Homeಮುಖಪುಟಸಂಸದರ ಸಾಮೂಹಿಕ ಅಮಾನತಿನ ಬೆನ್ನಲ್ಲಿ ಲೋಕಸಭೆಯಲ್ಲಿ 3 ಕ್ರಿಮಿನಲ್ ಕಾನೂನು ಮಸೂದೆ ಅಂಗೀಕಾರ

ಸಂಸದರ ಸಾಮೂಹಿಕ ಅಮಾನತಿನ ಬೆನ್ನಲ್ಲಿ ಲೋಕಸಭೆಯಲ್ಲಿ 3 ಕ್ರಿಮಿನಲ್ ಕಾನೂನು ಮಸೂದೆ ಅಂಗೀಕಾರ

- Advertisement -
- Advertisement -

ಲೋಕಸಭೆಯ ಚಳಿಗಾಲದ ಅಧಿವೇಶನದಲ್ಲಿ ಕ್ರಿಮಿನಲ್ ಕಾನೂನುಗಳನ್ನು ಬದಲಿಸುವ 3 ಮಸೂದೆಗಳನ್ನು ಬುಧವಾರ ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ.

ಭಾರತೀಯ ನ್ಯಾಯ (ಎರಡನೇ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ ಮತ್ತು ಭಾರತೀಯ ಸಾಕ್ಷಿ (ಎರಡನೇ) ಮಸೂದೆಯನ್ನು ಕಳೆದ ವಾರ ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡಿಸಿದ್ದರು. ಈ ಮಸೂದೆಗಳು ಕ್ರಮವಾಗಿ ಭಾರತೀಯ ದಂಡ ಸಂಹಿತೆ-1860, ಕ್ರಿಮಿನಲ್ ಪ್ರೊಸೀಜರ್ ಆಕ್ಟ್-1898 ಮತ್ತು 1872ರ ಭಾರತೀಯ ಸಾಕ್ಷ್ಯ ಕಾಯಿದೆಗೆ ಬದಲಾವಣೆಗಳನ್ನು ಸೂಚಿಸುತ್ತದೆ.

ಬುಧವಾರ ಲೋಕಸಭೆಯಲ್ಲಿ ಮಸೂದೆಗಳ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಅಮಿತ್‌ ಶಾ, ಪ್ರಸ್ತಾವಿತ ಕಾನೂನುಗಳನ್ನು ಸಮಗ್ರ ಸಮಾಲೋಚನೆಯ ನಂತರ ರಚಿಸಲಾಗಿದೆ ಮತ್ತು ಸದನದ ಅನುಮೋದನೆಗೆ ತರುವ ಮೊದಲು ಕರಡು ಶಾಸನಗಳ ಕೂಲಂಕುಷವಾಗಿ ಪರಿಶೀಲಿಸಲಾಗಿದೆ ಎಂದು ಹೇಳಿದರು. ಅಸ್ತಿತ್ವದಲ್ಲಿರುವ ಕ್ರಿಮಿನಲ್ ಕಾನೂನುಗಳು ವಸಾಹತುಶಾಹಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತವೆ ಮತ್ತು ಶಿಕ್ಷಿಸುವ ಉದ್ದೇಶವನ್ನು ಹೊಂದಿದೆ ನ್ಯಾಯವನ್ನು ನೀಡುವ ಉದ್ದೇಶ ಹೊಂದಿರಲಿಲ್ಲ ಎಂದು ಹೇಳಿದ್ದಾರೆ.

ಮೂರು ಹೊಸ ಮಸೂದೆಗಳು ಭಾರತೀಯ ಚಿಂತನೆಯ ಆಧಾರದ ಮೇಲೆ ನ್ಯಾಯವನ್ನು ಸ್ಥಾಪಿಸಲು ಪ್ರಯತ್ನಿಸುತ್ತವೆ. ಮೂರು ಪ್ರಸ್ತಾವಿತ ಕ್ರಿಮಿನಲ್ ಕಾನೂನುಗಳು ಜನರನ್ನು ವಸಾಹತುಶಾಹಿ ಮನಸ್ಥಿತಿಯಿಂದ  ಮುಕ್ತಗೊಳಿಸುತ್ತವೆ ಎಂದು ಲೋಕಸಭೆಯಲ್ಲಿ ಧ್ವನಿ ಮತದ ಮೂಲಕ ಮಸೂದೆಗಳನ್ನು ಅಂಗೀಕರಿಸುವ ಮೊದಲು ಶಾ ಹೇಳಿದರು.

ಲೋಕಸಭೆ ಮತ್ತು ರಾಜ್ಯಸಭೆಯಿಂದ ವಿರೋಧ ಪಕ್ಷದ ಸಂಸದರನ್ನು ಸಾಮೂಹಿಕವಾಗಿ ಅಮಾನತುಗೊಳಿಸಿದ ನಡುವೆ ಈ ಬೆಳವಣಿಗೆಯಾಗಿದೆ. ಲೋಕಸಭೆ ಮತ್ತು ರಾಜ್ಯಸಭೆಯಿಂದ ಒಟ್ಟು 143 ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಅದರಲ್ಲಿ 97 ಸಂಸದರನ್ನು ಲೋಕಸಭೆಯಿಂದ ಅಮಾನತು ಮಾಡಲಾಗಿತ್ತು. ಅಂದರೆ ಶೇಕಡಾ 68ಕ್ಕಿಂತ ಹೆಚ್ಚು ಪ್ರತಿಪಕ್ಷಗಳ ಸಂಸದರನ್ನು ಅಮಾನತು ಮಾಡಲಾಗಿದೆ.

ಇದಲ್ಲದೆ ಲೋಕಸಭೆಯಿಂದ ಸಂಸದರ ಅಮಾನತಿನ ಬಳಿಕ ತಾತ್ಕಾಲಿಕ ತೆರಿಗೆ ಸಂಗ್ರಹ ಮಸೂದೆ-2023, ಕೇಂದ್ರ ಸರಕು ಮತ್ತು ಸೇವಾ ತೆರಿಗೆ(ತಿದ್ದುಪಡಿ) ಮಸೂದೆಯನ್ನು ಕೂಡ ಅಂಗೀಕರಿಸಲಾಗಿದೆ.

ಮೂರು ಕ್ರಿಮಿನಲ್​ ಕಾನೂನು ವಿಧೇಯಕಗಳನ್ನು ಹಿಂಪಡೆದಿದ್ದ ಕೇಂದ್ರ ಸರ್ಕಾರ

ಕಳೆದ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಕೇಂದ್ರವು ಮಂಡಿಸಿದ ಮೂರು ಹೊಸ ಕ್ರಿಮಿನಲ್ ಕಾನೂನು ವಿಧೇಯಕಗಳನ್ನು ಸಂಸದೀಯ ಸ್ಥಾಯಿ ಸಮಿತಿಯ ಶಿಫಾರಸುಗಳ ನಂತರ ಸರ್ಕಾರವು ಹಿಂಪಡೆದಿತ್ತು. ಆಗಸ್ಟ್ ತಿಂಗಳಲ್ಲಿ ನಡೆದ ಅಧಿವೇಶನದ ವೇಳೆ 3 ವಿಧೇಯಕಗಳನ್ನು ಮಂಡಿಸಲಾಗಿತ್ತು. ಆದರೆ ಅವುಗಳಿಗೆ ಸಂಸದೀಯ ಸ್ಥಾಯಿ ಸಮಿತಿ ಕೆಲವು ಬದಲಾವಣೆಗಳನ್ನು ಶಿಫಾರಸು ಮಾಡಿತ್ತು. ಹೀಗಾಗಿ ಅವುಗಳನ್ನು ವಾಪಸ್ ಪಡೆದಿದ್ದ ಕೇಂದ್ರ ಸರ್ಕಾರ ಚಳಿಗಾಲದ ಸಂಸತ್‌ ಕಲಾಪದಲ್ಲಿ ಹೊಸದಾಗಿ 3 ವಿಧೇಯಕವನ್ನು ಮಂಡಿಸಿತ್ತು.

ಆಗಸ್ಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ಅಮಿತ್‌ ಶಾ ಮಂಡಿಸಿದ 3 ಕ್ರಿಮಿನಲ್‌ ತಿದ್ದುಪಡಿ ವಿಧೇಯಕಗಳಿಗೆ ಸಂಪುಟ ಅನುಮೋದನೆ ನೀಡಿತ್ತು.  ಲೋಕಸಭೆಯಲ್ಲಿ ವಿಧೇಯಕಗಳನ್ನು ಮಂಡಿಸುವ ಸಂದರ್ಭದಲ್ಲಿ ಅಮಿತ್ ಶಾ ಅವರು ಈ ಮಸೂದೆಗಳ ಉದ್ದೇಶವು ನ್ಯಾಯ ಒದಗಿಸುವುದು, ಶಿಕ್ಷೆಯಲ್ಲ ಎಂದು ಹೇಳಿದ್ದರು.  ಕಳೆದ ವಾರ ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 3 ಮಸೂದೆಗಳನ್ನು ಮಂಡಿಸಿದ್ದರು.

ಇದನ್ನು ಓದಿ: ಲೋಕಸಭೆಯಿಂದ ಮತ್ತಿಬ್ಬರು ಸಂಸದರ ಅಮಾನತು

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...