Homeಮುಖಪುಟಬಿರೇನ್ ಸಿಂಗ್ ಸರ್ಕಾರ ಕರೆದ ಸಭೆಗೆ ಹಾಜರಾಗದಿರಿ - ತನ್ನ ಸದಸ್ಯರಿಗೆ ಎನ್‌ಪಿಪಿ ಸೂಚನೆ

ಬಿರೇನ್ ಸಿಂಗ್ ಸರ್ಕಾರ ಕರೆದ ಸಭೆಗೆ ಹಾಜರಾಗದಿರಿ – ತನ್ನ ಸದಸ್ಯರಿಗೆ ಎನ್‌ಪಿಪಿ ಸೂಚನೆ

- Advertisement -
- Advertisement -

ಬಿರೇನ್ ಸಿಂಗ್ ಸರ್ಕಾರ ಕರೆದ ಯಾವುದೇ ಸಭೆಗಳಿಗೆ ಹಾಜರಾಗದಂತೆ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ತನ್ನ ಸದಸ್ಯರಿಗೆ ಸೂಚನೆ ನೀಡಿದೆ. ರಾಜ್ಯಾಧ್ಯಕ್ಷ ಎನ್ ಕೈಸಿ ಅವರು ಸಹಿ ಮಾಡಿದ ಸಲಹೆಯು ಗುರುವಾರ ಹೊರಡಿಸಲಾಗಿದೆ. ಈ ಹಿಂದೆ ಬಿಜೆಪಿ ನೇತೃತ್ವದ ಎನ್‌ಡಿಎ ಭಾಗವಾಗಿದ್ದ ಎನ್‌ಪಿಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಾಸು ಪಡೆದಿತ್ತು. ಬಿರೇನ್ ಸಿಂಗ್ ಸರ್ಕಾರ

ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ನವೆಂಬರ್ 17 ರಂದು ಮಣಿಪುರದ ಬಿರೆನ್‌ ಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಅಧಿಕೃತವಾಗಿ ಹಿಂಪಡೆದಿದ್ದಾರೆ ಎಂದು ರಾಜ್ಯಾಧ್ಯಕ್ಷ ಎನ್‌ ಕೈಸಿ ಅವರು ಒತ್ತಿಹೇಳಿದ್ದಾರೆ. “ಪರಿಣಾಮವಾಗಿ, ಎಲ್ಲಾ NPP ಸದಸ್ಯರು ಈ ನಿರ್ಧಾರವನ್ನು ಅನುಸರಿಸುವ ಅಗತ್ಯವಿದೆ,” ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಯಾವುದೇ ಅಧಿಕೃತ ಹೇಳಿಕೆಗಳನ್ನು ನೀಡುವ ಮೊದಲು ಅಥವಾ ಈ ವಿಷಯದ ಬಗ್ಗೆ ಮಾಧ್ಯಮಗಳೊಂದಿಗೆ ತೊಡಗಿಸಿಕೊಳ್ಳುವ ಮೊದಲು ಸದಸ್ಯರು ರಾಜ್ಯ ಅಥವಾ ರಾಷ್ಟ್ರೀಯ ಅಧ್ಯಕ್ಷರಿಂದ ಅನುಮತಿ ಪಡೆಯಬೇಕು ಎಂದು ಸಲಹೆಯು ಹೇಳಿದೆ. ನವೆಂಬರ್ 18 ರಂದು ಸಿಎಂ ಸೆಕ್ರೆಟರಿಯೇಟ್‌ನಲ್ಲಿ ಬಿರೆನ್ ಸಿಂಗ್ ಕರೆದಿದ್ದ ಎನ್‌ಡಿಎ ಸಭೆಯಲ್ಲಿ ಮೂವರು ಎನ್‌ಪಿಪಿ ಶಾಸಕರು ಭಾಗವಹಿಸಿದ್ದ ಹಿನ್ನೆಲೆಯಲ್ಲಿ ಪಕ್ಷದ ಈ ನಿರ್ದೇಶನ ಬಂದಿದೆ. ಬಿರೇನ್ ಸಿಂಗ್ ಸರ್ಕಾರ

ಈ ನಡುವೆ, ಶಂಕಿತ ಕುಕಿ ಉಗ್ರಗಾಮಿಗಳ ವಿರುದ್ಧ ಕೇಂದ್ರ ಸರ್ಕಾರವು “ಸಾಮೂಹಿಕ ಕಾರ್ಯಾಚರಣೆ” ಪ್ರಾರಂಭಿಸಬೇಕೆಂದು ಒತ್ತಾಯಿಸಿ ಮಣಿಪುರದ ಆಡಳಿತಾರೂಢ ಎನ್‌ಡಿಎ ಶಾಸಕರು ಅಂಗೀಕರಿಸಿದ ನಿರ್ಣಯವು “ವಿಭಜಕ, ಏಕಪಕ್ಷೀಯ ಮತ್ತು ಕೋಮುವಾದ” ಆಗಿದೆ ಎಂದು ಕುಕಿ-ಹ್ಮಾರ್-ಜೋಮಿ ಬುಡಕಟ್ಟು ಸಮುದಾಯಗಳ ಹತ್ತು ಶಾಸಕರು ಹೇಳಿದ್ದರು. ವಿಶೇಷವೆಂದರೆ, ಈ ಹತ್ತು ಶಾಸಕರಲ್ಲಿ 7 ಮಂದಿ ಬಿಜೆಪಿ ಪಕ್ಷದವರಾಗಿದ್ದು, ಒಬ್ಬರು ಪಕ್ಷೇತರ ಶಾಸಕ ಮತ್ತು ಇಬ್ಬರು ಕುಕಿ ಪೀಪಲ್ಸ್ ಅಲೈಯನ್ಸ್‌ ಶಾಸಕರಾಗಿದ್ದಾರೆ.

ಕೇವಲ ಒಂದು ಸಮುದಾಯದ ವಿರುದ್ಧ ಸಾಮೂಹಿಕ ಕಾರ್ಯಾಚರಣೆಯನ್ನು ಪ್ರಾರಂಭಿಸುವುದು ಪಕ್ಷಪಾತವಾಗಿದೆ ಎಂದು ಈ ಶಾಸಕರು ಹೇಳಿದ್ದಾರೆ. “ಎಲ್ಲಾ ಬಂಡುಕೋರ ಗುಂಪುಗಳಿಂದ ಎಲ್ಲಾ ಅಕ್ರಮ ಶಸ್ತ್ರಾಸ್ತ್ರಗಳನ್ನು ಮರುಪಡೆಯಲು ರಾಜ್ಯದಾದ್ಯಂತ ಸಾಮೂಹಿಕ ಕಾರ್ಯಾಚರಣೆಗಳನ್ನು ನಡೆಸಬೇಕು” ಎಂದು ಶಾಸಕರು ಹೇಳಿದ್ದಾರೆ.

10 ಮಂದಿ ಶಾಸಕರ ಹೇಳಿಕೆಗೂ ಒಂದು ದಿನ ಮುಂಚಿತವಾಗಿ, ನವೆಂಬರ್ 18 ರಂದು, ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೇತೃತ್ವದ 28 ಎನ್‌ಡಿಎ ಶಾಸಕರು ನವೆಂಬರ್ 11 ರಂದು ಜಿರಿಬಾಮ್‌ನಲ್ಲಿ ಆರು ಮೈತೇಯಿ ಮಹಿಳೆಯರು ಮತ್ತು ಮಕ್ಕಳನ್ನು ಅಪಹರಿಸಿ ಹತ್ಯೆಗೈದ ಶಂಕಿತ ಕುಕಿ ಉಗ್ರಗಾಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ಣಯವನ್ನು ಅಂಗೀಕರಿಸಿದ್ದರು. ಈ ನಿರ್ಣಯದಲ್ಲಿ, ಏಳು ದಿನಗಳೊಳಗೆ ಶಂಕಿತ ಉಗ್ರರನ್ನು “ಕಾನೂನುಬಾಹಿರ ಸಂಘಟನೆ” ಎಂದು ಘೋಷಿಸುವಂತೆ ಕೇಂದ್ರವನ್ನು ಒತ್ತಾಯಿಸಲಾಗಿದೆ.

ರಾಜ್ಯದಲ್ಲಿ ಹಿಂಸಾಚಾರ ಹೆಚ್ಚುತ್ತಿರುವ ಕಾರಣ ರಾಜ್ಯದ ಐದು ಕಣಿವೆ ಜಿಲ್ಲೆಗಳಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರಗಳ ಕಾಯಿದೆ (AFSPA)ಯನ್ನು ಜಾರಿಗೊಳಿಸಿರುವುದನ್ನು ಪರಿಶೀಲಿಸುವಂತೆ ಎನ್‌ಡಿಎ ಶಾಸಕರು ಒತ್ತಾಯಿಸಿದ್ದರು. “ಸಾರ್ವಜನಿಕ ಸುವ್ಯವಸ್ಥೆಯ ನಿರ್ವಹಣೆ” ಗಾಗಿ ಶೋಧನೆ ನಡೆಸಲು, ಜನರನ್ನು ಬಂಧಿಸಲು ಮತ್ತು ಗುಂಡಿನ ದಾಳಿ ನಡೆಸಲು ಸೇನಾ ಸಿಬ್ಬಂದಿಗೆ AFSPA ಕಾಯಿದೆಯು ಅಧಿಕಾರವನ್ನು ನೀಡುತ್ತದೆ. ಒಂದು ವೇಳೆ ಈ ದಾಳಿಯಲ್ಲಿ ವ್ಯಕ್ತಿಯು ಮೃತಪಟ್ಟರೆ ಕಾಯಿದೆ ಸೇನಾ ಸಿಬ್ಬಂದಿಗೆ ರಕ್ಷಣೆ ನೀಡುತ್ತದೆ.

ಇದನ್ನೂ ಓದಿ: ಕಾರ್ಮಿಕರ ಕಳ್ಳ ಸಾಗಾಣಿಕೆ ತಡೆಯಲು ಪ್ರಸ್ತಾವನೆ ರೂಪಿಸಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ಕಾರ್ಮಿಕರ ಕಳ್ಳ ಸಾಗಾಣಿಕೆ ತಡೆಯಲು ಪ್ರಸ್ತಾವನೆ ರೂಪಿಸಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...