ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ 14 ವರ್ಷದ ಬಾಲಕಿಯನ್ನು ಕರೆಸಿ ಅವರ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ದೆಹಲಿ ಬಳಿಯ ಗುರುಗ್ರಾಮದಲ್ಲಿ ನಡೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಈ ಬಗ್ಗೆ ಅವರ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ. ಹುಟ್ಟುಹಬ್ಬದ
ಭಾನುವಾರ ರಾತ್ರಿ ಸಂತ್ರಸ್ತ ಬಾಲಕಿಯು ಹುಟ್ಟುಹಬ್ಬ ಆಚರಣೆಗಾಗಿ ತನ್ನ ಸ್ನೇಹಿತರೊಂದಿಗೆ ಗೆಸ್ಟ್ ಹೌಸ್‌ಗೆ ತೆರಳಿದ್ದರು. ಅದಾಗ್ಯೂ, ಬಾಲಕಿ ತೆರಳಿದ್ದ ನಿಖರ ಸ್ಥಳದ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿರಲಿಲ್ಲ. ಮರುದಿನ ಬೆಳಿಗ್ಗೆ ಮನೆಗೆ ವಾಪಾಸಾಗಿದ್ದ ಬಾಲಕಿ ತನ್ನ ಮೇಲೆ ಅತ್ಯಾಚಾರ ಆಗಿರುವ ಬಗ್ಗೆ ಪೋಷಕರಿಗೆ ತಿಳಿಸಿದ್ದಾರೆ.
8ನೇ ತರಗತಿಯಲ್ಲಿ ಓದುತ್ತಿರುವ ತನ್ನ ಮಗಳು ಅವರ ಸ್ನೇಹಿತ ಅಂಶು ಜೊತೆ ಅವಿನಾಶ್ ಎಂಬ ಮತ್ತೊಬ್ಬ ಯುವಕನ ಹುಟ್ಟುಹಬ್ಬ ಆಚರಿಸಲು ಬೈಕ್‌ನಲ್ಲಿ ತೆರಳಿದ್ದಳು ಎಂದು ಸಂತ್ರಸ್ತ ಬಾಲಕಿಯ ತಾಯಿ ತಮ್ಮ ದೂರಿನಲ್ಲಿ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ಹುಟ್ಟುಹಬ್ಬದ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಅವಿನಾಶ್ ಹುಟ್ಟುಹಬ್ಬದ ಕೇಕ್ ಕತ್ತರಿಸಿದ ಬಳಿಕ ವಾಪಸ್ ಬರುವುದಾಗಿ ಅಂಶು ಹೇಳಿದ್ದ. ಆದರೆ ಅವಿನಾಶ್ ಗೆಸ್ಟ್ ಹೌಸ್‌ನಿಂದ ಹೊರ ಹೋಗಿದ್ದು, ಅಂಶು ತನ್ನ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ತಾಯಿ ದೂರಿನಲ್ಲಿ ತಿಳಿಸಿದ್ದಾರೆ. “ಅವಿನಾಶ್ ಈ ಹಿಂದೆ ಎರಡು ಬಾರಿ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾಗಿ ತನ್ನ ಮಗಳು ಬಹಿರಂಗಪಡಿಸಿದ್ದಾಳೆ” ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ಹೇಳಿದ್ದಾರೆ.
ಬಾಲಕಿಯ ತಾಯಿ ನೀಡಿದ ದೂರಿನ ಆಧಾರದಲ್ಲಿ ಸೋಮವಾರ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆ ಮತ್ತು ಸಮಾಲೋಚನೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.
“ಆರೋಪಿಗಳನ್ನು ಬಂಧಿಸಲು ವಿಶೇಷ ತಂಡವನ್ನು ರಚಿಸಲಾಗಿದೆ. ಇಬ್ಬರೂ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಇದನ್ನೂಓದಿ: ದಲ್ಲೆವಾಲ್ ಉಪವಾಸ 51ನೇ ದಿನಕ್ಕೆ; ಆಮರಣಾಂತ ಉಪವಾಸ ಆರಂಭಿಸಿದ 111 ರೈತರು
ದಲ್ಲೆವಾಲ್ ಉಪವಾಸ 51ನೇ ದಿನಕ್ಕೆ; ಆಮರಣಾಂತ ಉಪವಾಸ ಆರಂಭಿಸಿದ 111 ರೈತರು


