Homeಮುಖಪುಟಹುಟ್ಟುಹಬ್ಬದ ನೆಪದಲ್ಲಿ ಕರೆಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ

ಹುಟ್ಟುಹಬ್ಬದ ನೆಪದಲ್ಲಿ ಕರೆಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ

- Advertisement -
- Advertisement -

ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ 14 ವರ್ಷದ ಬಾಲಕಿಯನ್ನು ಕರೆಸಿ ಅವರ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ದೆಹಲಿ ಬಳಿಯ ಗುರುಗ್ರಾಮದಲ್ಲಿ ನಡೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಈ ಬಗ್ಗೆ ಅವರ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ. ಹುಟ್ಟುಹಬ್ಬದ

ಭಾನುವಾರ ರಾತ್ರಿ ಸಂತ್ರಸ್ತ ಬಾಲಕಿಯು ಹುಟ್ಟುಹಬ್ಬ ಆಚರಣೆಗಾಗಿ ತನ್ನ ಸ್ನೇಹಿತರೊಂದಿಗೆ ಗೆಸ್ಟ್‌ ಹೌಸ್‌ಗೆ ತೆರಳಿದ್ದರು. ಅದಾಗ್ಯೂ, ಬಾಲಕಿ ತೆರಳಿದ್ದ ನಿಖರ ಸ್ಥಳದ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿರಲಿಲ್ಲ. ಮರುದಿನ ಬೆಳಿಗ್ಗೆ ಮನೆಗೆ ವಾಪಾಸಾಗಿದ್ದ ಬಾಲಕಿ ತನ್ನ ಮೇಲೆ ಅತ್ಯಾಚಾರ ಆಗಿರುವ ಬಗ್ಗೆ ಪೋಷಕರಿಗೆ ತಿಳಿಸಿದ್ದಾರೆ.

8ನೇ ತರಗತಿಯಲ್ಲಿ ಓದುತ್ತಿರುವ ತನ್ನ ಮಗಳು ಅವರ ಸ್ನೇಹಿತ ಅಂಶು ಜೊತೆ ಅವಿನಾಶ್ ಎಂಬ ಮತ್ತೊಬ್ಬ ಯುವಕನ ಹುಟ್ಟುಹಬ್ಬ ಆಚರಿಸಲು ಬೈಕ್‌ನಲ್ಲಿ ತೆರಳಿದ್ದಳು ಎಂದು ಸಂತ್ರಸ್ತ ಬಾಲಕಿಯ ತಾಯಿ ತಮ್ಮ ದೂರಿನಲ್ಲಿ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ಹುಟ್ಟುಹಬ್ಬದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅವಿನಾಶ್ ಹುಟ್ಟುಹಬ್ಬದ ಕೇಕ್ ಕತ್ತರಿಸಿದ ಬಳಿಕ ವಾಪಸ್ ಬರುವುದಾಗಿ ಅಂಶು ಹೇಳಿದ್ದ. ಆದರೆ ಅವಿನಾಶ್ ಗೆಸ್ಟ್‌ ಹೌಸ್‌ನಿಂದ ಹೊರ ಹೋಗಿದ್ದು, ಅಂಶು ತನ್ನ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ತಾಯಿ ದೂರಿನಲ್ಲಿ ತಿಳಿಸಿದ್ದಾರೆ. “ಅವಿನಾಶ್ ಈ ಹಿಂದೆ ಎರಡು ಬಾರಿ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾಗಿ ತನ್ನ ಮಗಳು ಬಹಿರಂಗಪಡಿಸಿದ್ದಾಳೆ” ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ಹೇಳಿದ್ದಾರೆ.

ಬಾಲಕಿಯ ತಾಯಿ ನೀಡಿದ ದೂರಿನ ಆಧಾರದಲ್ಲಿ ಸೋಮವಾರ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆ ಮತ್ತು ಸಮಾಲೋಚನೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.

“ಆರೋಪಿಗಳನ್ನು ಬಂಧಿಸಲು ವಿಶೇಷ ತಂಡವನ್ನು ರಚಿಸಲಾಗಿದೆ. ಇಬ್ಬರೂ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂಓದಿ:  ದಲ್ಲೆವಾಲ್ ಉಪವಾಸ 51ನೇ ದಿನಕ್ಕೆ; ಆಮರಣಾಂತ ಉಪವಾಸ ಆರಂಭಿಸಿದ 111 ರೈತರು

ದಲ್ಲೆವಾಲ್ ಉಪವಾಸ 51ನೇ ದಿನಕ್ಕೆ; ಆಮರಣಾಂತ ಉಪವಾಸ ಆರಂಭಿಸಿದ 111 ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...