Homeಮುಖಪುಟಜನ್ಮದಿನ ವಿಶೇಷ: ಸರ್ದಾರ್‌ ಪಟೇಲ್‌ RSS ಬಗ್ಗೆ ಹೇಳಿದ್ದು ಹೀಗೆ!

ಜನ್ಮದಿನ ವಿಶೇಷ: ಸರ್ದಾರ್‌ ಪಟೇಲ್‌ RSS ಬಗ್ಗೆ ಹೇಳಿದ್ದು ಹೀಗೆ!

- Advertisement -
- Advertisement -

ಇಂದು ದೇಶದ ಮೊದಲ ಉಪಪ್ರಧಾನ ಮಂತ್ರಿ ಹಾಗೂ ಗೃಹಸಚಿವರಾಗಿದ್ದ ವಲ್ಲಭಬಾಯಿ ಪಟೇಲ್‌ ಅವರ ಜನ್ಮದಿನ. ‘ಉಕ್ಕಿನ ಮನುಷ್ಯ’ ಎಂದು ಕರೆಯಲ್ಪಡುವ ಅವರ ಜನ್ಮದಿನಕ್ಕೆ ಪ್ರಧಾನ ಮೋದಿ, ಗೃಹ ಸಚಿವ ಅಮಿತ್‌ ಶಾ, ರಾಹುಲ್ ಗಾಂಧಿ ಸೇರಿದಂತೆ ಹಲವಾರು ಜನರು ಶುಭಕೋರಿದ್ದಾರೆ.

ಅವರ ಜನ್ಮವನ್ನು ‘ರಾಷ್ಟ್ರೀಯ ಏಕತಾ ದಿನ’ವಾಗಿ ಆಚರಿಸಲಾಗುತ್ತದೆ. ಭಾರತದ ಪ್ರಮುಖ ರಾಜಕೀಯ ವ್ಯಕ್ತಿಗಳಲ್ಲೊಬ್ಬರಾಗಿದ್ದ ಅವರು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಹಿರಿಯ ಮುಖಂಡರಾಗಿದ್ದರು. ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಮಾತ್ರವಲ್ಲದೇ, ಭಾರತದ ಗಣರಾಜ್ಯದ ಸ್ಥಾಪನೆ ಮತ್ತು ಸ್ವತಂತ್ರ ರಾಷ್ಟ್ರದೊಳಗಿನ ಏಕೀಕರಣದಲ್ಲಿ ಸರ್ದಾರ್‌ ಪಟೇಲ್‌ ಪಾತ್ರ ಬಹಳ ಪ್ರಾಮುಖ್ಯತೆಯನ್ನು ಹೊಂದಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಸ್ಟೇಡಿಯಂ ಟ್ರೋಲ್: ಸರ್ದಾರ್‌ ಪಟೇಲ್‌ಗೆ ಅವಮಾನ ಎಂದ ನೆಟ್ಟಿಗರು!

RSS ಬಗ್ಗೆ ದೇಶದ ಮೊದಲ ಗೃಹ ಸಚಿವರಾಗಿದ್ದ ಸರ್ದಾರ್‌ ಪಟೇಲ್‌!

ಮಹಾತ್ಮ ಗಾಂಧಿ ಕೊಲೆಯ ನಂತರ ಸೆಪ್ಟೆಂಬರ್ 11, 1948 ರಂದು ಸರ್ದಾರ್‌ ಪಟೇಲ್‌ ಅವರು ಆರೆಸ್ಸೆಸ್‌ ನಾಯಕ ಗೋಳ್ವಲ್ಕರ್‌‌ಗೆ ಬರೆದ ಪತ್ರದಲ್ಲಿ ಹೀಗಿದ್ದವು…

“…ವ್ಯಕ್ತಿತ್ವ, ಸಭ್ಯತೆ ಅಥವಾ ಸಜ್ಜನಿಕೆಯ ಎಲ್ಲ ಪರಿಗಣನೆಗಳನ್ನು ಕಡೆಗಣಿಸಿ ಜನರಲ್ಲಿ ವಿಷಕಾರಿ ಅಶಾಂತಿ ಸೃಷ್ಟಿಸಿತು. ಭಾಷಣಗಳೆಲ್ಲ ಸಂಪೂರ್ಣ ಕೋಮು ವಿಷಮಯವಾಗಿತ್ತು. ಈ ವಿಷವನ್ನು ಹರಡಿ ಹಿಂದೂಗಳನ್ನು ಪ್ರಚೋದಿಸಿ ಅವರನ್ನು ರಕ್ಷಣೆಗಾಗಿ ಸಂಘಟಿಸಬೇಕಾಗಿರಲಿಲ್ಲ.

ವಿಷದ ಪರಿಣಾಮವಾಗಿ, ಗಾಂಧೀಜಿಯ ಅಮೂಲ್ಯವಾದ ಜೀವದ ತ್ಯಾಗವನ್ನು ದೇಶವು ಅನುಭವಿಸಬೇಕಾಯಿತು. ಆರೆಸ್ಸೆಸ್‌ ಮೇಲೆ ಸರ್ಕಾರ ಅಥವಾ ಜನರ ಸಹಾನುಭೂತಿಯ ಒಂದು ತುಣುಕೂ ಉಳಿದಿಲ್ಲ. ನಿಜ ಹೇಳಬೇಕೆಂದರೆ ವಿರೋಧವೇ ಉಳಿಯಿತು.

ಗಾಂಧೀಜಿಯ ಮರಣದ ನಂತರ ಆರೆಸ್ಸೆಸ್‌‌ನವರು ಸಂತೋಷ ವ್ಯಕ್ತಪಡಿಸಿ ಸಿಹಿ ಹಂಚಿದಾಗ ಈ ವಿರೋಧ ತೀವ್ರವಾಯಿತು. ಈ ಪರಿಸ್ಥಿತಿಯಲ್ಲಿ ಆರೆಸ್ಸೆಸ್‌‌ ವಿರುದ್ಧ ಕ್ರಮ ಕೈಗೊಳ್ಳುವುದು ಸರ್ಕಾರಕ್ಕೆ ಅನಿವಾರ್ಯವಾಯಿತು.

ಅಂದಿನಿಂದ, ಆರು ತಿಂಗಳುಗಳು ಕಳೆದಿವೆ. ಆರೆಸ್ಸೆಸ್‌‌ ಈಗಲಾದರೂ ಸರಿ ದಾರಿಗೆ ಬರುತ್ತಾರೆ ಎಂದು ನಾವು ಭಾವಿಸಿದ್ದೆವು. ಆದರೆ ನನಗೆ ಬಂದಿರುವ ವರದಿಗಳ ಪ್ರಕಾರ ಆರೆಸ್ಸೆಸ್‌ ಅದೇ ಹಳೆಯ ಚಟುವಟಿಕೆಗಳಿಗೆ ಜೀವ ತುಂಬುತ್ತಿದೆ ಎಂದು ಸ್ಪಷ್ಟವಾಗಿದೆ”

ಇದನ್ನೂ ಓದಿ: “ಬದುಕಿರುವವರ ಬಗ್ಗೆಯೇ ಸುಳ್ಳು ಹೇಳುವವರು, ಗಾಂಧೀಜಿ ಬಗ್ಗೆ ಹೇಳುವುದಿಲ್ಲವೇ?”

ಸರ್ದಾರ್ ಪಟೇಲ್‌ ಹಿಂದೂ ರಾಷ್ಟ್ರದ ಪ್ರತಿಪಾದನೆಯನ್ನು ತಿರಸ್ಕರಿಸಿದ್ದರು. ದೇಶದಲ್ಲಿ ಜಾತ್ಯಾತೀತ ಉಳಿಸುವ ವಿಷಯಗಳ ಬಗ್ಗೆ ಅವರು ಪ್ರಧಾನಿ ನೆಹರೂ ಅವರ ಚಿಂತನೆಗಳನ್ನು ಒಪ್ಪಿಕೊಂಡಿದ್ದರು.

ಪತ್ರವೊಂದರಲ್ಲಿ ಸರ್ದಾರ್‌ ಪಟೇಲ್‌ ಅವರು, “ಭಾರತವನ್ನು ಹಿಂದೂ ರಾಷ್ಟ್ರವೆಂದು ಹಾಗೂ ಹಿಂದೂ ಧರ್ಮವನ್ನು ದೇಶದ ಧರ್ಮವೆಂದು ಪರಿಗಣಿಸಲು ಸಾಧ್ಯವಿಲ್ಲ. ದೇಶದಲ್ಲಿ ಇತರ ಅಲ್ಪಸಂಖ್ಯಾತರಿದ್ದಾರೆ ಎಂಬುದನ್ನು ನಾವು ಮರೆಯಬಾರದು. ಅವರ ರಕ್ಷಣೆಯು ನಮ್ಮ ಪ್ರಾಥಮಿಕ ಜವಾಬ್ದಾರಿಯಾಗಿದೆ. ದೇಶವು ಜಾತಿ ಅಥವಾ ಧರ್ಮದ ಭೇದವಿಲ್ಲದೆ ಎಲ್ಲರಿಗೂ ಸಲ್ಲಬೇಕು”

ಇದನ್ನೂ ಓದಿ: ನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಬಹಿರಂಗಗೊಳ್ಳುತ್ತಿದೆ: ಮೋದಿ ಕ್ರೀಡಾಂಗಣದ ಬಗ್ಗೆ ರಾಹುಲ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...