Homeಕರ್ನಾಟಕಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

- Advertisement -
- Advertisement -

ರಾಜ್ಯ ಪೊಲೀಸ್ ಇಲಾಖೆಯು ಬಿಟ್ ಕಾಯಿನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಸುದ್ದಿಗಳಿಗೆ ಸ್ಪಷ್ಟನೆಯನ್ನು ನೀಡಿದೆ. ನಾಲ್ಕು ಪುಟಗಳ ಪತ್ರಿಕಾ ಹೇಳಿಕೆಯನ್ನು ನೀಡಿರುವ ಪೊಲೀಸ್ ಇಲಾಖೆ, ಬಿಟ್‌ ಕಾಯಿನ್‌ ವರ್ಗಾವಣೆ ಆರೋಪವನ್ನು ಅಲ್ಲಗಳೆದಿದೆ. ಆರೋಪಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಯು ಕ್ರಿಪ್ಟೋ ಕರೆನ್ಸಿ ವೆಬ್‌ಸೈಟ್‌ಗಳನ್ನು ಹ್ಯಾಕಿಂಗ್‌ ಮಾಡಿದ್ದಾನೆ ಎಂಬುದು ಸುಳ್ಳು ಎಂದು ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ವರದಿಗಳು ಅಪೂರ್ಣವಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸ್ ಇಲಾಖೆಯ ಪ್ರತಿಕ್ರಿಯೆ ಹೀಗಿದೆ:

ಬಿಟ್‌ಕಾಯಿನ್ ಪ್ರಕರಣದ ಕುರಿತು ಮಾಧ್ಯಮಗಳಲ್ಲಿ ತಿರುಚಿದ ವರದಿಗಳು ಪ್ರಕಟವಾಗುತ್ತಿವೆ. ಸಿಸಿಬಿ ತನಿಖೆಯು ನ್ಯಾಯಯುತ ಹಾಗೂ ವೃತ್ತಿಪರತೆಯಿಂದ ಕೂಡಿದೆ. ಅಪೂರ್ಣ ಅಥವಾ ತಿರುಚಿದ ಸಂಗತಿಗಳಿಂದ ತಪ್ಪುದಾರಿಗೆಳೆಯುವ ವರದಿಗಳನ್ನು ತೇಲಿಬಿಡಲಾಗುತ್ತಿದೆ. ಇಂತಹ ಎಲ್ಲಾ ವರದಿಗಳನ್ನು ನಿರಾಕರಿಸಬೇಕು.

ಡಾರ್ಕ್‌ನೆಟ್ ಮೂಲಕ ಮಾದಕ ವಸ್ತುವನ್ನು ಖರೀದಿಸಿದ ಬಗ್ಗೆ ಬಂದ ಖಚಿತ ಮಾಹಿತಿ ಆಧಾರಿಸಿ ಸಿಸಿಬಿ ಪೊಲೀಸರು ಒಬ್ಬ ಆರೋಪಿಯನ್ನು 04.11.2020ರಂದು ಬಂಧಿಸಿ 500 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೆ.ಜಿ.ನಗರ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಹೆಚ್ಚಿನ ತನಿಖೆಯ ಸಮಯದಲ್ಲಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಸೇರಿದಂತೆ ಇತರ ಹತ್ತು ಆರೋಪಿಗಳನ್ನು ಬಂಧಿಸಲಾಯಿತು.

ಆರೋಪಿ ಶ್ರೀಕೃಷ್ಣನ ವಿಚಾರಣೆಯ ಸಮಯದಲ್ಲಿ, ಆತ ಅನೇಕ ಕ್ರಿಪ್ಟೋ ಕರೆನ್ಸಿ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡುವುದರಲ್ಲಿ ಭಾಗಿಯಾಗಿರುವ ಬಗ್ಗೆ ತನಿಖಾಧಿಕಾರಿಗಳ ಮುಂದೆ ಹೇಳಿಕೊಂಡನು. ಇದರ ಆಧಾರದಲ್ಲಿ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಿಆರ್ ನಂ 153/2020ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಹ್ಯಾಕರ್ ಶ್ರೀಕೃಷ್ಣನ ಖಾತೆಯಿಂದ ಯಾವುದೇ ಬಿಟ್‌ಕಾಯಿನ್‌ಗಳು ವರ್ಗಾವಣೆಯಾಗಿಲ್ಲ ಅಥವಾ ಯಾವುದೇ ಬಿಟ್‌ಕಾಯಿನ್ ಕಳೆದುಹೋಗಿಲ್ಲ.

ಇದನ್ನೂ ಓದಿರಿ: ಜನ್‌‌ ಧನ್‌ ಖಾತೆಯಿಂದ ಸಾವಿರಾರು ಕೋಟಿ ರೂ. ಕಳವು: ಎಚ್‌ಡಿಕೆ ಆರೋಪ

ಕ್ರಿಪ್ಟೋ ಕರೆನ್ಸಿಯ ತನಿಖೆಯ ಉದ್ದೇಶಕ್ಕಾಗಿ, ಬಿಟ್‌ಕಾಯಿನ್ ಖಾತೆಯನ್ನು ತೆರೆಯುವುದು ಅಗತ್ಯವೆಂದು ಭಾವಿಸಲಾಯಿತು. ಅದರಂತೆ ಬಿಟ್ ಕಾಯಿನ್ ಖಾತೆಯನ್ನು ತೆರೆಯಲು ಸರ್ಕಾರವು ಆದೇಶಿಸಿದೆ. ಬಿಟ್‌ಕಾಯಿನ್‌ಗಳನ್ನು ಗುರುತಿಸುವ ಮತ್ತು ವಶಪಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ಆರೋಪಿ ಶ್ರೀಕಿ ಬಿಟಿಸಿ ವ್ಯಾಲೆಟ್ ತೋರಿಸಿದನು. ಅದರಲ್ಲಿ 31.8 ಬಿಟಿಸಿ ಇತ್ತು. ಸೈಬರ್ ತಜ್ಞರ ಸಮ್ಮುಖದಲ್ಲಿ ವ್ಯಾಲೆಟ್ ಪಾಸ್‌ವರ್ಡ್ ಬದಲಾಯಿಸಲಾಯಿತು. ಸಂಪೂರ್ಣ ಕಾರ್ಯವಿಧಾನವನ್ನು ಮಹಜರ್ ಮಾಡಲಾಗಿದೆ. ಎಲ್ಲವನ್ನೂ ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ತರುವಾಯ, ಈ ಬಿಟ್ ಕಾಯಿನ್‌ಗಳನ್ನು ಪೊಲೀಸ್ ವ್ಯಾಲೆಟ್ ಖಾತೆಗೆ ವರ್ಗಾಯಿಸಲು ಪಾಸ್‌ವರ್ಡ್ ಬಳಸಲು ನ್ಯಾಯಾಲಯ ಅನುಮತಿ ನೀಡಿತು. ಆರೋಪಿ ಶ್ರೀಕೃಷ್ಣನ ವಾಲೆಟ್ ತೆರೆದಾಗ ಅದರಲ್ಲಿ 186.811 ಬಿಟ್‌ಕಾಯಿನ್‌ಗಳು ಕಂಡುಬಂದಿವೆ. ಆರೋಪಿಯು ಇದು ತನ್ನ ವೈಯಕ್ತಿಕ ವಾಲೆಟ್‌ ಎಂದು ಹೇಳಿಕೊಂಡಿದ್ದಾನೆ. ಆರೋಪಿಯ ಬಳಿ ಖಾಸಗಿ ಕೀ ಇರಲಿಲ್ಲ ಎಂದು ಸೈಬರ್ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದರ ಪರಿಣಾಮವಾಗಿ, ಪೊಲೀಸ್ ವ್ಯಾಲೆಟ್‌ಗೆ ಯಾವುದೇ ಬಿಟ್‌ಕಾಯಿನ್‌ಗಳನ್ನು ವರ್ಗಾಯಿಸಲಾಗಿಲ್ಲ. ಈ ಎಲ್ಲ ಸಂಬಂಧಿತ ದಾಖಲೆಗಳೊಂದಿಗೆ ನ್ಯಾಯಾಲಯಕ್ಕೆ ಚಾರ್ಜ್‌‌ಶೀಟ್‌ ಸಲ್ಲಿಸಲಾಗಿದೆ.

ಪೊಲೀಸರು ಹಾಗೂ ಹೊರಗಿನ ಡೊಮೇನ್ ತಜ್ಞರನ್ನು ಒಳಗೊಂಡಂತೆ ಅತ್ಯಂತ ಪಾರದರ್ಶಕ ರೀತಿಯಲ್ಲಿ ಕಾರ್ಯನಿರ್ವಹಿಸಲಾಗಿದೆ. ನ್ಯಾಯಾಲಯಕ್ಕೆ ಸಲ್ಲಿಸಲಾದ ಎಲ್ಲಾ ಪ್ರಕ್ರಿಯೆಗಳನ್ನು ಸೂಕ್ತವಾಗಿ ದಾಖಲಿಸಲಾಗಿದೆ. ಯಾವುದೇ ಹಂತದಲ್ಲೂ ನ್ಯಾಯಯುತ ತನಿಖೆ ಮತ್ತು ಕಾನೂನಿನ ಪ್ರಕ್ರಿಯೆಗೆ ಧಕ್ಕೆ ತರುವಂತಹ ಕೆಲಸವನ್ನು ಮಾಡಿಲ್ಲ. ಯಾವುದೇ ಬಾಹ್ಯ ಪ್ರಭಾವ ಅಥವಾ ಹಸ್ತಕ್ಷೇಪವಿಲ್ಲದೆ ವೃತ್ತಿಪರರು ತನಿಖೆ ನಡೆಸಿದ್ದಾರೆ.

14,682 ಬಿಟ್‌ಫೈನೆಕ್ಸ್ ಬಿಟ್‌ಕಾಯಿನ್‌ಗಳನ್ನು ವರ್ಗಾಯಿಸಲಾಗಿದೆ ಎಂದು ಪ್ರತಿಪಾದಿಸಿರುವುದರಲ್ಲಿ ಯಾವುದೇ ಹುರುಳಿಲ್ಲ. ಆರೋಪಿಗಳ ಬಂಧನಕ್ಕೆ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ಸಿಕ್ಕಿದ್ದರೂ ಇಲ್ಲಿಯವರೆಗೆ ಯಾವುದೇ ವಿದೇಶಿ ಕಾನೂನು ಜಾರಿ ಸಂಸ್ಥೆಗಳು, ಯಾವುದೇ ವಿದೇಶಿ ಕಂಪನಿಗಳು ಯಾವುದೇ ಹ್ಯಾಕಿಂಗ್ ಬಗ್ಗೆ ಪೊಲೀಸರನ್ನು ಸಂಪರ್ಕಿಸಿಲ್ಲ ಎಂಬುದು ಸತ್ಯ. 

ಬಿಟ್‌ಫೈನೆಕ್ಸ್ ಕಂಪನಿಯ ಪ್ರತಿನಿಧಿಗಳು ಸಹ ಹ್ಯಾಕಿಂಗ್‌ ಸಂಬಂಧಿಸಿದಂತೆ ಯಾವುದೇ ವಿವರಗಳನ್ನು ಹಂಚಿಕೊಂಡಿಲ್ಲ. ಆಪಾದಿತ ನಡೆಸಿರುವ 15 ವಹಿವಾಟಿನ ನಂತರ ಸುಮಾರು ಒಂದು ವರ್ಷ ಕಳೆದಿದ್ದರೂ, ಬಿಟ್‌ಫೈನೆಕ್ಸ್/ ಕಾನೂನು ಜಾರಿ ಏಜೆನ್ಸಿಗಳ ಯಾವುದೇ ಪ್ರತಿನಿಧಿಗಳು ಪೊಲೀಸರು ಅಥವಾ ಯಾವುದೇ ಸಂಬಂಧಪಟ್ಟ ಏಜೆನ್ಸಿಯನ್ನು ಸಂಪರ್ಕಿಸಿಲ್ಲ.

ಆರೋಪಿಯು ತನ್ನ ಸ್ವಯಂಪ್ರೇರಿತ ಹೇಳಿಕೆಯ ಸಮಯದಲ್ಲಿ ಯಾವುದೇ ನಿರ್ದಿಷ್ಟ ವಿವರಗಳಿಲ್ಲದೆ ವೆಬ್‌ಸೈಟ್‌ಗಳ ಹ್ಯಾಕಿಂಗ್‌ ಸಂಬಂಧ ಹೇಳಿದ್ದಾನೆ. ಇದನ್ನು ಖಚಿತಪಡಿಸಿಕೊಳ್ಳಲು ಪ್ರಾಥಮಿಕ ತನಿಖೆಯನ್ನು ನಡೆಸಲಾಯಿತು. ಸೈಬರ್ ತಜ್ಞರು ಡಿಜಿಟಲ್ ಸಾಕ್ಷ್ಯವನ್ನು ಎಚ್ಚರಿಕೆಯಿಂದ ಪರಿಶೀಲಿಸಿದಾಗ ಆರೋಪಿಯ ಹೆಚ್ಚಿನ ಪ್ರತಿಪಾದನೆಗಳು ಆಧಾರರಹಿತವಾಗಿವೆ ಎಂದು ತಿಳಿದುಬಂದಿದೆ.


ಇದನ್ನೂ ಓದಿರಿ: ಶ್ರೀಕೃಷ್ಣ ತಂದ ಬಿಟ್‌ಕಾಯಿನ್ ಬಿರುಗಾಳಿ! ಬ್ಲಾಕ್ ಚೈನ್ ಮತ್ತು ಬಿಟ್‌ಕಾಯಿನ್ ಬಗ್ಗೆ ಒಂದಿಷ್ಟು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...