Homeಕರ್ನಾಟಕಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ - ಡಾ. ಮೀನಾ ಕಂದಸಾಮಿ

ಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ – ಡಾ. ಮೀನಾ ಕಂದಸಾಮಿ

- Advertisement -
- Advertisement -

ಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ ಎಂದು ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ್ತಿ, ಲೇಖಕಿ ಡಾ. ಮೀನಾ ಕಂದಸಾಮಿ ಮಂಗಳವಾರ ಹೇಳಿದ್ದಾರೆ. ಅವರು ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ಐದನೇ ಪಿ.ಪಿ.ಗೋಮತಿ ಸ್ಮರಣಾರ್ಥ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಪ್ರತಿರೋಧಕ್ಕಾಗಿ ಬರವಣಿಗೆ’ ಕುರಿತು ಮಾತನಾಡುತ್ತಿದ್ದರು.

ಕರ್ನಾಟಕ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ ಸಹಯೋಗದಲ್ಲಿ ಪಿ.ಪಿ.ಗೋಮತಿ ಸ್ಮಾರಕ ಶಿಕ್ಷಣ ಟ್ರಸ್ಟ್ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಲೇಖಕಿ, ಕವಯಿತ್ರಿ, ಜಾತಿ ವಿರೋಧಿ ಹೋರಾಟಗಾರ್ತಿಯು ಆಗಿರುವ ಮೀನಾ ಕಂದಸಾಮಿ ಅವರು ಮಾತನಾಡುತ್ತಾ, ಯೂನಿವರ್ಸಿಟಿಗಳಲ್ಲಿ ದೊಡ್ಡ ಮಟ್ಟದಲ್ಲಿ ತಳಸಮುದಾಯಗಳ ವಿದ್ಯಾರ್ಥಿಗಳು ಮಾನಸಿಕ, ಹಾಗೂ ದೈಹಿಕ ಶೋಷಣೆ ಅನುಭವಿಸುತ್ತಿರುವುದನ್ನು ಪ್ರತಿನಿತ್ಯ ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಒಂದು ವ್ಯವಸ್ಥೆಯಾಗಿ ಯೂನಿವರ್ಸಿಟಿಗಳು ಬ್ರಾಹ್ಮಣವಾದದ ಅಡ್ಡೆಗಳಾಗಿವೆ. ದೇವಸ್ಥಾನಗಳಲ್ಲಿ ಪುರೋಹಿತರು ಸನಾತನಾವಾದಿಗಳಾಗಿರದೇ ಇರಬಹುದು, ಆದರೆ ಯೂನಿವರ್ಸಿಟಿಗಳಲ್ಲಿ ಇರುವ ಸನಾತನವಾದ ಬಹುಜನರನ್ನು ಉಸಿರುಗಟ್ಟಿಸುವ ಮಟ್ಟಿಗಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಕಾಲೀನ ಭಾರತದಲ್ಲಿ ಬರವಣಿಗೆ, ಪ್ರತಿರೋಧ ಮತ್ತು ಸೆನ್ಸಾರ್‌ಶಿಪ್‌ಗಳ ಅಪಾಯಗಳ ಬಗ್ಗೆ ಮಾತನಾಡಿದ ಅವರು, ಅಹಿತಕರ ಸತ್ಯಗಳನ್ನು ಮಾತನಾಡಲು ಮುಂದೆ ಬರುತ್ತಿರುವ ಬರಹಗಾರರು ಎದುರಿಸುತ್ತಿರುವ ಹೋರಾಟಗಳತ್ತ ಅವರು ಗಮನ ಸೆಳೆದರು. ”ಸಾಹಿತಿಗಳಾದ ಎಂ.ಎಂ. ಕಲ್ಬುರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರಿಬ್ಬರೂ ತಮ್ಮ ನಿರ್ಭೀತ ಮಾತುಗಳನ್ನು ವ್ಯಕ್ತಪಡಿಸಿದ್ದಕ್ಕಾಗಿ ಹತ್ಯೆಯಾದರು. ನೀವು ಕಹಿ ಸತ್ಯಗಳನ್ನು ಹೇಳಿದರೆ, ರಕ್ತವನ್ನೆ ಬೆಲೆತೆರಬೇಕಾಗುತ್ತದೆ” ಎಂದು ಅವರು ಟೀಕಿಸಿದರು.

ಭಿನ್ನಾಭಿಪ್ರಾಯವನ್ನು ನಿಗ್ರಹಿಸುವ ಪ್ರಸ್ತುತ ವಾತಾವರಣದ ಬಗ್ಗೆ ಅವರು ವಿಷಾದಿಸಿದ ಅವರು, “ವಿಮರ್ಶಾತ್ಮಕ ಧ್ವನಿಗಳನ್ನು ರಾಷ್ಟ್ರಕ್ಕೆ ಬೆದರಿಕೆ ಎಂದು ಹೇಳಲಾಗುತ್ತದೆ. ಲೇಖಕರನ್ನು ಯಾಕೆ ಕೊಲ್ಲಲಾಗುತ್ತದೆ ಅಥವಾ ಜೈಲಿಗೆ ಹಾಕಲಾಗುತ್ತಿದೆ?. ಇಂತಹ ಜನರನ್ನು ಅರ್ಬನ್ ನಕ್ಸಲರು ಎಂದು ಬ್ರಾಂಡ್ ಮಾಡುವ ಮೂಲಕ ಸರ್ಕಾರವು ಹೋರಾಟಗಾರರು ಮತ್ತು ಬರಹಗಾರರ ಲೇಖನಿಗಳನ್ನು ಹಾಗೂ ದಂಗೆಕೋರರ ಬಂದೂಕುಗಳಿಗೆ ಸಮೀಕರಿಸುತ್ತಿದೆ. ಅಂತಹ ಹೋಲಿಕೆಗಳು ಭಿನ್ನಾಭಿಪ್ರಾಯದ ಧ್ವನಿಗಳಿಗೆ ಸರ್ಕಾರಿ ಕಿರುಕುಳವನ್ನು ಕಾನೂನುಬದ್ಧಗೊಳಿಸುತ್ತವೆ” ಎಂದು ಅವರು ಎಚ್ಚರಿಸಿದ್ದಾರೆ.

“ರಾಜಕೀಯ ವ್ಯಕ್ತಿಗಳು ಮತ್ತು ಹೋರಾಟಗಾರರನ್ನು ಮೌನಗೊಳಿಸಲು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ನಂತಹ ಸರ್ಕಾರಿ ಯಂತ್ರಗಳ ದುರುಪಯೋಗ ಮಾಡಲಾಗುತ್ತಿದೆ. ಮೂಲತಃ ನ್ಯಾಯವನ್ನು ಎತ್ತಿಹಿಡಿಯಲು ರಚಿಸಲಾಗಿರುವ ಈ ಏಜೆನ್ಸಿಗಳು ಜನರ ನಿಗ್ರಹದ ಸಾಧನಗಳಾಗಿ ಮಾರ್ಪಟ್ಟಿವೆ. ಬರಹಗಾರರು ಸೆನ್ಸಾರ್‌ಶಿಪ್‌ನ ಬಲಿಪಶುಗಳಾಗಿದ್ದಾರೆ. ಈ ದೇಶದಲ್ಲಿ, ಕೇವಲ ಬರವಣಿಗೆ ಮಾತ್ರವಲ್ಲ, ಓದುವುದು ಸಹ ಪ್ರತಿರೋಧವಾಗಿದೆ. ವ್ಯಾಪಕವಾದ ದಮನದ ಸಮಯದಲ್ಲಿ ಸಾಹಿತ್ಯದೊಂದಿಗೆ ವಿಮರ್ಶಾತ್ಮಕವಾಗಿ ತೊಡಗಿಸಿಕೊಳ್ಳಬೇಕು” ಎಂದು ಮೀನಾ ಕಂದಸಾಮಿ ಅವರು ಪ್ರೇಕ್ಷಕರನ್ನು ಒತ್ತಾಯಿಸಿದ್ದಾರೆ.

ದ್ವೇಷ ಭಾಷಣವನ್ನು ಬಹಿರಂಗಪಡಿಸುವುದಕ್ಕಾಗಿ ಅನೇಕ ಕಾನೂನು ಸವಾಲುಗಳನ್ನು ಎದುರಿಸುತ್ತಿರುವ ಪತ್ರಕರ್ತ ಮತ್ತು ಫ್ಯಾಕ್ಟ್‌ ಚೆಕ್ಕರ್‌ ಮೊಹಮ್ಮದ್ ಜುಬೈರ್ ಅವರ ಉದಾಹರಣೆಯನ್ನು ಅವರು ಉಲ್ಲೇಖಿಸಿದ ಅವರು, ಸತ್ಯ ಹೇಳುವವರನ್ನು ದೇಶದ ಶತ್ರುಗಳಾಗಿ ಬಿಂಬಿಸುವ ಪ್ರವೃತ್ತಿಯು ಬೆಳೆಯುತ್ತಿರುವ ಬಗ್ಗೆ ಎತ್ತಿತೋರಿಸಿದ್ದಾರೆ. ಸತ್ಯ ಮಾತನಾಡುವ, ಅನ್ಯಾಯವನ್ನು ಬಯಲಿಗೆಳೆದು, ಶೋಷಿತರಿಗೆ ಸಾಂತ್ವನ ಹೇಳುವವರೇ ನಿಜವಾದ ದೇಶಭಕ್ತರೆಂದು ಗುರುತಿಸಲ್ಪಡುತ್ತಾರೆ ಎಂದು ಡಾ.ಕಂದಸಾಮಿ ಆಶಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...