Homeಮುಖಪುಟಬಿಜೆಪಿ 400 ಸೀಟ್ ಗೆದ್ದರೆ ಸಂವಿಧಾನ ತಿದ್ದುಪಡಿ: ಹಿಡನ್‌ ಅಜೆಂಡಾ ಬಿಚ್ಚಿಟ್ಟ ಬಿಜೆಪಿ ಸಂಸದ ಅನಂತ್‌...

ಬಿಜೆಪಿ 400 ಸೀಟ್ ಗೆದ್ದರೆ ಸಂವಿಧಾನ ತಿದ್ದುಪಡಿ: ಹಿಡನ್‌ ಅಜೆಂಡಾ ಬಿಚ್ಚಿಟ್ಟ ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ

- Advertisement -
- Advertisement -

ಸದಾ ದ್ವೇಷದ ಹೇಳಿಕೆಗೆ ಸುದ್ದಿಯಾಗುತ್ತಿದ್ದ ಉತ್ತರಕನ್ನಡ ಸಂಸದ ಅನಂತ್‌ ಕುಮಾರ್ ಹೆಗಡೆ ಸಂವಿಧಾನಕ್ಕೆ ತಿದ್ದುಪಡಿಯನ್ನು ತರುವ ಕುರಿತು ತನ್ನ ದುರಾಶೆಯನ್ನು ವ್ಯಕ್ತಪಡಿಸಿದ್ದು, ಸಂವಿಧಾನವನ್ನು ತಿದ್ದುಪಡಿ ಮಾಡಬೇಕಿದ್ರೆ, ಸಂವಿಧಾನವನ್ನು ಬದಲಾಯಿಸಬೇಕಿದ್ದರೆ ಲೋಕಸಭೆಯಲ್ಲಿ 400ಕ್ಕೂ ಅಧಿಕ ಸೀಟ್‌ ಗೆಲ್ಲಬೇಕು ಎಂದು ಹೇಳಿ ವಿವಾದವನ್ನು ಸೃಷ್ಟಿಸಿದ್ದಾರೆ.

ಸಿದ್ದಾಪುರ ತಾಲೂಕಿನ ಹಲಗೇರಿ ಗ್ರಾಮದಲ್ಲಿ ಮಾತನಾಡಿದ ಸಂಸದ ಅನಂತ್‌ ಕುಮಾರ್‌ ಹೆಗಡೆ, ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದ್ದಾರೆ. 400ಸೀಟ್‌ ಯಾಕೆ? ಲೋಕಸಭೆಯಲ್ಲಿ ಬಹುಮತ ಇದೆ. ಆದರೆ, ರಾಜ್ಯಸಭೆಯಲ್ಲಿ 2/3 ರಷ್ಟು ಇಲ್ಲ. ಅಲ್ಪ ಬಹುಮತ ಇದೆ. ರಾಜ್ಯ ಸರಕಾರಗಳಲ್ಲಿ ಬೇಕಾದ ಬಹುಮತ ಇಲ್ಲ. ಸಂವಿಧಾನ ತಿದ್ದುಪಡಿ ಮಾಡಬೇಕಿದ್ದರೆ, ಕಾಂಗ್ರೆಸ್​ನವರು ಅನತಗ್ಯವಾಗಿ ಹೇರಿದ ವಿಚಾರಗಳನ್ನು ಸಂವಿಧಾನದಿಂದ ತೆಗೆದು ಹಾಕಲು ಬಹುಮತದ ಅಗತ್ಯವಿದೆ. ಹೀಗಾಗಿ ಈ ಸಲ ಮೋದಿಯವರು 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನವರು ಸಂವಿಧಾನದ ಮೂಲರೂಪವನ್ನೇ ತಿರುಚಿದ್ದಾರೆ. ಸಂವಿಧಾನದಲ್ಲಿ ಬೇಡದೇ ಇರುವುದನ್ನೆಲ್ಲ ಸೇರಿಸಿದ್ದಾರೆ. ಇಡೀ ಹಿಂದೂ ಸಮಾಜವನ್ನು ದಮನಿಸುವ ರೀತಿ ಕಾನೂನು ತಂದಿದ್ದಾರೆ. ಇದೆಲ್ಲದರ ಬದಲಾವಣೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಬಹುಮತ ಪಡೆದರೆ ಮಾತ್ರ ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಶಾಸನ ಸಭೆಗಳಲ್ಲಿ ಕಾಂಗ್ರೆಸ್‌ನವರು ಹೆಚ್ಚು ಇದ್ದರೆ ಏನೇ ತಿದ್ದುಪಡಿ ತಂದರೂ ಪಾಸ್ ಆಗಲ್ಲ. ಸಿಎಎ ಜಾರಿಗೆ ರಾಜ್ಯಗಳಿಂದ ಒಪ್ಪಿಗೆ ಬಂದಿಲ್ಲ. ಸಿಎಎ ತರದಿದ್ದರೆ ದೇಶದಲ್ಲಿ ಕಾನೂನು ಸುವ್ಯವಸ್ಥೆ ನಮ್ಮ ಕೈಯಲ್ಲಿ ಇರಲ್ಲ. ಇದು ದೇಶದ್ರೋಹಿಗಳ ಆಡಂಬರ ಆಗುತ್ತದೆ. ದೇಶ ಸರಿ ಆಗಬೇಕೆಂದರೆ ನಮ್ಮವರಿಂದಲೇ ಹೊರತು ಬೇರೆ ಅವರಿಂದ ಆಗಲ್ಲ. ಎಲ್ಲೆಡೆ ಬಹುಮತ ಬರಲಿ, ಆ ಮೇಲೆ ನೋಡಿ ಮಾರಿಜಾತ್ರೆ ಹೇಗಿರುತ್ತೆ ಎಂದು, ಜಾತ್ರೆಗೆ ಒಂದು ಕಳೆ ಬರೋದು ಇದಾದ ನಂತರವೇ ಎಂದು ಅನಂತ್‌ ಕುಮಾರ್‌ ಹೆಗಡೆ ಬಾಯಿಗೆ ಬಂದಂತೆ ಮಾತನಾಡಿದ್ದು, ಸಂವಿಧಾನದ ಪ್ರಕಾರ ಲೋಕಸಭೆಗೆ ಆಯ್ಕೆಯಾಗಿ ಸಂಸದನಾಗಿದ್ದುಕೊಂಡು, ತನ್ನದೇ ಸ್ಥಾನಕ್ಕೆ ಧಕ್ಕೆ ಬರುವ ರೀತಿಯಲ್ಲಿ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯ ಬಳಿಕ 4 ವರ್ಷಗಳಿಂದ ತೆರೆಯ ಹಿಂದೆ ಸರಿದಿದ್ದ ಸಂಸದ ಅನಂತ್‌ ಕುಮಾರ್‌ ಹೆಗಡೆ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೆ ವಿವಾದಾತ್ಮಕ ಮತ್ತು ದ್ವೇಷದ ಹೇಳಿಕೆ ಮೂಲಕ ಸುದ್ದಿಯಾಗಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಿಂದ ನಿಂದಿಸಿ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಪೊಲೀಸರು ಇತ್ತೀಚೆಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು. ಕೆಲವು ದಿನಗಳ ಹಿಂದೆಯಷ್ಟೇ ಕುಮಟಾದಲ್ಲಿ ನಡೆದ ಸಭೆಯಲ್ಲಿ ಅನಂತಕುಮಾರ್‌ ಹೆಗಡೆ ಪ್ರಚೋದನಕಾರಿ ಮಾತನಾಡಿದ್ದಕ್ಕೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅಯೋಧ್ಯೆ ರಾಮಮಂದಿರ ವಿಚಾರವಾಗಿ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಅನಂತ್‌ ಕುಮಾರ್‌ ಹೆಗಡೆ ನಾಲಗೆ ಹರಿಯ ಬಿಟ್ಟಿದ್ದರು. ಭಟ್ಕಳ, ಶಿರಸಿ, ಶ್ರೀರಂಗಪಟ್ಟಣದ ಮಸೀದಿಗಳು ಹಿಂದೆ ದೇವಾಲಯಗಳಾಗಿದ್ದವು. ಅವುಗಳನ್ನು ಬಾಬರಿ ಮಸೀದಿ ರೀತಿಯಲ್ಲಿ ಹೊಡೆಯಬೇಕು ಎಂದು ಅನಂತ್‌ ಕುಮಾರ್‌ ಹೆಗಡೆ ಹೇಳಿದ್ದರು. ಅನಂತ್‌ ಕುಮಾರ್‌ ಹೆಗಡೆ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಹೇಳಿಕೆ ಜೊತೆಗೆ ಸಾಮಾಜಿಕ ಅಶಾಂತಿಗೆ ಕಾರಣವಾಗುವ ಮಾತುಗಳನ್ನಾಡಿರುವುದರಿಂದ ಸೆಕ್ಷನ್ 153ಎ ಮತ್ತು 505 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನು ಓದಿ: ಜೈಪುರ ರೈಲಿನಲ್ಲಿ RPF ಪೇದೆ ನಾಲ್ವರನ್ನು ಹತ್ಯೆ ಮಾಡುವಾಗ ಅಡಗಿ ಕುಳಿತಿದ್ದ ಪೇದೆಗಳು: ತಡವಾಗಿ ಕರ್ತವ್ಯದಿಂದ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...