Homeಕರ್ನಾಟಕಬಿಜೆಪಿ ತಂದಿದ್ದ 8 ಮನೆಹಾಳು ಕಾಯ್ದೆಗಳನ್ನು ಕಾಂಗ್ರೆಸ್ ಇನ್ನೂ ಮುಂದುವರೆಸಿದೆ: ನೂರ್ ಶ್ರೀಧರ್ ಆಕ್ರೋಶ

ಬಿಜೆಪಿ ತಂದಿದ್ದ 8 ಮನೆಹಾಳು ಕಾಯ್ದೆಗಳನ್ನು ಕಾಂಗ್ರೆಸ್ ಇನ್ನೂ ಮುಂದುವರೆಸಿದೆ: ನೂರ್ ಶ್ರೀಧರ್ ಆಕ್ರೋಶ

- Advertisement -
- Advertisement -

ಕೇಂದ್ರ ಬಜೆಟ್‌ ಸಂಪೂರ್ಣವಾಗಿ ಜನ ವಿರೋಧಿ ಹಾಗೂ ಕಾರ್ಪೊರೇಟ್‌ ಪರವಾಗಿದ್ದು, ರಾಜ್ಯದ ಹಕ್ಕುಗಳನ್ನು ಹರಣ ಮಾಡುವಂಥದ್ದಾಗಿದೆ ಎಂದು ಕರ್ನಾಟಕ ಜನಶಕ್ತಿಯ ನೂರ್‌ ಶ್ರೀಧರ್‌ ಆಕ್ರೋಶ ಗುರುವಾರ ವ್ಯಕ್ತಪಡಿಸಿದರು. ಬೆಂಗಳೂರಿನ ಗಾಂಧಿಭವನದಲ್ಲಿ ಆಯೋಜಿಸಿದ್ದ ಜನಚಳವಳಿ ಬಜೆಟ್‌ ಅಧಿವೇಶನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸರಕಾರಬದಲಾಗಿದ್ದರೂ ನೀತಿಗಳು ಬದಲಾಗಿಲ್ಲ. ಹಳೆಯ ನೀತಿಗಳನ್ನು ತಿರಸ್ಕರಿಸದೆಯೇ ಹೊಸ ಹಾದಿಯನ್ನು ತುಳಿಯುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರೆ ಅದನ್ನು ನಂಬಲು ಸಾಧ್ಯವಿಲ್ಲ ಎಂದು ಹೇಳಿದರು. ಬಿಜೆಪಿ ತಂದಿದ್ದ

ಬಿಜೆಪಿ ತಂದಿದ್ದ 8 ಮನೆಹಾಳು ಕಾಯ್ದೆಗಳನ್ನೂ ಮುಂದುವರೆಸುವ ಮೂಲಕ ಕಾಂಗ್ರೆಸ್‌ ನೀತಿಗೂ ಬಿಜೆಪಿ ನೀತಿಗೂ ಆರ್ಥಿಕ ವಿಚಾರದಲ್ಲಿ ಬದಲಾವಣೆ ಇಲ್ಲ ಎಂಬುದನ್ನು ಸರಕಾರ ಸ್ಪಷ್ಟವಾಗಿ ತೋರಿಸಿಕೊಂಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರವು ಕೃಷಿಯನ್ನು ಸಂಪೂರ್ಣವಾಗಿ ಖಾಸಗಿ ಕಾರ್ಪೋರೇಟುಗಳಿಗೆ ಒಪ್ಪಿಸಲು ಹಾತೊರೆಯುತ್ತಿದೆ. ಅಲ್ಲದೆ ಕಾರ್ಮಿಕ ವರ್ಗದ ಎಲ್ಲ ಹಕ್ಕುಗಳನ್ನು ಕಸಿದು ಗುಲಾಮಿ ಕಾರ್ಮಿಕರನ್ನು ಸೃಷ್ಟಿಸಲು ಬಯಸುತ್ತಿದೆ. ಜಿಎಸ್‌ಟಿ ಎಂಬುದು ಜನಸಾಮಾನ್ಯರನ್ನು ಸುಲಿಯುವ ಹಾಗೂ ರಾಜ್ಯದ ಸಂಪನ್ಮೂಲಗಳನ್ನೆಲ್ಲಾ ಸೂರೆಗೈದು ಅವನ್ನು ದೈನೇಸಿಯಾಗಿಸಿ ಬೇಡುವ ಸ್ಥಿತಿಗೆ ತಳ್ಳುವ ಲೂಟಿಕೋರ ಪದ್ದತಿಯಾಗಿದೆ. ಸೆಸ್‌ ಹಣವನ್ನೆಲ್ಲಾ ಕೇಂದ್ರವೇ ಕಬಳಿಸಿ ರಾಜ್ಯಗಳಿಗೆ ದ್ರೋಹಬಗೆಯಲಾಗುತ್ತಿದೆ ಎಂದು ಹೇಳಿದರು.

ಕೇಂದ್ರ ಬಜೆಟ್‌ ಮತ್ತು ನೀತಿಗಳು ಖಾಸಗೀಕರಣವನ್ನು ವೇಗಗೊಳಿಸುವ ಮತ್ತು ಕಲ್ಯಾಣ ಕ್ರಮಗಳಿಗೆ ಕತ್ತರಿ ಹಾಕುವ ಗುರಿಯನ್ನು ಹೊಂದಿವೆ. ಇವು ಶೋಷಿತ ಸಮುದಾಯಗಳ ಸಬಲೀಕರಣಕ್ಕೆ ಇದ್ದ ಎಲ್ಲ ಮಾರ್ಗಗಳನ್ನು ಮುಚ್ಚಿಹಾಕಿ, ಮೀಸಲಾತಿಯನ್ನು ಅಘೋಷಿತವಾಗಿ ರದ್ದುಮಾಡಿ, ಅವರನ್ನು ಮತ್ತೆ ಕತ್ತಲಕೂಪಕ್ಕೆ ತಳ್ಳುವ ಇರಾದೆಯನ್ನು ಹೊಂದಿವೆ ಎಂದರು.

ಕಾಂಗ್ರೆಸ್‌ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳನ್ನು ಸಂಪೂರ್ಣವಾಗಿ ಮರೆತಿದೆ. 5 ಗ್ಯಾರಂಟಿಗಳ ಗುಂಗಿನಲ್ಲೇ ಸರಕಾರ ತೇಲುತ್ತಿದೆ. ಜನ ವರ್ಗಗಗಳಿಗೆ ಕೊಟ್ಟಿದ್ದ ಭರವಸೆಗಳಲ್ಲಿ ಒಂದೇ ಒಂದು ಭರವಸೆಯನ್ನೂ ಈಡೇರಿಸದೆ, ಈಡೇರಿಸುವ ಸೂಚನೆಯನ್ನೂ ನೀಡದೆ ದ್ರೋಹ ಬಗೆದಿದೆ. ಯಾವುದೇ ಸ್ಪಷ್ಟ ನೀತಿ ಮತ್ತು ದಿಕ್ಕು ಇಲ್ಲದ ಬಜೆಟ್‌ ಇದಾಗಿದೆ. ಜನಪರ ಅಭಿವೃದ್ದಿಯ ರೋಡ್‌ ಮ್ಯಾಪ್‌ ಇಲ್ಲದ ಬಜೆಟ್‌ ಇದಾಗಿದೆ ಎಂದು ನೂರ್‌ ಶ್ರೀಧರ್ ಅವರು ಹೇಳಿದರು.

ರಾಜ್ಯ ಸರ್ಕಾರದ ಬೆಂಗಳೂರು ಮತ್ತು ಕಾರ್ಪೋರೇಟ್‌ ಕೇಂದ್ರಿತ ಬಜೆಟ್‌ ಆಗಿದೆ. ಕೃಷಿ ಬಿಕ್ಕಟ್ಟನ್ನು ಬಗೆಹರಿಸಲಿಕ್ಕಾಗಲೀ, ರೈತರನ್ನು ಋಣಮುಕ್ತರನ್ನಾಗಿಸಲಿಕ್ಕಾಗಲೀ, ರೈತರ ಬೆಳೆಗೆ ನ್ಯಾಯಸಮ್ಮತ ಬೆಲೆ ದಕ್ಕಿಸಿಕೊಡಲಿಕ್ಕಾಗಲೀ, ಕಾರ್ಮಿಕರಿಗೆ ಘನತೆಯ ವೇತನ ಖಾತ್ರಿ ಪಡಿಸಲಿಕ್ಕಾಗಲೀ, ಉದ್ಯೋಗ ಸೃಷ್ಟಿಸಲಿಕ್ಕಾಗಲೀ, ಕನಿಷ್ಟ ವೇತನವನ್ನು ಖಾತ್ರಿಪಡಿಸಲಿಕ್ಕಾಗಲೀ, ತಳ ಸಮುದಾಯಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಾಗಲೀ, ಬಡವರಿಗೆ ಭೂಮಿ ಮತ್ತು ವಸತಿ ಒದಗಿಸಲಿಕ್ಕಾಗಲೀ ಯಾವುದೇ ನಿರ್ಧಿಷ್ಟ ಕ್ರಮಗಳಿಲ್ಲ ಎಂದು ಅವರು ಹೇಳಿದರು.

ಎರಡು ದಿನಗಳ ಕಾಲ ನಡೆದ ಜನಚಳವಳಿಗಳ ಅಧಿವೇಶನದಲ್ಲಿ ಸಂಯುಕ್ತ ಹೋರಾಟದ ಪದಾಧಿಕಾರಿಗಳಾದ ಬಡಗಲಪುರ ನಾಗೇಂದ್ರ, ಯಶ್ವಂತ ಟಿ., ಕೆ.ವಿ.ಭಟ್‌, ವರಲಕ್ಷ್ಮೀ, ಚಾಮರಸ ಪಾಟೀಲ್‌, ಮಾವಳ್ಳಿ ಶಂಕರ್‌, ಗುರುಪ್ರಸಾದ್‌ ಕೆರಗೋಡು ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಭಾಲ್ ಅಧಿಕಾರಿಯಿಂದ ಮುಸ್ಲಿಮರ ಕುರಿತು ವಿವಾದಾತ್ಮಕ ಹೇಳಿಕೆ: ಟೀಕಿಸಿದ ಮುಸ್ಲಿಂ ಯುವಕನ ಬಂಧನ

ಸಂಭಾಲ್ ಅಧಿಕಾರಿಯಿಂದ ಮುಸ್ಲಿಮರ ಕುರಿತು ವಿವಾದಾತ್ಮಕ ಹೇಳಿಕೆ: ಟೀಕಿಸಿದ ಮುಸ್ಲಿಂ ಯುವಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...