Homeಕರ್ನಾಟಕಸಚಿವ ಈಶ್ವರಪ್ಪ ವಿರುದ್ಧ 40% ಕಮೀಷನ್‌ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಉಡುಪಿ ಲಾಡ್ಜ್‌‌ನಲ್ಲಿ ಶವವಾಗಿ...

ಸಚಿವ ಈಶ್ವರಪ್ಪ ವಿರುದ್ಧ 40% ಕಮೀಷನ್‌ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಉಡುಪಿ ಲಾಡ್ಜ್‌‌ನಲ್ಲಿ ಶವವಾಗಿ ಪತ್ತೆ

- Advertisement -
- Advertisement -

ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ 40% ಕಮೀಷನ್‌‌ ಆರೋಪ ಮಾಡಿದ್ದ ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್ ಅವರು ಉಡುಪಿಯ ಲಾಡ್ಜ್‌ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮಂಗಳವಾರ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದ್ದು, ನಿನ್ನೆ ತಡರಾತ್ರಿಯೆ ಅವರು ಆತ್ಮಹತ್ಯೆ ನೋಟ್ ಬರೆದು ಅದನ್ನು ಮಾಧ್ಯಮ ಪತ್ರಿನಿಧಿಗಳಿಗೆ ಕಳುಹಿಸಿದ್ದರು ಎನ್ನಲಾಗಿದೆ.

ಅವರು ಬರೆದಿದ್ದಾರೆ ಎಂದು ಎನ್ನಲಾಗಿರುವ ಡೆತ್‌ನೋಟ್‌‌‌‌ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಅವರಲ್ಲಿ ಅವರು, “ನನ್ನ ಸಾವಿಗೆ ನೇರ ಕಾರಣ ಸಚಿವ ಕೆ.ಎಸ್. ಈಶ್ವರಪ್ಪ. ಅವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ” ಎಂದು ಬರೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನನ್ನ ಹೆಂಡತಿ ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನಮಂತ್ರಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಹಾಗೆ ಅವರಿವರಿಂದನೆ ಎಲ್ಲರು ಸಹಾಯ ಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು” ಎಂದು ಬರೆದಿದ್ದಾರೆ.

ಪತ್ರದಲ್ಲಿ ಅವರು “ನನ್ನ ಜೊತೆ ಬಂದ ನನ್ನ ಗೆಳಯರಾದ ಸಂತೋಷ ಮತ್ತು ಪ್ರಶಾಂತ್‌ಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕಳೆದುಕೊಂಡ ಬಂದಿರುತ್ತೆನೆ ಅಷ್ಟೆ. ಅವರಿಗೆ ನನ್ನ ಸಾವಿನ ಬಗ್ಗೆ ಯಾವುದೆ ಸಂಬಂಧ ಇರುವುದಿಲ್ಲ” ಎಂದು ಪತ್ರವನ್ನು ಕೊನೆಗೊಳಿಸಿದ್ದಾರೆ.

ಗುತ್ತಿಗೆದಾರರಾಗಿದ್ದ ಸಂತೋಷ್ ಪಾಟಿಲ್ ಅವರು ಸಚಿವ ಈಶ್ವರಪ್ಪ ಅವರು 40 ಪರ್ಸಂಟೇಜ್‌‌ ಕಮೀಷನ್‌ ಕೇಳಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ಈ ವಿವಾದ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಉಂಟು ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104

ಇದನ್ನೂ ಓದಿ: ಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶ್ರೀಮಾನ್ ಬೊಮ್ಮಾಯಿ ಅವರು ಈಗಲೂ ಸುಮ್ಮನಿರುತ್ತಾರಾ….? ಅಥವಾ ಮಾತನಾಡದೇ ಕೆಲಸದ ಮೂಲಕ ಉತ್ತರ ಕೊಡ್ತಾರಾ,..

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...