110 ಕೆಜಿ ಗಾಂಜಾದೊಂದಿಗೆ ಪ್ರಯಾಣಿಸುತ್ತಿದ್ದ ಬಿಜೆಪಿಯ ಸಕ್ರಿಯ ಕಾರ್ಯಕರ್ತನನ್ನು ಆಂಧ್ರಪ್ರದೇಶದಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಕೇರಳದ ಪಾಲಕ್ಕಾಡ್‌ನ ಕೊಡುಂಬ್ ಕರಿಂಕಾರಪುಳ್ಳಿಯ ನಿವಾಸಿ ರಾಜು (30) ಎಂದು ಗುರುತಿಸಲಾಗಿದೆ. ಆರೋಪಿಯು ಬಿಜೆಪಿಯ ಸಕ್ರಿಯ ಕಾರ್ಯಕರ್ತ ಎಂದು ಮಾಧ್ಯಮಗಳು ವರದಿ ಮಾಡಿವೆ.
ಆರೋಪಿಯನ್ನು ಆಂಧ್ರಪ್ರದೇಶದ ತುನಿಯಲ್ಲಿ ಬಂಧಿಸಲಾಗಿದೆ. ಬಂಧನದ ಸಮಯದಲ್ಲಿ ಆರೋಪಿಯು 110 ಕೆಜಿ ಗಾಂಜಾದೊಂದಿಗೆ ತನ್ನ ಗ್ಯಾಂಗ್ ಸದಸ್ಯರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದನು ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಆರೋಪಿಯ ಬಂಧನದ ಸಮಯದಲ್ಲಿ ಆಂಧ್ರ ಮೂಲದ ಇಬ್ಬರು ಸಹ ಪ್ರಯಾಣಿಕರನ್ನು ಬಂಧಿಸಲಾಗಿದೆ. ಈ ವೇಳೆ ಕಾರಿನಲ್ಲಿ ಇದ್ದ ನಾಲ್ಕನೇ ವ್ಯಕ್ತಿ, ಕರಕ್ಕಾಡ್‌ನ ಮಾರುತ ರಸ್ತೆ ನಿವಾಸಿ ಪರಾರಿಯಾಗಿದ್ದಾನೆ.
ಇದನ್ನೂ ಓದಿ: ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆ: ಮಸೀದಿ ವೀಕ್ಷಣೆ ಪ್ರವಾಸ ರದ್ದು ಮಾಡಿದ ಶಿಶುವಿಹಾರ
ಪರಾರಿಯಾಗಿರುವ ಆರೋಪಿಯನ್ನು ಪತ್ತೆ ಹಚ್ಚಲು ಆಂಧ್ರ ಪೊಲೀಸರು ಪಾಲಕ್ಕಾಡ್ ದಕ್ಷಿಣ ಪೊಲೀಸರ ಸಹಾಯವನ್ನು ಕೋರಿದ್ದಾರೆ ಎಂದು ವರದಿ ಹೇಳಿದೆ. ದಕ್ಷಿಣ ಪೊಲೀಸ್ ಠಾಣೆಯಲ್ಲಿ ರಾಜು ವಿರುದ್ಧ ವಿವಿಧ ಪ್ರಕರಣಗಳು ದಾಖಲಾಗಿವೆ.


