ಸಹೋದ್ಯೋಗಿ ಮಹಿಳೆಯೊಬ್ಬರಿಗೆ ಬಿಜೆಪಿ ಕಚೇರಿಯಲ್ಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ಕಾರ್ಯಕರ್ತನ ವಿರುದ್ದ ಮುಂಬೈಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮಹಿಳೆ ನೀಡಿದ ದೂರಿನ ಪ್ರಕಾರ, ಕಳೆದ ವರ್ಷ ಅವರು ಪಕ್ಷವನ್ನು ಸೇರಲು ಪ್ರಯತ್ನಿಸುತ್ತಿದ್ದಾಗ ಈ ಘಟನೆ ನಡೆದಿತ್ತು.
ಆರೋಪಿಯು ಮಹಿಳೆಯನ್ನು ಬಿಜೆಪಿಯ ಸದಸ್ಯೆಯಾಗಲು ಸಹಾಯ ಮಾಡುವುದಾಗಿ ಭರವಸೆ ನೀಡಿದ್ದನು. ಇದಕ್ಕಾಗಿ ಮಹಿಳೆಯನ್ನು ಮುಂಬೈ ಉಪನಗರದ ಬೋರಿವಾಲಿಯಲ್ಲಿರುವ ಬಿಜೆಪಿಯ ಕಾರ್ಪೋರೇಟ್ ಕಚೇರಿಗೆ ಕರೆದುಕೊಂಡು ಹೋಗಿದ್ದನು. ಈ ವೇಳೆ ಕಚೇರಿಯಲ್ಲೆ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಆರೋಪಿ ಬಿಜೆಪಿ ಕಾರ್ಯಕರ್ತನ ವಿರುದ್ದ ಐಪಿಸಿ ಸೆಕ್ಷನ್ 354 (ಲೈಂಗಿಕ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಅವರು ಹೇಳಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ರೋಹಿಂಗ್ಯಾ ನಿರಾಶ್ರಿತರಿಗೆ ದೆಹಲಿ ಸರ್ಕಾರ ಸೌಲಭ್ಯಗಳನ್ನು ಒದಗಿಸಿದೆ ಎಂದು ಸುಳ್ಳು ಸುದ್ದಿ ಹಂಚುತ್ತಿರುವ ಬಿಜೆಪಿ
ಇದನ್ನೂ ಓದಿ: ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ – ಫೇಕ್, ಸುಳ್ಳು ಮತ್ತು ತಿರುಚುವಿಕೆಯೇ `ಜೀವಾಳ’


