Homeಮುಖಪುಟಕೋಝಿಕ್ಕೋಡ್: ವಿಜಯೋತ್ಸವದ ನಡುವೆ 'ಮೀಡಿಯಾ ಒನ್ ಟಿವಿ' ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತರಿಂದ ದಾಳಿ; ವರದಿ

ಕೋಝಿಕ್ಕೋಡ್: ವಿಜಯೋತ್ಸವದ ನಡುವೆ ‘ಮೀಡಿಯಾ ಒನ್ ಟಿವಿ’ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತರಿಂದ ದಾಳಿ; ವರದಿ

- Advertisement -
- Advertisement -

ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಕೇರಳದಲ್ಲಿ ಮಲಯಾಳಂ ಸುದ್ದಿ ವಾಹಿನಿ ಮೀಡಿಯಾ ಒನ್ ಕೇಂದ್ರ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ ಆರೋಪ ಕೇಳಿ ಬಂದಿದೆ.

ವಿಜಯೋತ್ಸವದ ನೆಪದಲ್ಲಿ ಕೋಝಿಕ್ಕೋಡ್‌ನ ಮೀಡಿಯಾ ಒನ್ ಕಚೇರಿ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಕಚೇರಿಯ ಕಾಂಪೌಂಡ್ ಒಳಗೆ ಪಟಾಕಿ ಎಸೆದು ಹಾನಿಗೊಳಿಸಿದ್ದು, ಸ್ಟುಡಿಯೋಗೆ ನುಗ್ಗಲು ಯತ್ನಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ.

ಬಿಜೆಪಿ ಧ್ವಜ ಹಿಡಿದ ಕೆಲ ವ್ಯಕ್ತಿಗಳು ಗೇಟ್‌ಗೆ ಒದ್ದು ಒಳ ನುಗ್ಗಲು ಯತ್ನಿಸಿದ ವಿಡಿಯೋ ವೈರಲ್ ಆಗಿದೆ.

ಆರ್‌ಎಸ್‌ಎಸ್ ಮತ್ತು ಆಡಳಿತಾರೂಢ ಬಿಜೆಪಿಯಯನ್ನು ಟೀಕಿಸಿ ವರದಿ ಮಾಡಿದ ಬೆನ್ನಲ್ಲೇ ಮೀಡಿಯಾ ಒನ್‌ ಸುದ್ದಿ ವಾಹಿನಿಯ ಪ್ರಸಾರಕ್ಕೆ 2022ರಲ್ಲಿ ಕೇಂದ್ರ ಸರ್ಕಾರ ನಿಷೇಧ ಹೇರಿತ್ತು. ಇದರ ವಿರುದ್ದ ಮೀಡಿಯಾ ಒನ್‌ ಕಾನೂನು ಹೋರಾಟ ನಡೆಸಿದ ಕಾರಣ ಸುಪ್ರೀಂ ಕೋರ್ಟ್ ನಿಷೇಧವನ್ನು ತೆಗೆದು ಹಾಕಿತ್ತು. ಕೇಂದ್ರದ ಕ್ರಮ ‘ನಿರಂಕುಶ ಮತ್ತು ಅನ್ಯಾಯ’ ಎಂದು ಹೇಳಿತ್ತು.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಲಯಾಳಂನ ಜನಪ್ರಿಯ ನಟ ಸುರೇಶ್ ಗೋಪಿ ಅವರು ತ್ರಿಶೂರ್ ಕ್ಷೇತ್ರದಿಂದ 74,686 ಮತಗಳ ಅಂತರದೊಂದಿಗೆ ಗೆಲ್ಲುವ ಮೂಲಕ ಕೇರಳದಲ್ಲಿ ಎನ್‌ಡಿಎ ಒಕ್ಕೂಟದ ಖಾತೆ ತೆರೆದಿದ್ದಾರೆ. ಈ ಹಿನ್ನೆಲೆ ರಾಜ್ಯದ ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.

ಇದನ್ನೂ ಓದಿ : ಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ: ನಿತೀಶ್‌, ನಾಯ್ಡುಗೆ ಮಮತಾ ಬ್ಯಾನರ್ಜಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...