Homeಮುಖಪುಟ'ಕರಾಚಿ ಬೇಕರಿ' ಮೇಲೆ ದಾಳಿ ನಡೆಸಿದ ಬಿಜೆಪಿ ಕಾರ್ಯಕರ್ತರು: ಹೆಸರು ಬದಲಿಸಲು ಒತ್ತಡ

‘ಕರಾಚಿ ಬೇಕರಿ’ ಮೇಲೆ ದಾಳಿ ನಡೆಸಿದ ಬಿಜೆಪಿ ಕಾರ್ಯಕರ್ತರು: ಹೆಸರು ಬದಲಿಸಲು ಒತ್ತಡ

- Advertisement -
- Advertisement -

ಭಾರತ-ಪಾಕಿಸ್ತಾನ ಉದ್ವಿಗ್ನತೆಯ ನಡುವೆ ಹೈದರಾಬಾದ್‌ನ ‘ಕರಾಚಿ ಬೇಕರಿ’ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಬಿಜೆಪಿ ಕಾರ್ಯಕರ್ತರ ಗುಂಪು ‘ಭಾರತ್ ಮಾತಾಕಿ ಜೈ’ ಎಂಬ ಘೋಷಣೆ ಕೂಗುತ್ತಾ ಹೈದರಾಬಾದ್‌ನ ಶಂಶಾಬಾದ್‌ನಲ್ಲಿರುವ ಕರಾಚಿ ಬೇಕರಿಯ ಶಾಖೆ ಮೇಲೆ ದಾಳಿ ಮಾಡಿದ್ದಾರೆ. ಮೇ. 10, ಶನಿವಾರ ಈ ಘಟನೆ ನಡೆದಿದೆ.

ಪಾಕಿಸ್ತಾನದ ನಗರ ಕರಾಚಿಯ ಹೆಸರನ್ನು ಹೊಂದಿರುವ ಕರಾಚಿ ಬೇಕರಿಯನ್ನು 1953ರಲ್ಲಿ ಖಾನ್‌ಚಂದ್ ರಾಮನಾನಿ ಎಂಬ ಸಿಂಧಿ ಹಿಂದೂ ವ್ಯಕ್ತಿ ಸ್ಥಾಪಿಸಿದರು, ಅವರು ದೇಶ ವಿಭಜನೆಯ ಸಮಯದಲ್ಲಿ ಭಾರತಕ್ಕೆ ವಲಸೆ ಬಂದವರು. ಪ್ರಸ್ತುತ ರಾಮನಾನಿ ಅವರ ಮೊಮ್ಮಕ್ಕಳಾದ ಹರೀಶ್ ಮತ್ತು ರಾಜೇಶ್ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ.

ಕೇಸರಿ ಶಾಲು ಧರಿಸಿ, ಕೈಯಲ್ಲಿ ಭಾರತದ ರಾಷ್ಟ್ರಧ್ವಜ ಹಿಡಿದುಕೊಂಡ ಪುರುಷರ ಗುಂಪೊಂದು ಕೋಲುಗಳಿಂದ ‘ಕರಾಚಿ ಬೇಕರಿ’ಯ ಸೈನ್‌ ಬೋರ್ಡ್‌ಗೆ ಹೊಡೆದು ಹಾನಿಗೊಳಿಸಿದ ವಿಡಿಯೋ ಸಾಮಾಜಿಕ ಮಾಧ್ಯಗಳಲ್ಲಿ ವೈರಲ್ ಆಗಿದೆ.

“ಭಾರತ್ ಮಾತಾಕಿ ಜೈ”, “ಪಾಕಿಸ್ತಾನ್ ಮುರ್ದಾಬಾದ್” ಮತ್ತು “ಜೈ ಜವಾನ್” ಎಂಬ ಘೋಷಣೆಗಳನ್ನು ದಾಳಿ ನಡೆಸಿದವರು ಕೂಗಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಶಂಶಾಬಾದ್ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ (ಆರ್‌ಜಿಐ) ವಿಮಾನ ನಿಲ್ದಾಣ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಕೆ. ಬಾಲರಾಜು, “ಬೇಕರಿ ಮೇಲೆ ದಾಳಿ ಮಾಡಿದವರು ಬಿಜೆಪಿ ಬೆಂಬಲಿಗರು. ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಹೆಚ್ಚಿನ ದಾಳಿ ತಡೆದಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 126 ಮತ್ತು ಆಸ್ತಿ ಹಾನಿಗೆ ಸಂಬಂಧಿಸಿದ ಇತರ ಸೆಕ್ಷನ್‌ಗಳಡಿಯಲ್ಲಿ ಅವರ ವಿರುದ್ದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

‘ಕರಾಚಿ ಬೇಕರಿ’ಯನ್ನು ಬಲಪಂಥೀಯರು ಈ ಹಿಂದೆಯೂ ಗುರಿ ಮಾಡಿದ್ದರು. ಪಾಕಿಸ್ತಾನದ ಹೆಸರನ್ನು ಬದಲಾಯಿಸುವಂತೆ ಅದರ ಮಾಲೀಕರಿಗೆ ಒತ್ತಡ ಹೇರುತ್ತಿದ್ದರು. ಇತ್ತೀಚೆಗೆ ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನತೆ ಉಂಟಾದ ಬಳಿಕ, ತಮ್ಮ ಸಂಸ್ಥೆಗೆ ರಕ್ಷಣೆ ಒದಗಿಸುವಂತೆ ಕರಾಚಿ ಬೇಕರಿಯ ಮಾಲೀಕರು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಜಿತೇಂದರ್ ಅವರಿಗೆ ಮನವಿ ಮಾಡಿದ್ದರು. ಈ ಬೆನ್ನಲ್ಲೇ ಬೇಕರಿ ಮೇಲೆ ದಾಳಿ ನಡೆದಿದೆ.

ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನತೆ ಸೃಷ್ಟಿಯಾದ ಬಳಿಕ ತನ್ನ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಹೇಳಿಕೆಯೊಂದನ್ನು ನೀಡಿದ್ದ ಕರಾಚಿ ಬೇಕರಿ, “ನಾವು ಹೆಮ್ಮೆಯಿಂದ ಭಾರತೀಯರು. ನಮ್ಮ ಹೆಸರು ನಮ್ಮ ಇತಿಹಾಸದ ಭಾಗವಾಗಿದೆ, ನಮ್ಮ ರಾಷ್ಟ್ರೀಯತೆಯಲ್ಲ” ಎಂದು ಹೇಳಿಕೊಂಡಿತ್ತು.

 

View this post on Instagram

 

A post shared by Karachi Bakery (@karachibakery)

ಹೈದರಾಬಾದ್ ಸೇರಿದಂತೆ ತೆಲಂಗಾಣದ ಪ್ರಮುಖ ನಗರಗಳು ಮತ್ತು ಇತರ ರಾಜ್ಯಗಳಲ್ಲಿ ವ್ಯಾಪಿಸಿರುವ ಕರಾಚಿ ಬೇಕರಿ, ಬಿಸ್ಕೇಟ್‌ ಮತ್ತು ಇತರ ಕರಿದ ತಿಂಡಿಗಳಿಗೆ ಪ್ರಸಿದ್ದಿಯನ್ನು ಪಡೆದಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಹೈದರಾಬಾದ್‌ನ ಬಲಪಂಥೀಯ ಗುಂಪುಗಳ ಸದಸ್ಯರು ಹಲವಾರು ಕರಾಚಿ ಬೇಕರಿ ಮಳಿಗೆಗಳ ಸೈನ್‌ಬೋರ್ಡ್‌ಗಳಲ್ಲಿ ಭಾರತದ ರಾಷ್ಟ್ರ ಧ್ವಜವನ್ನು ಹಾಕುತ್ತಿದ್ದಾರೆ. ವಿಶಾಖಪಟ್ಟಣಂನ ಬಲಪಂಥೀಯ ಗುಂಪು ಕೂಡ ಮೇ 6 ರಂದು ಅಂಗಡಿಯೊಂದರಲ್ಲಿ ಪ್ರತಿಭಟನೆಗೆ ಕರೆ ನೀಡಿತ್ತು, ಸಂಸ್ಥೆಯು ಕರಾಚಿ ಎಂಬ ಹೆಸರನ್ನು ಬದಲಾಯಿಸಲು ಒತ್ತಾಯಿಸಿತ್ತು.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಕುರಿತ ಟ್ರೋಲ್ ವಿರೋಧಿಸಿದ ಅಸಾದುದ್ದೀನ್ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...