Homeಮುಖಪುಟಕೇರಳ: ಆಸ್ಪತ್ರೆಗೆ ತೆರಳುತ್ತಿದ್ದ ಗರ್ಭಿಣಿಯ ಕಾರನ್ನು ತಡೆದು ಪತಿಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತರು

ಕೇರಳ: ಆಸ್ಪತ್ರೆಗೆ ತೆರಳುತ್ತಿದ್ದ ಗರ್ಭಿಣಿಯ ಕಾರನ್ನು ತಡೆದು ಪತಿಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತರು

- Advertisement -
- Advertisement -

ಎನ್‌ಡಿಎ ಅಭ್ಯರ್ಥಿಯ ಚುನಾವಣಾ ಪ್ರಚಾರ ರ್‍ಯಾಲಿಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ಆಸ್ಪತ್ರೆಗೆ ತುರ್ತಾಗಿ ತೆರಳುತ್ತಿದ್ದ ಗರ್ಭಿಣಿ ಮತ್ತು ಅವರ ಕುಟುಂಬಿಕರಿದ್ದ ಕಾರನ್ನು ತಡೆದು, ಕಾರಲ್ಲಿದ್ದ ಗರ್ಭಿಣಿಯ ಪತಿಯನ್ನು ಹೊರಗೆಳೆದು ಹಲ್ಲೆ ನಡೆಸಿದ ಘಟನೆ ಕೇರಳದ ಕಲ್ಯಾಸೇರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ತುರ್ತಾಗಿ ಆಸ್ಪತ್ರೆಗೆ ತೆರಳುತ್ತಿದ್ದ ಕಾರನ್ನು ದುಷ್ಕರ್ಮಿಗಳು ಒಂದು ಗಂಟೆ ತಡೆದು ನಿಲ್ಲಿಸಿ ಗರ್ಭಿಣಿ ಮಹಿಳೆಯ ಗಂಡನ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯನ್ನು ನೋಡುತ್ತಿದ್ದ ಗರ್ಭಿಣಿಯು ಅಘಾತಗೊಂಡು ಕುಸಿದು ಬಿದ್ದಿದ್ದಾರೆ ಎಂದು ದೇಶಾಭಿಮಾನಿ ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ: ಕೇರಳದಲ್ಲಿನ ಏಕೈಕ ಬಿಜೆಪಿ ಖಾತೆಯನ್ನೂ ಕ್ಲೋಸ್ ಮಾಡುತ್ತೇವೆ: ಪಿಣರಾಯಿ ವಿಜಯನ್

ಘಟನೆಯು ಸಂಜೆ 6 ಗಂಟೆಗೆ ನಡೆದಿದ್ದು, ಸ್ಥಳೀಯರಾದ ಗರ್ಭಿಣಿ ನಜೀಲ್ ಮತ್ತು ಕುಟುಂಬ ಆಸ್ಪತ್ರೆಗೆ ತೆರಳುತ್ತಿದ್ದಾಗ ಬಿಜೆಪಿ ಕಾರ್ಯಕರ್ತರು ಇದ್ದಕ್ಕಿದ್ದಂತೆ ಕಾರನ್ನು ತಡೆದು ನಿಲ್ಲಿಸಿದ್ದಾರೆ. ಗರ್ಭಿಣಿಗೆ ಭ್ರೂಣದಲ್ಲಿ ಸಮಸ್ಯೆಗಳಿದ್ದ ಕಾರಣ ವೈದ್ಯರ ಸಲಹೆಯ ಮೇರೆಗೆ ಪಯ್ಯನ್ನೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು.

ನಜೀಲ್ ಅವರ ಗಂಭೀರ ಆರೋಗ್ಯ ಸ್ಥಿತಿಯ ಬಗ್ಗೆ ಬಿಜೆಪಿ ಕಾರ್ಯಕರ್ತರೊಂದಿಗೆ ಕೇಳಿಕೊಂಡರೂ, ಅವರನ್ನು ಕದಲಲು ನಿರಾಕರಿಸಿದರು ಎನ್ನಲಾಗಿದೆ. ಇಷ್ಟೇ ಅಲ್ಲದೆ ಕಾರಿನ ಗಾಜನ್ನು ಪುಡಿ ಮಾಡಿದ ಬಿಜೆಪಿ ಕಾರ್ಯಕರ್ತರು ನಜೀಲ್ ಅವರ ಪತಿ ಅಬ್ದುಲ್ ಮುನೀರ್ ಅವರನ್ನು ಹೊರಗೆ ಎಳೆದುಕೊಂಡು ಹಲ್ಲೆ ನಡೆಸಿದ್ದಾರೆ. ಇದನ್ನು ನೋಡಿದ ಗರ್ಭಿಣಿಯು ಅಘಾತಗೊಂಡು ಕಾರಿನಲ್ಲೇ ಕುಸಿದುಬಿದ್ದಿದ್ದಾರೆ.

ಘಟನೆ ನಡೆದು ಒಂದು ಗಂಟೆಯ ನಂತರವೇ ವಾಹನಕ್ಕೆ ಹೋಗಲು ಅನುಮತಿ ನೀಡಲಾಯಿತು. ನಜೀಲ್ ಅವರನ್ನು ಪಯ್ಯನ್ನೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಪತಿ ಅಬ್ದುಲ್ ರೆಹಮಾನ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ರೋಡ್ ಶೋ ಸಮಯದಲ್ಲಿ ಬಿಜೆಪಿ ಕಾರ್ಯಕರ್ತರು ಹಲವಾರು ಕಾರುಗಳ ಮೇಲೆ ದಾಳಿ ನಡೆಸಿದ್ದು, ಘಟನಾ ಸ್ಥಳದಲ್ಲಿದ್ದ ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆ ಎಂದು ದೇಶಾಭಿಮಾನಿ ಪತ್ರಿಕೆ ತನ್ನ ವರದಿಯಲ್ಲಿ  ಉಲ್ಲೇಖಿಸಿದೆ.

ಇದನ್ನೂ ಓದಿ: ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...