Homeಮುಖಪುಟಡಾ. ಮಂಜುನಾಥ್ ಬೆಂಬಲಿಗನ ತೋಟಕ್ಕೆ ಬೆಂಕಿಯಿಟ್ಟ ಆರೋಪ: ಸುಳ್ಳು ಎಂದು ವಿಡಿಯೋ ಹಂಚಿಕೊಂಡ ಕಾಂಗ್ರೆಸ್

ಡಾ. ಮಂಜುನಾಥ್ ಬೆಂಬಲಿಗನ ತೋಟಕ್ಕೆ ಬೆಂಕಿಯಿಟ್ಟ ಆರೋಪ: ಸುಳ್ಳು ಎಂದು ವಿಡಿಯೋ ಹಂಚಿಕೊಂಡ ಕಾಂಗ್ರೆಸ್

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಬಿಜೆಪಿ (ಮೈತ್ರಿ ಅಭ್ಯರ್ಥಿ) ಅಭ್ಯರ್ಥಿ ಡಾ.ಸಿ.ಎನ್‌ ಮಂಜುನಾಥ್ ಅವರ ಬೆಂಬಲಿಗ ರೈತನ ತೋಟಕ್ಕೆ ಕಾಂಗ್ರೆಸ್ಸಿಗರು ಅಥವಾ ಡಿ.ಕೆ ಸುರೇಶ್ ಬೆಂಬಲಿಗರು ಬೆಂಕಿಯಿಟ್ಟಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ಇದನ್ನು ಅಲ್ಲಗಳೆದಿರುವ ಕಾಂಗ್ರೆಸ್‌, ವಿಡಿಯೋ ಹಂಚಿಕೊಂಡಿದೆ.

ಇಂದು (ಏ.16) ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ಬಿಜೆಪಿ, “ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಕೊತ್ವಾಲ್ ಗ್ಯಾಂಗ್ ಆ್ಯಕ್ಟಿವ್ ಆಗಿದೆ‌. ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಆ ದಿನಗಳ ಗೂಂಡಾಗಳು ಈ ದಿನಗಳಲ್ಲೇ ಬೆಂಕಿ ಹಿಡಿದು ಭಸ್ಮ ಮಾಡಲು ನಿಂತಿದ್ದಾರೆ. ಡಾ. ಸಿ. ಎನ್. ಮಂಜುನಾಥ್ ಅವರನ್ನು ಕುಣಿಗಲ್ ತಾಲೂಕಿನ ರೈತ ಪ್ರೇಮ್ ಕುಮಾರ್ ಬೆಂಬಲಿಸಿದ ಕಾರಣಕ್ಕೆ ತೋಟವನ್ನೇ ಸುಟ್ಟು ಕರಕಲು ಮಾಡಿದ್ದಾರೆ. ಒಂದು ಕಡೆ ಚುನಾವಣಾ ಅಧಿಕಾರಿಗಳಿಂದ ಊಟ ಬಡಿಸಿಕೊಳ್ಳುವ ಉಪಮುಖ್ಯಮಂತ್ರಿಗಳು, ಎಲ್ಲೆಡೆ ಮತದಾರರನ್ನು ಬೆದರಿಸುತ್ತಾ ಧಮ್ಕಿ ಹಾಕಿದ ಪರಿಣಾಮವೇ ಈ ಘಟನೆಗೆ ಕಾರಣ” ಎಂದು ಆರೋಪಿಸಿತ್ತು.

ಈ ಆರೋಪ ಸುಳ್ಳು ಎಂದು ಕಾಂಗ್ರೆಸ್‌ ಮತ್ತೊಂದು ವಿಡಿಯೋ ಹಂಚಿಕೊಂಡಿದೆ. “ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಜೆಪಿ ತನ್ನ ಫೇಕ್ ಫ್ಯಾಕ್ಟರಿಗೆ ಹೆಚ್ಚಿನ ಕೆಲಸ ಕೊಟ್ಟು ಹಗಲೂ ರಾತ್ರಿ ದುಡಿಯುತ್ತಿದೆ. ಬೆಂಕಿ ಹೇಗೆ ಹತ್ತಿದೆ ಎಂದು ಆರೋಪಿಸಿದ ರೈತನಿಗೆ ಗೊತ್ತಿಲ್ಲ, ಬೆಂಕಿ ಯಾರು ಹಚ್ಚಿದರು ಎನ್ನುವುದೂ ಆತನಿಗೆ ಗೊತ್ತಿಲ್ಲ” ಎಂದಿದೆ.

“ಹೇಡಿಯ ಕೊನೆಯ ಅಸ್ತ್ರ ಅಪಪ್ರಚಾರ ಎನ್ನುವಂತೆ ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರಿಗಳು ಸೇರಿ ಆತನಿಗೆ ಬೆದರಿಕೆ ಒಡ್ಡಿ ಕಾಂಗ್ರೆಸ್‌ನವರ ಮೇಲೆ, ಗೆಲುವಿನ ಸಮೀಪದಲ್ಲಿರುವ ಡಿ.ಕೆ ಸುರೇಶ್ ಅವರ ಮೇಲೆ, ಡಿ.ಕೆ ಶಿವಕುಮಾರ್ ಅವರ ಮೇಲೆ ನಕಲಿ ಅಸ್ತ್ರ ಪ್ರಯೋಗಿಸಿದ್ದಾರೆ. ಆದರೆ, ಅದೇ ವ್ಯಕ್ತಿಯಿಂದ ಜೆಡಿಎಸ್, ಬಿಜೆಪಿಯ ಕುತಂತ್ರಗಳು ಬಯಲಾಗಿದೆ” ಎಂದು ಹೇಳಿದೆ. “ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಆಧಾರ ರಹಿತ ಸುಳ್ಳು ಆಪಾದನೆಗಳನ್ನು ವ್ಯಾಪಕವಾಗಿ ಮಾಡುತ್ತಿದ್ದರೂ ಕ್ರಮ ಕೈಗೊಳ್ಳದೇ ಸುಮ್ಮನಿರುವುದೇಕೆ?” ಎಂದು ಚುನಾವಣಾ ಆಯೋಗವನ್ನು ಪ್ರಶ್ನಿಸಿದೆ.

ಬಿಜೆಪಿ ಹಂಚಿಕೊಂಡ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ತನ್ನ ತೋಟಕ್ಕೆ ಕಾಂಗ್ರೆಸಿಗರು ಬೆಂಕಿ ಹಚ್ಚಿದ್ದಾರೆ ಎಂದು ಹೇಳುವುದನ್ನು ಕೇಳಬಹುದು. ಆದರೆ, ಆ ವ್ಯಕ್ತಿಯ ಮುಖ ಕಾಣುತ್ತಿಲ್ಲ. ಕಾಂಗ್ರೆಸ್‌ ಹಂಚಿಕೊಂಡಿರುವ ವಿಡಿಯೋದಲ್ಲಿ, ಮೊದಲು ವ್ಯಕ್ತಿಯೊಬ್ಬರು ತನ್ನ ತೋಟಕ್ಕೆ ಕಾಂಗ್ರೆಸ್‌ನವರು ಬೆಂಕಿ ಹಚ್ಚಿದ್ದಾರೆ ಎಂದು ಹೇಳಿರುವುದು ಮತ್ತು ಅದೇ ವ್ಯಕ್ತಿ ಜೆಡಿಎಸ್‌ನವರು ಬೆದರಿಸಿ ಹೀಗೆ ಹೇಳಿಸಿದ್ದಾರೆ ಎಂದಿರುವುದು ಇದೆ. ಇಲ್ಲಿ ಸತ್ಯ ಯಾವುದು ಎಂಬುವುದು ಸೂಕ್ತ ತನಿಖೆಯಿಂದ ತಿಳಿದು ಬರಬೇಕಿದೆ.

ಇದನ್ನೂ ಓದಿ : ‘ನಮ್ಮದು ಪ್ರಜಾಪ್ರಭುತ್ವ; ಪ್ರಧಾನಮಂತ್ರಿ ಏಕಚಕ್ರಾಧಿಪತಿ ಅಲ್ಲ..’; ದೇವೇಗೌಡರಿಗೆ ‘ಫೆಡರಲಿಸಂ’ ಪಾಠ ಮಾಡಿದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...