Homeಮುಖಪುಟಬಿಜೆಪಿ ಮೈತ್ರಿ ಬಿಡಿ ಎಂದ ಅಖಿಲೇಶ್ ಯಾದವ್; ಎಮೆರ್ಜೆನ್ಸಿ ನೆನಪಿಸಿದ ಜೆಡಿಯು!

ಬಿಜೆಪಿ ಮೈತ್ರಿ ಬಿಡಿ ಎಂದ ಅಖಿಲೇಶ್ ಯಾದವ್; ಎಮೆರ್ಜೆನ್ಸಿ ನೆನಪಿಸಿದ ಜೆಡಿಯು!

- Advertisement -
- Advertisement -

ಬಿಜೆಪಿ ನೇತೃತ್ವದ ಆಡಳಿತಾರೂಢ ಎನ್‌ಡಿಎ ತೊರೆಯುವಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಜೆಡಿಯು ಪಕ್ಷದ ಹಿರಿಯ ಸದಸ್ಯ ಕೆ.ಸಿ. ತ್ಯಾಗಿ ತುರ್ತು ಪರಿಸ್ಥಿತಿಯನ್ನು ಅಖಿಲೇಶ್ ಅವರಿಗೆ ನೆನಪಿಸಿ ಕಾಂಗ್ರೆಸ್‌ನೊಂದಿಗೆ ಮೈತ್ರಿಯನ್ನು ನೀವೆ ಕೊನೆಗೊಳಿಸಿ ಎಂದು ಹೇಳಿದ್ದಾರೆ. ಬಿಜೆಪಿ ಮೈತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಷ್ಟ್ರೀಯ ನಾಯಕ ಜೈ ಪ್ರಕಾಶ್ ನಾರಾಯಣ್ ಅವರ 122 ನೇ ಜನ್ಮ ವಾರ್ಷಿಕೋತ್ಸವದಂದು ಅವರ ಸ್ಮಾರಕಕ್ಕೆ ಭೇಟಿ ನೀಡುವುದನ್ನು ಉತ್ತರ ಪ್ರದೇಶ ಪೊಲೀಸರು ತಡೆದ ನಂತರ ಲಕ್ನೋದಲ್ಲಿನ ತಮ್ಮ ನಿವಾಸದ ಹೊರಗೆ ಸಮಾಜವಾದಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಯಾದವ್ ಈ ಹೇಳಿಕೆ ನೀಡಿದ್ದಾರೆ. ಬಿಜೆಪಿ ಮೈತ್ರಿ

ಇದನ್ನೂಓದಿ: ಫೈರಿಂಗ್ ಅಭ್ಯಾಸದ ವೇಳೆ ಫೀಲ್ಡ್ ಗನ್ ಶೆಲ್ ಸ್ಫೋಟ; ನಾಸಿಕ್‌ನಲ್ಲಿ ಇಬ್ಬರು ಅಗ್ನಿವೀರ್‌ಗಳ ಸಾವು

“ಜೈ ಪ್ರಕಾಶ್ ನಾರಾಯಣ್ ನೇತೃತ್ವದ ಚಳವಳಿಯು ಕಾಂಗ್ರೆಸ್‌ನ ಸರ್ವಾಧಿಕಾರದ ವಿರುದ್ಧವಾಗಿತ್ತು. ಜೂನ್ 25 (1975) ರಂದು ತುರ್ತು ಪರಿಸ್ಥಿತಿಯನ್ನು ಹೇರಲಾಯಿತು. ಅಭಿವ್ಯಕ್ತಿ ಸ್ವಾತಂತ್ರ್ಯ ಇರಲಿಲ್ಲ. ಅಖಿಲೇಶ್ ಯಾದವ್ ಅವರ ಹೇಳಿಕೆಯು ಅನುಚಿತವಾಗಿದೆ…” ಎಂದು ಕೆಸಿ ತ್ಯಾಗಿ ಹೇಳಿದ್ದಾರೆ.

“ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಅವರ ತಂದೆ (ಮುಲಾಯಂ ಸಿಂಗ್ ಯಾದವ್) ಮತ್ತು ನಿತೀಶ್ ಕುಮಾರ್ ಇಬ್ಬರೂ ಜೈಲು ಪಾಲಾಗಿದ್ದರು ಎಂದು ನಾನು ಅವರಿಗೆ ನೆನಪಿಸಲು ಬಯಸುತ್ತೇನೆ. ಜನರ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿದ ಮತ್ತು ಎಲ್ಲಾ ಪ್ರಜಾಸತ್ತಾತ್ಮಕ ಮಾನದಂಡಗಳನ್ನು ಉಲ್ಲಂಘಿಸುವ ಪಕ್ಷದೊಂದಿಗೆ ಅವರು ತಮ್ಮ ಪಾಲುದಾರಿಕೆಯನ್ನು ಕೊನೆಗೊಳಿಸಬೇಕು” ಎಂದು ತ್ಯಾಗಿ ಹೇಳಿದ್ದಾರೆ.

ವಿರೋಧ ಪಕ್ಷದ ಇಂಡಿಯಾ ಒಕ್ಕೂಟವನ್ನು ಕಾಂಗ್ರೆಸ್ ಮುನ್ನಡೆಸುತ್ತಿದ್ದು, ಸಮಾಜವಾದಿ ಪಕ್ಷವು ಅದರ ಸದಸ್ಯ ಪಕ್ಷವಾಗಿದೆ. ಈ ವರ್ಷದ ಲೋಕಸಭೆ ಚುನಾವಣೆಯಲ್ಲಿ, ಬಿಜೆಪಿ ಅಧಿಕಾರದಲ್ಲಿರುವ ಉತ್ತರ ಪ್ರದೇಶದ 80 ಸ್ಥಾನಗಳಲ್ಲಿ ಉಭಯ ಪಕ್ಷಗಳು ಸೇರಿ 43 (ಸಮಾಜವಾಗಿ ಪಕ್ಷ-37, ಕಾಂಗ್ರೆಸ್-6) ಕ್ಷೇತ್ರಗಳನ್ನು ಗೆದ್ದಿವೆ. ಮೈತ್ರಿಯು ಬಿಜೆಪಿಯನ್ನು 33 ಕ್ಷೇತ್ರಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದೆ. 2019ರಲ್ಲಿ ಬಿಜೆಪಿ 62 ಲೋಕಸಭೆ ಕ್ಷೇತ್ರವನ್ನು ಗೆದ್ದುಕೊಂಡಿತ್ತು, 2014 ರಲ್ಲಿ 71 ಕ್ಷೇತ್ರಗಳು ಬಿಜೆಪಿಯ ವಶದಲ್ಲಿತ್ತು.

ವಿಡಿಯೊ ನೋಡಿ: ಮಂಗಳೂರು ಪೊಲೀಸರೆಂದರೆ ಲಂಚ ಲಂಚ ಲಂಚ. ನನ್ನ ಬಳಿ ಸಾಕ್ಷ್ಯ ಇದೆ.- ಎಡಿಜಿಪಿ ಅಲೋಕ್ ಕುಮಾರ್ ಎದುರು ಮಹಿಳೆಯ ದೂರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...