HomeUncategorizedಪುದುಚೇರಿಯಲ್ಲಿ ಹೊಸ ಇತಿಹಾಸ ಬರೆದ ಬಿಜೆಪಿ ಮೈತ್ರಿ

ಪುದುಚೇರಿಯಲ್ಲಿ ಹೊಸ ಇತಿಹಾಸ ಬರೆದ ಬಿಜೆಪಿ ಮೈತ್ರಿ

- Advertisement -
- Advertisement -

ಪಂಚರಾಜ್ಯ ಚುನಾವಣೆಗಳ ಪೈಕಿ ಪುದುಚೇರಿ ಚುನಾವಣೆ ಸಹ ತನ್ನದೇ ಆದ ಕಾರಣಕ್ಕಾಗಿ ಸಾಕಷ್ಟು ಮಹತ್ವ ಪಡೆದುಕೊಂಡಿತ್ತು. ಪಂಚರಾಜ್ಯಗಳ ಪೈಕಿ ಕೋಲ್ಕತ್ತಾ, ಕೇರಳ, ಅಸ್ಸಾಂ ಹಾಗೂ ತಮಿಳುನಾಡಿಗೆ ೫ ವರ್ಷದ ನಂತರ ಎಂದಿನಂತೆ ವಿಧಾನಸಭೆ ಚುನಾವಣೆ ಎದುರಾಗಿದ್ದರೆ, ಪುದುಚೇರಿಗೆ ಮಾತ್ರ ಆಪರೇಷನ್ ಕಮಲದ ಕಾರಣಕ್ಕೆ ಚುನಾವಣೆ ಎದುರಾಗಿತ್ತು. ಹೀಗಾಗಿ ಪುದುಚೇರಿಯಲ್ಲಿ ಚುನಾವಣೆ ನಂತರ ಮತ್ತೆ ಯಾವ ಸರ್ಕಾರ ಅದಿಕಾರಕ್ಕೆ ಬರಲಿದೆ ಎಂಬ ಬಗ್ಗೆ ರಾಜಕೀಯ ವಠಾರಗಳಲ್ಲಿ ಸಾಮಾನ್ಯ ಕುತೂಹಲವೊಂದು ಮನೆ ಮಾಡಿತ್ತು.

ಅನೇಕ ರಾಜ್ಯಗಳಲ್ಲಿ ಅನೇಕ ಬಾರಿ ಬಿಜೆಪಿ ಚುನಾವಣೆ ಎದುರಿಸಿ ಅಧಿಕಾರ ಹಿಡಿದದ್ದಕ್ಕಿಂತ ಆಪರೇಷನ್ ಕಮಲದ ಸಹಾಯದಿಂದ ಹಿಂಬಾಗಿಲ ಮೂಲಕ ಅಧಿಕಾರವನ್ನು ಹಿಡಿದದ್ದೆ ಹೆಚ್ಚು. ಬಿಜೆಪಿ ಪಕ್ಷದ ಈ ಸಾಂಪ್ರದಾಯಿಕ ಸೂತ್ರಕ್ಕೆ ಈಗ ಪುದುಚೇರಿಯೂ ಬಲಿಯಾಗಿದೆ. ಏಕೆಂದರೆ ಬಿಜೆಪಿ ಪಾಲಿಗೆ ದಕ್ಷಿಣ ಭಾರತದಲ್ಲಿ ಕರ್ನಾಟಕದ ಹೊರತು ಬೇರೆ ಎಲ್ಲೂ ಭದ್ರ ನೆಲೆ ಇಲ್ಲ. ಹೀಗಾಗಿ ಮತ್ತೊಂದು ಆವಾಸ ಸ್ಥಾನಕ್ಕೆ ಕಾಯ್ದಿದ್ದ ಬಿಜೆಪಿ ಕಣ್ಣಿಗೆ ಬಿದ್ದದ್ದು ತಮಿಳುನಾಡು ಮತ್ತು ಪುದುಚೇರಿ.

224 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮತ್ತು ಪೆರಿಯಾರ್ ಚಿಂತನೆಗಳಿಗೆ ಗಟ್ಟಿಯಾಗಿಯೇ ಅಂಟಿಕೊಂಡಿರುವ ದ್ರಾವಿಡ ನಾಡಿನಲ್ಲಿ ಬಿಜೆಪಿಯ ಕೇಸರಿ ರಾಜಕಾರಣದ ಆಟ ನಡೆಯದು ಎಂಬ ವಿಚಾರ ಕಮಲ ಪಾಳಯಕ್ಕೆ ತಿಳಿಯದ ವಿಚಾರ ಏನಲ್ಲ. ಇದೇ ಕಾರಣಕ್ಕೆ ೩೦ ಕ್ಷೇತ್ರಗಳಿರುವ ಪಕ್ಕದ ಪುದುಚೇರಿಯನ್ನು ಹಿಡಿದರೆ, ಹಂತ ಹಂತವಾಗಿ ಹಿಂದುತ್ವದ ಹೆಸರಿನಲ್ಲಿ ತಮಿಳುನಾಡಿನಲ್ಲೂ ಅಧಿಕಾರ ಸಾಧ್ಯ ಎಂಬುದು ಬಿಜೆಪಿಯ ಲೆಕ್ಕಾಚಾರ. ಇದೇ ಕಾರಣಕ್ಕೆ ಕಳೆದ ಜನವರಿಯಲ್ಲಿ ಬಿಜೆಪಿ ನಾಯಕರು ವಿ. ನಾರಾಯಣ ಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಆಪರೇಷನ್ ಕಮಲದ ಮೂಲಕ ಬೀಳಿಸಿ ಇದೀಗ ತಮ್ಮ ಜಂಡಾ ಹಾರಿಸಲು ಮುಂದಾಗಿದೆ ಬಿಜೆಪಿ.

ಹಿಂಬಾಗಿಲಲ್ಲಿ ಪುದುಚೇರಿ ಹಿಡಿದ ಬಿಜೆಪಿ
ಪುದುಚೇರಿ ಕೇಂದ್ರಾಡಳಿತ ಪ್ರದೇಶವಾದರೂ ಸಹ ತಮಿಳುನಾಡಿನಿಂದ ಕೂಗಳತೆ ದೂರದಲ್ಲಿರುವ ಈ ಪ್ರದೇಶಕ್ಕೆ ಸಾಂಸ್ಕೃತಿಕ ರೀತಿನೀತಿಗಳಲ್ಲಿ ಹೆಚ್ಚೇನು ವ್ಯತ್ಯಾಸ ಇಲ್ಲ. ಸಾಂಸ್ಕೃತಿಕವಾಗಿ ಮತ್ತು ಸಾಮಾಜಿಕವಾಗಿ ಈ ಎರಡೂ ನಾಡುಗಳಿಗೆ ಸಾಕಷ್ಟು ಹೋಲಿಕೆಗಳಿವೆ. ಈ ಎರಡೂ ಭೂ ಪ್ರದೇಶವನ್ನು ತಮಿಳು ಭಾಷೆ ಬೆಸೆಯುವುದಲ್ಲದೆ, ಪೆರಿಯಾರ್ ಸಿದ್ದಾಂತಗಳ ಪ್ರಭಾವವೂ ಈ ಭಾಗದಲ್ಲಿ ಸಾಕಷ್ಟಿದೆ. ಹೀಗಾಗಿ ತಮಿಳುನಾಡಿನಂತೆಯೇ ಇಲ್ಲಿಯೂ ಬಿಜೆಪಿ ನೆಲೆಯೂರುವುದು ಅಷ್ಟು ಸುಲಭದ ವಿಚಾರವಾಗಿರಲಿಲ್ಲ. ಇದಕ್ಕೆ ಈ ಹಿಂದಿನ ಚುನಾವಣೆಗಳು ಸಾಕಷ್ಟು ಸಾಕ್ಷಿ ಒದಗಿಸುತ್ತವೆ.

ವಿ. ನಾರಾಯಣ ಸ್ವಾಮಿ ಅವರ ಕಾಂಗ್ರೆಸ್ ಸರ್ಕಾರಕ್ಕೆ ಇಕ್ಕಟ್ಟಾದ ಪರಿಸ್ಥಿತಿ ನಿರ್ಮಾಣ ಮಾಡುವ ಸಲುವಾಗಿಯೇ ತಮಿಳುನಾಡಿನ ಬಿಜೆಪಿ ನಾಯಕಿ ತಮಿಳಿಸೈ ಸೌಂದರ್ ರಾಜನ್ ಅವರನ್ನು ಪುದುಚೇರಿಯ ಹೊಸ ಗೌರ್ನರ್ ಆಗಿ ನೇಮಕ ಮಾಡಲಾಗಿತ್ತು. ತಮಿಳಿಸೈ ಸೌಂದರ್ ರಾಜನ್ ಒಂದೆಡೆ ತಮ್ಮ ಅಧಿಕಾರವನ್ನು ಬಳಸಿಕೊಂಡು ವಿ. ನಾರಾಯಣ ಸ್ವಾಮಿ ಸರ್ಕಾರವನ್ನು ಇನ್ನಿಲ್ಲದಂತೆ ಕಾಡಿದರೆ, ಮತ್ತೊಂದೆಡೆ ಬಿಜೆಪಿ ಸದ್ದಿಲ್ಲದೆ ತಮ್ಮ ಎಂದಿನ ಸಾಂಪ್ರದಾಯಿಕ ಆಪರೇಷನ್ ಕಮಲವನ್ನು ಜಾರಿಗೆ ತಂದಿತ್ತು. (ಇದಕ್ಕೂ ಮೊದಲು ರಾಜ್ಯಪಾಲರಾಗಿದ್ದ ಕಿರಣ ಬೇಡಿ ಮತ್ತು ನಾರಾಯಣಸ್ವಾಮಿಯವರ ಸರ್ಕಾರಕ್ಕೂ ಹಲವು ಜಟಾಪಟಿಗಳಾಗಿದ್ದವು). 6ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರನ್ನು ಕೊಂಡುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿತ್ತು. ಪರಿಣಾಮ ಸರ್ಕಾರ ಬಹುಮತ ಕಳೆದುಕೊಂಡಿತ್ತು. ಇದೀಗ ಬಿಜೆಪಿ ಮೊದಲ ಬಾರಿಗೆ ಪುದುಚೇರಿಯಲ್ಲಿ ಅಧಿಕಾರದ ರುಚಿ ಅನುಭವಿಸಲು ಮುಂದಾಗಿದೆ. ಆದರೆ, ಇದಕ್ಕೂ ಸಹ ಕಾಂಗ್ರೆಸ್ ಪಕ್ಷದ ಎಡವಟ್ಟಿನ ನಿರ್ಣಯಗಳೇ ಕಾರಣ ಎಂದರೆ ತಪ್ಪಾಗಲಾರದು.

ಬಿಜೆಪಿ ವರದಾನವಾದ ಕಾಂಗ್ರೆಸ್ ಎಡವಟ್ಟು
30 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಪುದುಚೇರಿಯಲ್ಲಿ ಸರ್ಕಾರ ರಚಿಸಲು ಬೇಕಾಗಿರುವ ಮ್ಯಾಜಿಕ್ ನಂಬರ್ 16. ಈ ಪೈಕಿ ಬಿಜೆಪಿ 6 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರೆ ಬಿಜೆಪಿ ಮೈತ್ರಿ ಪಕ್ಷವಾದ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ 10ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಬಿಜೆಪಿ ಮೈತ್ರಿ ಮೊದಲ ಬಾರಿಗೆ ಪುದುಚೇರಿಯಲ್ಲಿ ಅಧಿಕಾರದ ಗದ್ದುಗೆ ಏರಿದೆ. ಆದರೆ, ಸ್ಥಳೀಯ ಪಕ್ಷವಾದ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಅಧಿಕಾರಕ್ಕೆ ಏರುತ್ತಿರುವುದು ಇದೇ ಮೊದಲೇನಲ್ಲ. ಎನ್. ರಂಗಸ್ವಾಮಿ ಕಾಂಗ್ರೆಸ್‌ನಿಂದ ಹೊರಬಂದು 2011ರಲ್ಲೇ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಪಕ್ಷ ಕಟ್ಟಿ, ಮೊದಲ ಚುನಾವಣೆಯಲ್ಲೇ ಬಹುಮತಗಳಿಸಿ ಅಧಿಕಾರಕ್ಕೆ ಬಂದಿದ್ದರು. ಇದೀಗ ಐದನೇ ಬಾರಿ ಸಿಎಂ ಪಟ್ಟಕ್ಕೆ ಏರಿದ್ದಾರೆ. ಅವರು ಎನ್‌ಡಿಎ ಮೈತ್ರಿಯ ಭಾಗವಾಗಿರುವ ಕಾರಣವಷ್ಟೆ ಇಲ್ಲಿ ಬಿಜೆಪಿಗೆ ಅಧಿಕಾರ ಸಿಕ್ಕಿದಂತಾಗಿದೆ. ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಹೆಸರಿನಲ್ಲಿ ಬಿಜೆಪಿಗೆ ಮತ ಲಭಿಸಿದೆ ಎಂದರೂ ತಪ್ಪಾಗಲಾರದು.

ಅಸಲಿಗೆ ಎನ್. ರಂಗಸ್ವಾಮಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕ. ಹಲವು ದಶಕಗಳಿಂದ ಅಧಿಕಾರ ಡಿಎಂಕೆ ಮತ್ತು ಎಡಿಎಂಕೆ ಕೈಲಿದ್ದ ಪುದುಚೇರಿಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಎನ್. ರಂಗಸ್ವಾಮಿ ಪ್ರಮುಖ ಕಾರಣಕರ್ತರಾಗಿದ್ದರು. 2001ರಿಂದ 2008ರವರೆಗೆ ಎರಡು ಅವಧಿಗೆ ಸಿಎಂ ಆಗಿದ್ದ ಅವರು ಹಲವು ಜನಪ್ರಿಯ ಯೋಜನೆಗಳ ಮೂಲಕ ಮನೆಮಾತಾಗಿದ್ದರು. ಒಂದು ಹಂತದಲ್ಲಿ ಪುದುಚೇರಿಯ ಕಾಮರಾಜ್, ಜನರ ಸಿಎಂ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದರು. ಪುದುಚೇರಿ ಮಟ್ಟಿಗೆ ಅವರನ್ನು ಅಜಾತಶತ್ರು ಎಂದೇ ಕರೆಯಲಾಗಿತ್ತು.

ಆದರೆ, 2008ರಲ್ಲಿ ಪಕ್ಷದ ಆಂತರಿಕ ರಾಜಕಾರಣದ ನೆಪ ಹೇಳಿ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲಾಗಿತ್ತು. ಇದರಿಂದ ಕುಪಿತಗೊಂಡ ರಂಗಸ್ವಾಮಿಯವರು ಆಲ್ ಇಂಡಿಯಾ ಎನ್. ಆರ್ ಕಾಂಗ್ರೆಸ್ ಪಕ್ಷವನ್ನು ಸ್ಥಾಪಿಸಿ ಮೊದಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ಅಧಿಕಾರ ಹಿಡಿದಿದ್ದು ಇಂದು ಇತಿಹಾಸ. ಈ ಘಟನೆಯ ನಂತರ ಕಾಂಗ್ರೆಸ್‌ನಿಂದ ಶಾಶ್ವತವಾಗಿ ದೂರವಾದ ಎನ್. ರಂಗಸ್ವಾಮಿ ಎನ್‌ಡಿಎ ಜೊತೆ ಮೈತ್ರಿ ಸಾಧಿಸಿದ್ದರು. ಇಂದು ಅವರ ಮೂಲಕವೇ ಕೋಮುವಾದಿ ಬಿಜೆಪಿ ದ್ರಾವಿಡ ನಾಡಿನ ಪಕ್ಕದಲ್ಲೇ ಜಂಡಾ ಹಾರಿಸುವಂತಾದದ್ದು ಮಾತ್ರ ವಿಪರ್ಯಾಸ.


ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...