Homeಮುಖಪುಟವಕ್ಫ್‌ ಮಸೂದೆಯಲ್ಲಿ ಬಿಜೆಪಿ ಮಿತ್ರಪಕ್ಷ ಟಿಡಿಪಿ ಪ್ರಮುಖ ಬದಲಾವಣೆ ಕೋರುವ ಸಾಧ್ಯತೆ.. ಏನದು?

ವಕ್ಫ್‌ ಮಸೂದೆಯಲ್ಲಿ ಬಿಜೆಪಿ ಮಿತ್ರಪಕ್ಷ ಟಿಡಿಪಿ ಪ್ರಮುಖ ಬದಲಾವಣೆ ಕೋರುವ ಸಾಧ್ಯತೆ.. ಏನದು?

- Advertisement -
- Advertisement -

ವಿವಾದಾತ್ಮಕ ವಕ್ಫ್‌ (ತಿದ್ದುಪಡಿ) ಮಸೂದೆ-2024 ಇಂದು (ಏಪ್ರಿಲ್ 2) ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಕ್ಕೂಟಗಳು ಮಸೂದೆಯ ಪರ-ವಿರೋಧ ಚರ್ಚೆಗೆ ಸಜ್ಜಾಗಿದೆ. ಇಡೀ ದೇಶದ ಚಿತ್ತ ಸಂಸತ್ತಿನತ್ತ ನೆಟ್ಟಿದೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಪ್ರಮುಖ ಮಿತ್ರ ಪಕ್ಷವಾಗಿರುವ ತೆಲುಗು ದೇಶಂ ಪಕ್ಷ (ಟಿಡಿಪಿ), ವಕ್ಫ್ ಮಸೂದೆಯಲ್ಲಿ ಒಂದು ಪ್ರಮುಖ ತಿದ್ದುಪಡಿ ಕೋರುವ ಸಾಧ್ಯತೆ ಇದೆ.

ಮಂಗಳವಾರ (ಏಪ್ರಿಲ್ 1) ತನ್ನ 16 ಸಂಸದರಿಗೆ ಲೋಕಸಭೆಯಲ್ಲಿ ಹಾಜರಿರಬೇಕು ಮತ್ತು ಸರ್ಕಾರವನ್ನು ಬೆಂಬಲಿಸಬೇಕೆಂದು ವಿಪ್ ಜಾರಿ ಮಾಡಿರುವ ಟಿಡಿಪಿ, ರಾಜ್ಯ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರಿಗೆ ಅವಕಾಶ ನೀಡುವ ಮಸೂದೆಯ ವಿವಾದಾತ್ಮಕ ಅಂಶದ ಕುರಿತು ಬದಲಾವಣೆ ಕೋರುವ ನಿರೀಕ್ಷೆಯಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಾಜ್ಯ ವಕ್ಫ್‌ ಮಂಡಳಿಗಳಲ್ಲಿ ಮುಸ್ಲಿಮೇತರರ ಪ್ರಾತಿನಿಧ್ಯದ ವಿಷಯವನ್ನು ಆಯಾ ರಾಜ್ಯಗಳ ವಿವೇಚನೆಗೆ ಬಿಡಬೇಕೆಂದು ಟಿಡಿಪಿ ಕೇಂದ್ರ ಸರ್ಕಾರತವನ್ನು ಸರ್ವಾನುಮತದಿಂದ ಒತ್ತಾಯಿಸಲಿದೆ ಎಂದು ಅದರ ಮೂಲವೊಂದನ್ನು ಉಲ್ಲೇಖಿಸಿ ಇಂಡಿಯನ್‌ ಎಕ್ಸ್‌ಪ್ರೆಸ್‌ ಹೇಳಿದೆ.

ವಕ್ಫ್ ಮಂಡಳಿಗಳಲ್ಲಿ ಮಹಿಳೆಯರ ಸೇರ್ಪಡೆ ಸೇರಿದಂತೆ ಮಸೂದೆಯ ಇತರ ಎಲ್ಲಾ ತಿದ್ದುಪಡಿಗಳನ್ನು ಟಿಡಿಪಿ ಬೆಂಬಲಿಸಲಿದೆ. ಮಹಿಳೆಯರ ಪ್ರಾತಿನಿಧ್ಯ ಪ್ರಗತಿಪರ ಬದಲಾವಣೆ ಎಂಬುವುದು ಪಕ್ಷದ ಅಭಿಪ್ರಾಯ ಎಂದು ವರದಿ ವಿವರಿಸಿದೆ.

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಸೇರಿದಂತೆ ಟಿಡಿಪಿ ನಾಯಕರು ಮಂಗಳವಾರ ಮಧ್ಯರಾತ್ರಿಯವರೆಗೂ ವಕ್ಫ್‌ ತಿದ್ದುಪಡಿ ಮಸೂದೆ ಕುರಿತು ಚರ್ಚೆ ನಡೆಸಿದ್ದಾರೆ. ಮಸೂದೆಯ ನಿಬಂಧನೆಗಳು ಮತ್ತು ಅದರ ಪರಿಣಾಮಗಳ ಕುರಿತು ಕಾನೂನು ತಜ್ಞರೊಂದಿಗೆ ಸಮಾಲೋಚಿಸಿದ್ದಾರೆ. ನಾಯ್ಡು ಅವರು ಮುಸ್ಲಿಂ ಗುಂಪುಗಳೊಂದಿಗೆ ತಮಗೆ ಯಾವುದು ಸ್ವೀಕಾರಾರ್ಹ ಮತ್ತು ಯಾವುದು ಸ್ವೀಕಾರಾರ್ಹವಲ್ಲ ಎಂಬುದನ್ನು ನೋಡಲು ಮಾತುಕತೆ ನಡೆಸಿದ್ದಾರೆ.

ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರನ್ನು ಸೇರಿಸುವುದಕ್ಕೆ ಟಿಡಿಪಿಯ ವಿರೋಧವು, ‘ವಕ್ಫ್ ಕಾಯ್ದೆಯಲ್ಲಿನ ಬದಲಾವಣೆಗಳು ಆಂಧ್ರ ಪ್ರದೇಶದ ಮುಸ್ಲಿಂ ಸಮುದಾಯದ ಮೇಲೆ ಪರಿಣಾಮ ಬೀರುವುದಿಲ್ಲ’ ಎಂದು ಪಕ್ಷವು ನೀಡಿದ ಭರವಸೆ ಎಂದು ಪರಿಗಣಿಸಬೇಕು. ನಾವು ಬೆಂಬಲಿಸುತ್ತಿರುವುದು ಮುಸ್ಲಿಂ ಸಮುದಾಯಕ್ಕೆ ಪ್ರಯೋಜನಕಾರಿಯಾದ ಪ್ರಗತಿಪರ ಬದಲಾವಣೆಗಳು ಮಾತ್ರ ಟಿಡಿಪಿ ಮೂಲಗಳು ಹೇಳಿರುವುದಾಗಿ ವರದಿ ತಿಳಿಸಿದೆ.

ಕಳೆದ ಮಾರ್ಚ್‌ನಲ್ಲಿ ನಡೆದ ಇಫ್ತಾರ್‌ ಸಂಗಮದಲ್ಲಿ ಟಿಡಿಪಿ ಮುಸ್ಲಿಂ ಸಮುದಾಯದ ಹಿತದೃಷ್ಟಿಯಿಂದ ಕೆಲಸ ಮಾಡುತ್ತದೆ ಎಂದು ಸಿಎಂ ಚಂದ್ರಬಾಬು ನಾಯ್ಡು ಭರವಸೆ ನೀಡಿದ್ದರು. ತಮ್ಮ ಸರ್ಕಾರ ವಕ್ಫ್ ಆಸ್ತಿಗಳನ್ನು ರಕ್ಷಿಸಲು ಬದ್ಧವಾಗಿದೆ ಎಂದು ನಾಯ್ಡು ಹೇಳಿದ್ದರು. ಟಿಡಿಪಿ ಆಡಳಿತದಲ್ಲಿ ಮುಸ್ಲಿಂ ಸಮುದಾಯಕ್ಕೆ ನ್ಯಾಯ ದೊರಕಿದೆ. ಎನ್‌ಡಿಎ ಅಧಿಕಾರದಲ್ಲಿದ್ದರೆ ಮುಸ್ಲಿಮರು ಅಭಿವೃದ್ದಿಯಾಗುತ್ತಾರೆ ಎಂದಿದ್ದರು.

ಆಂಧ್ರದಲ್ಲಿ ಟಿಡಿಪಿಗೆ ಮುಸ್ಲಿಮರು ನಿರ್ಣಾಯಕ ಮತಬ್ಯಾಂಕ್ ಆಗಿದ್ದಾರೆ.

ವಕ್ಫ್ (ತಿದ್ದುಪಡಿ) ಮಸೂದೆಯ ಪ್ರಕಾರ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ವಿವಿಧ ವಕ್ಫ್ ಮಂಡಳಿಗಳಿಗೆ ಸಲಹೆ ನೀಡುವ ಕೇಂದ್ರ ವಕ್ಫ್ ಕೌನ್ಸಿಲ್ ಮುಸ್ಲಿಮೇತರ ಸದಸ್ಯರನ್ನು ಹೊಂದಬಹುದು.
ವಕ್ಫ್‌ ಇಲಾಖೆಯ ಉಸ್ತುವಾರಿ ವಹಿಸುವ ಕೇಂದ್ರ ಸಚಿವರು ಕೌನ್ಸಿಲ್‌ನ ಪದನಿಮಿತ್ತ ಅಧ್ಯಕ್ಷರಾಗಿರುತ್ತಾರೆ.

ಪ್ರಸ್ತುತ ವಕ್ಫ್‌ ಕಾಯ್ದೆಯ ಪ್ರಕಾರ ಎಲ್ಲಾ ಕೌನ್ಸಿಲ್ ಸದಸ್ಯರು ಮುಸ್ಲಿಮರಾಗಿರಬೇಕು ಮತ್ತು ಕನಿಷ್ಠ ಇಬ್ಬರು ಮಹಿಳಾ ಸದಸ್ಯರು ಇರಬೇಕು. ಆದರೆ, ತಿದ್ದುಪಡಿ ಮಸೂದೆಯು ಸಂಸದರು, ಮಾಜಿ ನ್ಯಾಯಾಧೀಶರು ಮತ್ತು ಕಾಯ್ದೆಯ ಪ್ರಕಾರ ಪರಿಷತ್ತಿಗೆ ನೇಮಕಗೊಂಡ ಗಣ್ಯ ವ್ಯಕ್ತಿಗಳು ಮುಸ್ಲಿಮರಾಗಿರಬೇಕಾಗಿಲ್ಲ ಎಂದು ಹೇಳುತ್ತದೆ.

ತಿದ್ದುಪಡಿ ಮಸೂದೆಯಲ್ಲಿ ಸೂಚಿಸಲಾದ ಇತರ ಬದಲಾವಣೆಗಳಲ್ಲಿ ವಕ್ಫ್‌ ಕಾಯ್ದೆಯ ಹೆಸರನ್ನು “ಏಕೀಕೃತ ವಕ್ಫ್ ನಿರ್ವಹಣೆ, ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ ಕಾಯ್ದೆ-1995″ ಎಂದು ಮರುನಾಮಕರಣ ಮಾಡುವುದು ಸೇರಿದೆ.

ವಕ್ಫ್ ಮಂಡಳಿಗಳು, ಆಸ್ತಿಗಳ ನಿರ್ವಹಣೆ ಮತ್ತು ದಕ್ಷತೆಯನ್ನು ಸುಧಾರಿಸುವ, ಪರಿಣಾಮಕಾರಿ ಆಡಳಿತದ ಜೊತೆಗೆ ಸಬಲೀಕರಣ ಮತ್ತು ಅಭಿವೃದ್ಧಿಯನ್ನು ಒತ್ತಿಹೇಳುವ ವಿಶಾಲ ಉದ್ದೇಶ ಇದರ ಹಿಂದೆ ಇದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

ಇದಲ್ಲದೆ, ಯಾವುದಾದರು ಆಸ್ತಿಯನ್ನು ‘ವಕ್ಫ್‌’ ಆಸ್ತಿ ಎಂದು ಪ್ರತಿಪಾದಿಸಿದರೆ, ಜಿಲ್ಲಾಧಿಕಾರಿ ಅದರ ಮಾಲೀಕತ್ವವನ್ನು ನಿರ್ಧರಿಸಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸುತ್ತಾರೆ. ಜಿಲ್ಲಾಧಿಕಾರಿ ಒಂದು ವೇಳೆ ವಕ್ಫ್ ಎಂದು ಹೇಳಲಾದ ಆಸ್ತಿಯನ್ನು ಸರ್ಕಾರಿ ಆಸ್ತಿ ಎಂದು ಹೇಳಿದರೆ, ಅದನ್ನು ಸರ್ಕಾರ ಕಂದಾಯ ಇಲಾಖೆಯ ಅಡಿಯಲ್ಲಿ ನೋಂದಾಯಿಸುತ್ತದೆ” ಎಂದು ತಿದ್ದುಪಡಿ ಮಸೂದೆ ಹೇಳುತ್ತದೆ. ಮಾಲೀಕತ್ವ ನಿರ್ಣಯದ ಪ್ರಕ್ರಿಯೆ ಪ್ರಸ್ತುತ ವಕ್ಫ್‌ ಟ್ರಿಬ್ಯೂನಲ್‌ನಲ್ಲಿ ನಡೆಯುತ್ತಿದೆ.

ಲೋಕಸಭೆಯಲ್ಲಿ ವಕ್ಫ್ ಮಸೂದೆ ಇಂದು ಮಂಡನೆ | ತೀವ್ರ ವಿರೋಧಕ್ಕೆ ಇಂಡಿಯಾ ಮೈತ್ರಿಕೂಟ ಸಿದ್ದತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...