Homeಮುಖಪುಟಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಲಿರುವ ಅಭ್ಯರ್ಥಿಯನ್ನು ಘೋಷಿಸಿದ ಬಿಜೆಪಿ

ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಲಿರುವ ಅಭ್ಯರ್ಥಿಯನ್ನು ಘೋಷಿಸಿದ ಬಿಜೆಪಿ

ಮಮತಾ ಅವರು ಮುಖ್ಯಮಂತ್ರಿಯಾಗಿ ಉಳಿಯಬೇಕಾದರೆ ಭವಾನಿಪುರ ಉಪಚುನಾವಣೆಯಲ್ಲಿ ಗೆಲ್ಲಲೇ ಬೇಕಾಗಿದೆ.

- Advertisement -
- Advertisement -

ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆ ಸೆಪ್ಟೆಂಬರ್ 30 ರಂದು ನಡೆಯಲಿದೆ. ಟಿಎಂಸಿಯಿಂದ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಲ್ಲಿ ಸ್ಪರ್ಧಿಸುತ್ತಿರುವುದರಿಂದ ಕ್ಷೇತ್ರವು ದೇಶದ ಗಮನ ಸೆಳೆದಿದೆ. ಚುನಾವಣೆಯಲ್ಲಿ ಮುಖ್ಯಮಂತ್ರಿ ವಿರುದ್ಧ ಸ್ಪರ್ಧಿಸಲು ಬಿಜೆಪಿ ಪಕ್ಷದ ನಾಯಕಿ ಪ್ರಿಯಾಂಕಾ ಟಿಬ್ರೆವಾಲ್ ಅವರನ್ನು ಕಣಕ್ಕಿಳಿಸಿದೆ.

ಪ್ರತಿಷ್ಠಿತ ಕಣವಾಗಿರುವ ಭವಾನಿಪುರ ಉಪಚುಣಾವಣೆಯಲ್ಲಿ, ಮಮತಾ ಬ್ಯಾನರ್ಜಿ ವಿರುದ್ದ ಅಭ್ಯರ್ಥಿಯನ್ನು ನಿಲ್ಲಿಸದಿರಲು ಕಾಂಗ್ರೆಸ್‌ ನಿರ್ಧರಿಸಿದೆ. ಮಮತಾ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲು ನವೆಂಬರ್‌ 5 ರ ಒಳಗೆ ಶಾಸಕಿಯಾಗಿ ಆಯ್ಕೆಯಾಗಲೆ ಬೇಕಾಗಿದೆ.

ಪಶ್ಚಿಮ ಬಂಗಾಳದಲ್ಲಿ ವಿಧಾನ ಪರಿಷತ್‌ ಇಲ್ಲದೆ ಇರುವುದರಿಂದ, ವಿಧಾನ ಪರಿಷತ್‌ ಸದಸ್ಯೆಯಾಗಿ ನಾಮನಿರ್ದೇಶನ ಮಾಡಿ ಅವರನ್ನು ಶಾಸಕಿಯಾಗಿ ಆಯ್ಕೆ ಮಾಡುವ ಹಾಗೆ ಕೂಡಾ ಇಲ್ಲ. ಹಾಗಾಗಿ ಅವರು ಪ್ರಸ್ತುತ ನಡೆಯಲಿರುವ ಭವಾನಿಪುರ ಉಪಚುನಾವಣೆಯಲ್ಲಿ ಗೆಲ್ಲಲೇ ಬೇಕಾಗಿದೆ.

ಇದನ್ನೂ ಓದಿ: ಬಂಗಾಳ ಉಪಚುನಾವಣೆ: ಮಮತಾ ಬ್ಯಾನರ್ಜಿ ಎದುರು ಸ್ಪರ್ಧಿಸದಿರಲು ಕಾಂಗ್ರೆಸ್ ನಿರ್ಧಾರ

ಮುಖ್ಯಮಂತ್ರಿ ವಿರುದ್ದ ಬಿಜೆಪಿಯಿಂದ ಸ್ಪರ್ಧಿಸಿರುವ ಟಿಬ್ರೆವಾಲ್ ಅವರು ವೃತ್ತಿಯಲ್ಲಿ ವಕೀಲರಾಗಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿಯ ಪ್ರಮುಖ ನಾಯಕಿಯಾಗಿರುವ ಟಿಬ್ರೆವಾಲ್ ಅವರು, ವಿಧಾನಸಭಾ ಚುನಾವಣೆಯ ನಂತರ ನಡೆದಿದೆ ಎನ್ನಲಾಗಿರುವ ಹಿಂಸಾಚಾರದ ಬಗ್ಗೆ ಕಲ್ಕತ್ತಾ ಹೈಕೋರ್ಟ್‌ನಲ್ಲಿ ಟಿಎಂಸಿ ಸರ್ಕಾರದ ವಿರುದ್ಧ ಪ್ರಕರಣ ದಾಖಲಿಸಿದ ಅರ್ಜಿದಾರರಲ್ಲಿ ಒಬ್ಬರಾಗಿದ್ದಾರೆ.

ಈ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮ ಕ್ಷೇತ್ರದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ವಿರುದ್ಧ ಸೋತಿದ್ದರು. ಹೀಗಾಗಿ ಸೋವಂದೇಬ್ ಚಟ್ಟೋಪಾಧ್ಯಾಯ ಅವರಿಂದ ತೆರವಾದ ಕ್ಷೇತ್ರವಾದ ಭವಾನಿಪುರದಿಂದ ಉಪಚುನಾವಣೆಯ ಮೂಲಕ ಮಮತಾ ಅವರು ಮತ್ತೆ ಸ್ಪರ್ಧಿಸಲಿದ್ದಾರೆ.

ಮಮತಾ ಬ್ಯಾನರ್ಜಿ ಅವರು 2011 ಮತ್ತು 2016 ರಲ್ಲಿ ಭವಾನಿಪುರದಿಂದ ಎರಡು ಬಾರಿ ಆಯ್ಕೆಯಾಗಿದ್ದರು. ಪ್ರಸ್ತುತ ನಿರ್ಣಾಯಕ ಉಪಚುನಾವಣೆಯಾಗಿರುವ ಇಲ್ಲಿ ಭಾರೀ ಪ್ರಚಾರ ನಡೆಸಿದ್ದಾರೆ. ಸೆಪ್ಟೆಂಬರ್ 30 ರಂದು ಚುನಾವಣೆ ನಡೆಯಲಿದ್ದು, ಫಲಿತಾಂಶಗಳನ್ನು ಅಕ್ಟೋಬರ್ 3 ರಂದು ಪ್ರಕಟಿಸಲಾಗುತ್ತದೆ.

ಇದನ್ನೂ ಓದಿ: ಸ್ವಕ್ಷೇತ್ರಕ್ಕೆ ಮರಳಿದ ಮಮತಾ ಬ್ಯಾನರ್ಜಿ: ಸೆ.30ಕ್ಕೆ ಪಶ್ಚಿಮ ಬಂಗಾಳ ಉಪಚುನಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...