Homeಕರ್ನಾಟಕಬಿಜೆಪಿ ಕನ್ನಡವಿರೋಧಿ, ದಲಿತ ವಿರೋಧ ಪಕ್ಷ: ಸಿದ್ದರಾಮಯ್ಯ ಆರೋಪ

ಬಿಜೆಪಿ ಕನ್ನಡವಿರೋಧಿ, ದಲಿತ ವಿರೋಧ ಪಕ್ಷ: ಸಿದ್ದರಾಮಯ್ಯ ಆರೋಪ

- Advertisement -
- Advertisement -

ಐಬಿಪಿಎಸ್ ಪರೀಕ್ಷೆಯ ನಂತರ ಇದೀಗ ಎಲ್‌ಐಸಿ ಪರೀಕ್ಷೆಯಲ್ಲಿಯೂ ಹಿಂದಿ-ಇಂಗ್ಲೀಷ್‌ಗೆ ಮಣೆ ಹಾಕುತ್ತಿದ್ದು ಕನ್ನಡಕ್ಕೆ ಬರೆ ಎಳೆಯುತ್ತಿದ್ದಾರೆ. ಇನ್ನೆಷ್ಟು ದಿನ ಕನ್ನಡಿಗರು ಪರಭಾಷೆಯ ಹೇರಿಕೆಯನ್ನು ಸಹಿಸಿಕೊಳ್ಳಬೇಕು? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಭಾರತ ಬಹುತ್ವದ ನೆಲ, ಇಲ್ಲಿನ ವಿವಿಧ ಭಾಷೆ, ಸಂಸ್ಕೃತಿಯನ್ನು ಗೌರವಿಸಿದಾಗ ಮಾತ್ರ ಒಕ್ಕೂಟ ವ್ಯವಸ್ಥೆ ಇನ್ನಷ್ಟು ಬಲಗೊಳ್ಳಲು ಸಾಧ್ಯ. ಈ ನೆಲದಲ್ಲಿ ಯಾವುದೇ ಒಂದು ಭಾಷೆ ಅಥವಾ ಸಮುದಾಯದ ಕಡಗಣನೆ ಸಲ್ಲದು ಎಂದಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದ ಬಣ್ಣ ಬಹಳ ಬೇಗ ಬಯಲಾಗುತ್ತಿದೆ. ತನ್ನ ನಿಜಬಣ್ಣ ದಲಿತ ವಿರೋಧಿ ಎನ್ನುವುದು ಸಾಬೀತಾಗ್ತಿದೆ. ನಮ್ಮ ಕಾಲದ ಕ್ರಾಂತಿಕಾರಿ ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆಯನ್ನು ದುರ್ಬಲಗೊಳಿಸಲು ಹೊರಟರೆ‌ ದಲಿತ ಸಮುದಾಯ ದಂಗೆ ಎದ್ದೀತು, ಅದರ ಮುಂಚೂಣಿಯಲ್ಲಿ ನಾನೇ ಇರುತ್ತೇನೆ ಎಂದು ಘೋಷಿಸಿದ್ದಾರೆ.

ಎಸ್‌ಸಿಪಿ/ಟಿಎಸ್‌ಪಿ ಯೋಜನೆಗೆ ತಿದ್ದುಪಡಿ ತಂದು ಅನುದಾನ ಕಡಿತಗೊಳಿಸುವ‌ ಯಡಿಯೂರಪ್ಪ ಸರ್ಕಾರದ ದುಷ್ಟ ಆಲೋಚನೆಯ ವಿರುದ್ಧ ಬಿಜೆಪಿಯ ಶಾಸಕರು ಕೂಡಾ ದನಿ ಎತ್ತಬೇಕು ಎಂದು ವಿನಂತಿಸುತ್ತೇನೆ. ಇಂತಹ ದ್ರೋಹ ಚಿಂತನೆಯನ್ನು ಪಕ್ಷದ ದಾಸ್ಯಕ್ಕೆ ಕಟ್ಟುಬಿದ್ದು ಸಹಿಸಿಕೊಂಡರೆ ಇತಿಹಾಸ ಕ್ಷಮಿಸದು ಎಂದಿದ್ದಾರೆ.

ಭ್ರಷ್ಟಾಚಾರ, ಅಸುರಕ್ಷಿತ ಗಡಿ, ಮಹಿಳಾ ದೌರ್ಜನ್ಯ… ಹೀಗೆ ಎಲ್ಲದ್ದಕ್ಕೂ ಬಹುಪಕ್ಷೀಯ ರಾಜಕೀಯ ವ್ಯವಸ್ಥೆಯನ್ನು ಹೊಣೆಮಾಡಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು 1998 ರಿಂದ 2004 ರ ವರೆಗೆ ಅಧಿಕಾರದಲ್ಲಿದ್ದ ವಾಜಪೇಯಿ ನೇತೃತ್ವದ ಎನ್‌ಡಿಎ ಆಡಳಿತವನ್ನು ದೂರಲು ಹೊರಟಿದ್ದಾರೆಯೇ? ಎಂದು ವ್ಯಂಗ್ಯವಾಡಿದ್ದಾರೆ.

2014ರಿಂದ ದೇಶದಲ್ಲಿರುವುದು ಏಕಚಕ್ರಾಧಿಪತ್ಯ.
ರಫೇಲ್ ಹಗರಣ, ಜಿಡಿಪಿ ಶೇ.5ಕ್ಕೆ ಇಳಿದಿದ್ದು, ನಿರುದ್ಯೋಗ 45 ವರ್ಷಗಳಲ್ಲಿಯೇ ಅತ್ಯಧಿಕವಾಗಿದ್ದು, ಬ್ಯಾಂಕ್ ಲೂಟಿ‌ ಮಾಡಿ ದೇಶ ಬಿಟ್ಟು ಓಡಿದ್ದು, ಕಾಶ್ಮೀರದಲ್ಲಿ ಉಗ್ರರ ದಾಳಿ 42% ಹೆಚ್ಚಿದ್ದು, ಮಹಿಳಾ ಅತ್ಯಾಚಾರ 22% ಹೆಚ್ಚಿದ್ದು… ಇದೇ ಅವಧಿಯಲ್ಲಿ ಅಲ್ಲವೇ? ಬಹುಪಕ್ಷೀಯ ರಾಜಕೀಯ ವ್ಯವಸ್ಥೆಯನ್ನು ವಿರೋಧಿಸುತ್ತಿರುವ ಅಮಿತ್ ಶಾ ಅವರು ಬಿಹಾರ, ಗೋವಾ, ಮಹಾರಾಷ್ಟ್ರ ಮತ್ತು ಈಶಾನ್ಯ ರಾಜ್ಯಗಳ ಮಿತ್ರಪಕ್ಷಗಳಿಗೆ ವಿಚ್ಛೇದನದ ಸಂದೇಶ ಕಳುಹಿಸುತ್ತಿದ್ದಾರೆಯೇ? ಅಲ್ಲಿರುವುದು ಬಹುಪಕ್ಷೀಯ ಸರ್ಕಾರವಲ್ಲವೇ? ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಗೃಹಸಚಿವ ಅಮಿತ್ ಶಾ ಏಕತ್ವದ ವ್ಯಸನಗ್ರಸ್ತರಾಗಿದ್ದಾರೆ. ಬಹುಭಾಷೆಗಳನ್ನು ಮೂಲೆಗೆ ತಳ್ಳುವ ಪ್ರಯತ್ನದ ನಂತರ ಈಗ ಬಹುಪಕ್ಷೀಯ ರಾಜಕೀಯ ವ್ಯವಸ್ಥೆಯನ್ನು ಎಲ್ಲ ಅನಿಷ್ಠಗಳಿಗೆ ಹೊಣೆ ಮಾಡಿದ್ದಾರೆ. ಅವರಿಗೆ ಯಾರಾದರೂ ಈ ದೇಶದ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಇತಿಹಾಸದ ಪಾಠ ಮಾಡಬೇಕಾಗಿದೆ ಎಂದಿದ್ದಾರೆ.

ಸಿದ್ದರಾಮಯ್ಯನವರು ತಮ್ಮೆಲ್ಲಾ ಅಭಿಪ್ರಾಯಗಳನ್ನು ಪರಿಣಾಮಕಾರಿ ಮಾಧ್ಯಮಗಳಾದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...