Homeಮುಖಪುಟಬಿಜೆಪಿಗೆ ಭ್ರಷ್ಟಾಚಾರಿಗಳ ಮೇಲೆ ನಂಬಿಕೆಯೆ ಹೊರತು ರಾಮನ ಮೇಲಲ್ಲ: AAP ಸಂಸದ

ಬಿಜೆಪಿಗೆ ಭ್ರಷ್ಟಾಚಾರಿಗಳ ಮೇಲೆ ನಂಬಿಕೆಯೆ ಹೊರತು ರಾಮನ ಮೇಲಲ್ಲ: AAP ಸಂಸದ

- Advertisement -
- Advertisement -

ಬಿಜೆಪಿಗೆ ಆಸ್ತಿ ಡೀಲರ್‌ ಮತ್ತು ಭ್ರಷ್ಟಾಚಾರಿಗಳ ಮೇಲೆ ನಂಬಿಕೆ ಇದೆಯೆ ಹೊರತು ರಾಮನ ಮೇಲೆ ಅಲ್ಲ ಎಂದು ಆಮ್‌ ಆದ್ಮಿ ಪಕ್ಷದ ಸಂಸದ ಸಂಜಯ್‌ ಸಿಂಗ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಕರಣದ ಬಗ್ಗೆ ತಾನು ನ್ಯಾಯಾಲಯದ ಕದ ತಟ್ಟುತ್ತಿರುವುದಾಗಿ ಅವರು ಬುಧವಾರ ತಿಳಿಸಿದ್ದಾರೆ.

ಆಮ್‍ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್‍ ಮತ್ತು ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್‍ ಪಾಂಡೆ ಭಾನುವಾರ ಪ್ರತ್ಯೇಕ ಪತ್ರಿಕಾಗೋಷ್ಠಿ ನಡೆಸಿ ರಾಮ ಜನ್ಮಭೂಮಿ ಟ್ರಸ್ಟ್‌ ಭೂ ಹಗರಣ ನಡೆಸುತ್ತಿದೆ ಎಂದು ಆರೋಪಿಸಿದ್ದರು. 2 ಕೋಟಿ ರೂ. ಗೆ ಒಂದು ಜಮೀನು ಖರೀದಿ ಮಾಡಿ, ಕೇವಲ 5 ನಿಮಿಷಗಳ ಅಂತರದಲ್ಲಿ ರಾಮಜನ್ಮಭೂಮಿ ಟ್ರಸ್ಟ್‌‌ ಅದೇ ಜಮೀನನ್ನು 18.5 ಕೋಟಿ ರೂ.ಗಳಿಗೆ ಖರೀದಿಸಿದೆ ಎಂದು ಸಂಜಯ್‍ಸಿಂಗ್‍ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ: ರಾಮಜನ್ಮಭೂಮಿ ಹಗರಣ ಬಯಲಿಗೆಳೆದ ಸಂಜಯ್ ಸಿಂಗ್‌ ಮನೆ ಮೇಲೆ ದಾಳಿ, ಧ್ವಂಸ ಆರೋಪ

ಪ್ರಕರಣದ ಬಗ್ಗೆ ಇಂದು ಮಾತನಾಡಿದ ಸಂಜಯ್ ಸಿಂಗ್, “ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ಹಗರಣವನ್ನು ಬಹಿರಂಗಪಡಿಸಿದ ನಂತರ ಅದರ ವಿರುದ್ದ ಕ್ರಮ ಕೈಗೊಳ್ಳಲು ಭಾರತ ಸರ್ಕಾರಕ್ಕೆ ಮತ್ತು ಬಿಜೆಪಿಗೆ ಮೂರು ದಿನಗಳನ್ನು ನೀಡಿ ಕಾಯುತ್ತಿದ್ದೆ. ಆದರೆ ಬಿಜೆಪಿಗೆ ಆಸ್ತಿ ಡೀಲರ್‌ ಮತ್ತು ಭ್ರಷ್ಟಾಚಾರಿಗಳ ಮೇಲೆ ನಂಬಿಕೆಯಿದೆಯೆ ಹೊರತು ರಾಮನ ಮೇಲೆ ಅಲ್ಲ ಎಂದು ನನಗೆ ತಿಳಿಯಿತು. ಇದೀಗ ಪ್ರಕರಣದ ಬಗ್ಗೆ ನ್ಯಾಯಾಲಯವನ್ನು ಸಂಪರ್ಕಿಸಲು ತಯಾರಿ ನಡೆಸುತ್ತಿದ್ದೇನೆ” ಎಂದು ಹೇಳಿದ್ದಾರೆ.

ಅಯೋಧ್ಯೆಯ ರಾಮ ಜನ್ಮಭೂಮಿ ಟ್ರಸ್ಟ್ ಖರೀದಿಸಿದ ಭೂಮಿಯಲ್ಲಿ ಭ್ರಷ್ಟಾಚಾರದ ಆರೋಪದ ಬಗ್ಗೆ ಸೋಮವಾರ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಶ್ರೀರಾಮನ ಹೆಸರಲ್ಲಿ ಮೋಸ ಮಾಡುವುದು ಅಧರ್ಮವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿಯ ಮಾಜಿ ಮಿತ್ರ ಪ್ರಕ್ಷವಾಗಿರುವ ಶಿವಸೇನೆ ಕೂಡಾ ಇದರ ಬಗ್ಗೆ ಸ್ಪಷ್ಟನೆ ಕೋರಿದ್ದು, ಶಿವಸೇನೆ ಸಂಸದ ಸಂಜಯ್ ರಾವತ್‌, “ರಾಮ ಮತ್ತು ರಾಮ ಮಂದಿರದ ಹೋರಾಟವು ನಮಗೆ ನಂಬಿಕೆಯ ವಿಷಯವಾಗಿದೆ. ಕೆಲವರಿಗೆ ಇದು ರಾಜಕೀಯ ವಿಷಯ. ಮಂದಿರದ ನಿರ್ಮಾಣಕ್ಕಾಗಿ ರಚಿಸಲಾದ ಟ್ರಸ್ಟ್‌ ತಮ್ಮ ಮೇಲಿನ ಆರೋಪಗಳು ನಿಜವೋ ಸುಳ್ಳೋ ಎಂದು ಸ್ಪಷ್ಟಪಡಿಸಬೇಕು ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಶ್ರೀರಾಮನ ಹೆಸರಲ್ಲಿ ಮೋಸ ಮಾಡುವುದು ಅಧರ್ಮ: ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ದಲಿತರ ಮೇಲೆ ಹಲ್ಲೆ ಪ್ರಕರಣ: YSRCP ಮುಖಂಡನಿಗೆ ಜೈಲು

0
1996ರಲ್ಲಿ ನಡೆದಿದ್ದ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖಂಡ ತೋಟ ತ್ರಿಮೂರ್ತಿಲು ಸೇರಿದಂತೆ ಒಂಬತ್ತು ಮಂದಿಯನ್ನು ವಿಶಾಖಪಟ್ಟಣ ನ್ಯಾಯಾಲಯವು ದೋಷಿ ಎಂದು ಘೋಷಿಸಿ...