Homeಕರ್ನಾಟಕಬಿಜೆಪಿಯ ಕೊಳಕು ಮನಸ್ಥಿತಿ | ಹಲಾಲ್ ಬಜೆಟ್ ಟೀಕೆಗೆ ಸಿದ್ದರಾಮಯ್ಯ ಕಿಡಿ

ಬಿಜೆಪಿಯ ಕೊಳಕು ಮನಸ್ಥಿತಿ | ಹಲಾಲ್ ಬಜೆಟ್ ಟೀಕೆಗೆ ಸಿದ್ದರಾಮಯ್ಯ ಕಿಡಿ

- Advertisement -
- Advertisement -

2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿಯಾಗಿದ್ದು, ಮೊದಲ ಬಾರಿಗೆ ರಾಜ್ಯದ ಆಯವ್ಯಯ ಗಾತ್ರ 4 ಲಕ್ಷ ಕೋಟಿ ರೂ.ಗಳ ಗಡಿ ದಾಟಿರುವುದು ಒಂದು ಹೊಸ ಮೈಲಿಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದ್ದಾರೆ.

2025-26 ನೇ ಸಾಲಿನ ಮುಂಗಡ ಪತ್ರವನ್ನು ಮಂಡಿಸಲಾಗಿದ್ದು, ಕರ್ನಾಟಕ ಸರ್ಕಾರ ಕಳೆದ ಸಾಲಿನಲ್ಲಿ 3,71,121 ಕೋಟಿ ಬಜೆಟ್ ಮಂಡಿಸಿತ್ತು. ಈ ಬಾರಿಯ ಬಜೆಟ್ ಗಾತ್ರ 4,09,549 ಕೋಟಿಯಾಗಿದೆ. ಮೊದಲ ಬಾರಿಗೆ ನಮ್ಮ ರಾಜ್ಯದ ಆಯವ್ಯಯ ಗಾತ್ರ 4 ಲಕ್ಷ ಕೋಟಿ ರೂ.ಗಳ ಗಡಿ ದಾಟಿರುವುದು ಒಂದು ಹೊಸ ಮೈಲಿಗಲ್ಲು. ಕಳೆದ ಬಾರಿಗಿಂತ ಈ ಬಾರಿ 38166 ಕೋಟಿ ರೂ.ಗಳು ಹೆಚ್ಚಾಗಿದೆ. ಬಜೆಟ್ ನ ಬೆಳವಣಿಗಯ ದರ 10.3 ರಷ್ಟು ಹೆಚ್ಚಳವಾಗಿದೆ ಎಂದು ಅವರು ಹೇಳಿದ್ದಾರೆ..

ಕಳೆದ ವರ್ಷ ರಾಜಸ್ವ ಸ್ವೀಕೃತಿಗಳು, 263178 ಕೋಟಿ ಇದ್ದು ಈ ಬಾರಿ 2,92,477 ಕೋಟಿ ರೂ. ಇದೆ. 2024-25ರ ಆಯವ್ಯಯಕ್ಕೆ ಹೋಲಿಸಿದರೆ 29,299 ಕೋಟಿ ಹೆಚ್ಚಾಗಿದೆ –ಬೆಳವಣಿಗೆ ದರ 11.1 % ರಷ್ಟಿದೆ. 2024-25ರ ರಲ್ಲಿ ರಾಜಸ್ವ ವೆಚ್ಚ 2,90,531 ಕೋಟಿ ಇದ್ದದ್ದು, 2025-26ರಲ್ಲಿ 3,11,739 ಕೋಟಿ , 2024-25ರ ಆಯವ್ಯಯಕ್ಕೆ ಹೋಲಿಸಿದರೆ 21,207 ಕೋಟಿ ಹೆಚ್ಚಳ-ಬೆಳವಣಿಗೆ ದರ 7.3 % ರಷ್ಟಿದೆ ಎಂದಿದ್ದಾರೆ.

2024-25ರಲ್ಲಿ ಸಾಲ 1,05,246 ಕೋಟಿ , ಈ ವರ್ಷ ಸಾಲ 1,16,000 ಕೋಟಿ , 2024-25ರ ಆಯವ್ಯಯಕ್ಕೆ ಹೋಲಿಸಿದರೆ 10,754 ಕೋಟಿ ಹೆಚ್ಚಳವಾಗಿದೆ(10.2% ರಷ್ಟು ಹೆಚ್ಚಳ). ಇದಕ್ಕೆ ವಿರೋಧಪಕ್ದದವರು ಟೀಕಿಸುತ್ತಾರೆ . ನಮಗೆ ಸಾಲ ಮಾಡುವ ಅವಕಾಶವೆಷ್ಟಿದೆ. ಆರ್ಥಿಕ ಹೊಣಗಾರಿಕೆ ಅಧಿನಿಯಮದ ಮಾನದಂಡದಂತೆ, ಸಾಲದ ಮೊತ್ತ GSDP ಯ ಶೇ.25 ರಷ್ಟಿರಬೇಕು, ರಾಜ್ಯ ಶೇ.24.91 ರಷ್ಟರ ಮಿತಿಯಲ್ಲಿದೆ. ವಿತ್ತೀಯ ಕೊರತೆಯನ್ನು GSDPಯ ಶೇ.3 ರಷ್ಟುನ್ನು ಮೀರಬಾರದೆಂದಿದ್ದು, 2.95 % ರಷ್ಟಿದೆ ಎಂದು ಹೇಳಿದ್ದಾರೆ.

ರಾಜಸ್ವ ಕೊರತೆ 19262 ಕೋಟಿ ಇದೆ . ಈ ಬಾರಿ ರಾಜಸ್ವ ಕೊರತೆಯಿಂದ ರಾಜಸ್ವ ಹೆಚ್ಚುವರಿ ಸ್ಥಿತಿಗೆ ಬರಲಿದ್ದೆವೆ. 2024-25 ರಲ್ಲಿ ರಾಜಸ್ವ ಕೊರತೆ 0.95 ಇತ್ತು, 2025-26ರಲ್ಲಿ 0.63 ಆಗಿದೆ. ರಾಜ್ಯದ GSDP ಕಳೆದ ವರ್ಷ 28,61929 ಕೋಟಿಗಳಾಗಿತ್ತು, 2025-26 ರಲ್ಲಿ 30,70,103 ಕೋಟಿಯಾಗಿದೆ, ಇದರಲ್ಲಿ ಶೇ. 25 ರಷ್ಟು ಸಾಲ ಪಡೆಯಬಹುದಾಗಿದ್ದು, ಸರ್ಕಾರ ಆರ್ಥಿಕ ಶಿಸ್ತನ್ನು ಪಾಲನೆ ಮಾಡಿದೆ .ಆಯವ್ಯಯದಲ್ಲಿ ಬಡವರು, ಮಹಿಳೆಯರು, ಕಾರ್ಮಿಕರು, ದುರ್ಬಲರಿಗೆ, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಆರ್ಥಿಕ ಬೆಳವಣಿಗೆಗೆ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆರ್ಥಿಕ ಹೊಣಗಾರಿಕೆ ಅಧಿನಿಯಮದ ಬಗ್ಗೆ ತಿಳಿಯದೇ, ನಮ್ಮ ಆಯವ್ಯಯದ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರದ ವಿತ್ತೀಯ ಕೊರತೆ ಶೇ. 4.61 ರಷ್ಟಿದೆ. ಆದರೆ ರಾಜ್ಯದ ವಿತ್ತೀಯ ಕೊರತೆ ಶೇ.2.95 ರಷ್ಟಿದೆ. ಕೇಂದ್ರಸರ್ಕಾರದ ಬಜೆಟ್ 50 ಲಕ್ಷ ಕೋಟಿಯಲ್ಲಿ 15.66 ಲಕ್ಷ ಕೋಟಿ ಸಾಲ ಪಡೆದಿದ್ದು( ಶೇ.56 ಸಾಲ), ರಾಜ್ಯ 2.95 ರಷ್ಟು ಸಾಲ ಪಡೆದಿದ್ದೇವೆ. ಅಶೋಕ್ ರವರು ರಾಜಕೀಯಕ್ಕಾಗಿ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕೆ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ದಿವಾಳಿ ಪದದ ಅರ್ಥ ಗೊತ್ತೇ? ರಾಜ್ಯಸರ್ಕಾರ ಆರ್ಥಿಕವಾಗಿ ಸದೃಢವಾಗಿದ್ದು, ಆರ್ಥಿಕ ಶಿಸ್ತನ್ನು ಪಾಲಿಸಲಾಗುತ್ತಿದೆ. ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳನ್ನು ಪಾಲಿಸಲಾಗಿದೆ ಎಂದು ಹೇಳಿದ್ದಾರೆ.

ಹಿಂದಿನ ನಮ್ಮ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ಆಭಿವೃದ್ಧಿಗೂ ಹಣ ಖರ್ಚು ಮಾಡಿ, ಗ್ಯಾರಂಟಿಗಳಿಗೆ 52009 ಕೊಟಿ , ಎಲ್ಲ ಗ್ಯಾರಂಟಿಗಳು ಜಾರಿಯಾಗಿದೆ. ಮುಂದಿನ ವರ್ಷವೂ ಮುಂದುವರೆಸುತ್ತೆವೆ. ಈ ವರ್ಷ ಬಜೆಟ್ ನಲ್ಲಿ ಗ್ಯಾರಂಟಿಗಳಿಗೆ 51034 ಕೋಟಿ ಮೀಸಲಿರಿಸಿದ್ದೇವೆ. 2025-26ನೇ ಸಾಲಿಗೆ ಗೃಹಲಕ್ಷ್ಮಿ ಯೋಜನೆಗೆ 28608 ಕೋಟಿಗಳನ್ನು ಮೀಸಲಿರಿಸಿದೆ. ಗೃಹಜ್ಯೋತಿ ಯೋಜನೆ 10,100 ಕೋಟಿ , ಅನ್ನಭಾಗ್ಯ ಯೋಜನೆಗೆ 6426 ಕೋಟಿ , ಶಕ್ತಿ ಯೋಜನೆಗೆ 5,300 ಕೋಟಿ, ಯುವನಿಧಿ ಯೋಜನೆಗೆ 600 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಈ ಬಾರಿ ಆಯವ್ಯಯದಲ್ಲಿ ಎಲ್ಲಾ ಇಲಾಖೆಗಳಿಗೆ ಹೆಚ್ಚು ಅನುದಾನ ನೀಡಲಾಗಿದೆ. ಅಭಿವೃದ್ಧಿ ಕೆಲಸಗಳಿಗೆ ಅನುದಾನದ ಕೊರತೆ ಇಲ್ಲ. ಬಿಜೆಪಿಯವರ ಹೇಳಿಕೆಗಳು ಸತ್ಯಕ್ಕೆ ದೂರವಾದುದು. ದೆಹಲಿ, ಮದ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಹರಿಯಾಣಗಳಲ್ಲಿ ಬಿಜೆಪಿಯವರು ನಮ್ಮ ಗ್ಯಾರಂಟಿಗಳನ್ನು ನಕಲು ಮಾಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಹಲಾಲ್ ಬಜೆಟ್ ಎಂಬ ಟೀಕೆ- ಬಿಜೆಪಿಯವರ ಕೊಳಕು ಮನಸ್ಥಿತಿ

ಗ್ಯಾರಂಟಿಗಳನ್ನು ಮದ್ಯವರ್ತಿಗಳ ಹಾವಳಿ ಇಲ್ಲದೇ ನೇರವಾಗಿ ಫಲಾನುಭವಿಗಳಿಗೆ ಡಿಬಿಟಿ ಮಾಡಲಾಗುತ್ತಿದ್ದು, ಸಾರ್ವತ್ರಿಕ ಮೂಲ ಆದಾಯ ತತ್ವದ ಆಧಾರದ ಮೇಲೆ ರೂಪಿಸಲಾಗಿದೆ. ಗ್ಯಾರಂಟಿ ಯೋಜನೆಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 232 ಕೋಟಿಗಳು ವೆಚ್ಚವಾಗುತ್ತಿದೆ. ಜನರಿಗೆ ಆರ್ಥಿಕ ಬಲ ತುಂಬಿದರೆ, ಅವರ ಖರೀದಿ ಶಕ್ತಿಯೂ ಹೆಚ್ಚಿ, ರಾಜ್ಯದ ಆರ್ಥಿಕತೆಯೂ ಬೆಳೆಯುತ್ತದೆ. ಅಲ್ಪಸಂಖ್ಯಾತರು, ಪ.ಜಾ, ಪ.ವರ್ಗ, ಹಿಂ.ವರ್ಗಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಬೌದ್ಧರು, ಜೈನ್, ಕ್ರಿಶ್ಚಿಯನ್ ಸೇರಿದಂತೆ ಅಲ್ಪಸಂಖ್ಯಾತರ ಎಲ್ಲ ಸಮುದಾಯದವರಿಗೆ 4 ಸಾವಿರ ಕೋಟಿ ಕೊಟ್ಟರೂ , ಇದನ್ನು ಹಲಾಲ್ ಬಜೆಟ್ ಎಂದು ಟೀಕಿಸುತ್ತಾರೆ. ಇದು ಬಿಜೆಪಿಯವರ ಕೊಳಕು ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ಎಸ್ ಸಿ ಎಸ್ ಪಿ- ಟಿಎಸ್ ಪಿ ಯೋಜನೆಗಳಿಗೆ 42000 ಕೋಟಿ ನೀಡಲಾಗುತ್ತಿದೆ. ಅಲ್ಪಸಂಖ್ಯಾತರಿಗೆ 4500 ಕೋಟಿ, ಓಬಿಸಿಗೆ 4300 ಕೋಟಿ ನೀಡಲಾಗಿದೆ. ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು SCP TSP ಕಾಯ್ದೆ ಮಾಡಿ ಜಾರಿಗೊಳಿಸಿದ್ದಾರೆಯೇ ? ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರದವರು ಶೇ. 56 ರಷ್ಟು ಸಾಲ ಮಾಡಿದ್ದು, ಈ ಬಗ್ಗೆ ಪ್ರಧಾನಿ ಮೋದಿಯವರನ್ನು ಕೇಳಲಿ, ಯಾವ ನೈತಿಕತೆಯಿಂದ ಇಂಥ ಪ್ರಶ್ನೆ ಕೇಳುತ್ತಾರೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...