Homeಮುಖಪುಟಛತ್ ಪೂಜೆಗಾಗಿ ಪ್ರಧಾನಿಗೆ ಫಿಲ್ಟರ್ ನೀರಿನ 'ನಕಲಿ' ಯಮುನಾ ಘಾಟ್ ನಿರ್ಮಾಣ: ಎಎಪಿ ಆರೋಪ

ಛತ್ ಪೂಜೆಗಾಗಿ ಪ್ರಧಾನಿಗೆ ಫಿಲ್ಟರ್ ನೀರಿನ ‘ನಕಲಿ’ ಯಮುನಾ ಘಾಟ್ ನಿರ್ಮಾಣ: ಎಎಪಿ ಆರೋಪ

- Advertisement -
- Advertisement -

ಛತ್ ಪೂಜೆಗಾಗಿ ನಿಮಿತ್ತ ಸಾಮಾನ್ಯ ಜನರು ಮಲಿನಗೊಂಡ ಯಮುನಾ ನದಿಯಲ್ಲಿ ಪುಣ್ಯಸ್ನಾನ ಮಾಡಬೇಕಾದರೆ, ಪ್ರಧಾನಿ ಮೋದಿಯವರಿಗೆ ಬಿಜೆಪಿ ಫಿಲ್ಟರ್ ನೀರಿನ ನಕಲಿ ‘ಯಮುನಾ ಘಾಟ್’ ನಿರ್ಮಿಸಿದೆ ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ಭಾನುವಾರ (26) ಆರೋಪಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಎಪಿ ದೆಹಲಿ ಘಟಕದ ಅಧ್ಯಕ್ಷ ಸೌರಭ್ ಭಾರದ್ವಾಜ್, “ಬಿಜೆಪಿ ಭಕ್ತರನ್ನು ‘ಮೋಸ’ ಮಾಡುತ್ತಿದೆ ಮತ್ತು ಪೂರ್ವಾಂಚಲಿಗಳ ಜೀವನದ ಜೊತೆ ಆಟವಾಡುತ್ತಿದೆ” ಎಂದು ಹೇಳಿದ್ದಾರೆ.

“ಬಿಹಾರದಲ್ಲಿ ಅಧಿಕಾರ ಹಿಡಿಯುವ ಹತಾಶ ಪ್ರಯತ್ನದಲ್ಲಿ ಬಿಜೆಪಿ ದೆಹಲಿಯ ಲಕ್ಷಾಂತರ ಪೂರ್ವಾಂಚಲಿಗಳ ಜೀವನದ ಜೊತೆ ಆಟವಾಡುತ್ತಿದೆ. ಪ್ರಧಾನಿ ಮೋದಿಗಾಗಿ ವಾಸುದೇವ್ ಘಾಟ್‌ನಲ್ಲಿ ಫಿಲ್ಟರ್ ನೀರಿನ ನಕಲಿ ಯಮುನಾ ಘಾಟ್ ನಿರ್ಮಿಸಲಾಗಿದೆ. ಭಕ್ತರು ಕಲುಷಿತ ನದಿಯಲ್ಲಿ ನಿಲ್ಲಬೇಕಾಗಿದೆ” ಎಂದು ಭಾರದ್ವಾಜ್ ಕಿಡಿಕಾರಿದ್ದಾರೆ.

ದೆಹಲಿಗೆ ಕುಡಿಯುವ ನೀರು ಪೂರೈಸುವ ವಝೀರಾಬಾದ್ ನೀರು ಸಂಸ್ಕರಣಾ ಘಟಕದ ಪೈಪ್‌ಲೈನ್‌ನಿಂದ ಘಾಟ್‌ಗೆ ನೀರನ್ನು ತೆಗೆದುಕೊಳ್ಳಲಾಗಿದೆ ಎಂದು ಭಾರದ್ವಾಜ್ ಆರೋಪಿಸಿದ್ದಾರೆ.

ದೆಹಲಿ ಜಲ ಸಚಿವ ಪರ್ವೇಶ್ ವರ್ಮಾ ಅವರು ಹಿಂದಿನ ಎಎಪಿ ಸರ್ಕಾರವನ್ನು ನಿಂದಿಸಿ ಅಧಿಕಾರಿಗಳ ಹಲ್ಲೆ ಮಾಡಿದ್ದ ನೊರೆಯನ್ನು ತೆರವುಗೊಳಿಸಲು ಈಗ ಅದೇ ರಾಸಾಯನಿಕವನ್ನು ಯಮುನಾ ನದಿಗೆ ಸಿಂಪಡಿಸುತ್ತಿದ್ದಾರೆ ಎಂದು ಭಾರದ್ವಾಜ್ ಹೇಳಿದ್ದಾರೆ.

ಬಿಜೆಪಿ ಒಂದು ಸುಳ್ಳು ಮರೆಮಾಚಲು ಸಾವಿರ ಸುಳ್ಳು ಹೇಳುತ್ತಿದೆ. ಮತದಾರರನ್ನು ಮರುಳು ಮಾಡಲು ಮತ್ತು ಯಮುನಾ ನದಿ ಅಪಾಯಕಾರಿಯಾಗಿ ವಿಷಕಾರಿಯಾಗಿದೆ ಎಂಬ ಸತ್ಯವನ್ನು ಮರೆಮಾಚಲು ನಾಟಕ ಮಾಡುತ್ತಿದೆ ಎಂದು ಭಾರದ್ವಾಜ್ ಆರೋಪಿಸಿದ್ದಾರೆ.

“ಯಮುನಾ ನೀರು ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು ಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಒಪ್ಪಿಕೊಂಡಿದೆ. ಆದರೂ, ಬಿಜೆಪಿ ನಾಯಕರು ಫೋಟೋ ತೆಗೆಯಲು ಮತ್ತು ನೊರೆಯನ್ನು ಮರೆಮಾಚಲು ರಾಸಾಯನಿಕಗಳನ್ನು ಸಿಂಪಡಿಸುವಲ್ಲಿ ನಿರತರಾಗಿದ್ದಾರೆ” ಎಂದು ಭಾರದ್ವಾಜ್ ಹೇಳಿದ್ದಾರೆ.

ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಪತ್ರಿಕಾಗೋಷ್ಠಿಯಲ್ಲಿ ಎಎಪಿಯ ಆರೋಪಗಳನ್ನು ತಳ್ಳಿಹಾಕಿದ್ದಾರೆ.

“ದೆಹಲಿಯ ಮತ್ತು ಇಡೀ ದೇಶದ ಜನರು ಆಮ್ ಆದ್ಮಿ ಪಕ್ಷದ ನಾಯಕತ್ವದ ರಾಜಕೀಯ ಹತಾಶೆಯ ನಾಚಿಕೆಗೇಡಿನ ಮಾದರಿಯನ್ನು ಕಂಡಿದ್ದಾರೆ. ಯಮುನಾ ನದಿಯ ದಡದಲ್ಲಿರುವ ನೈಸರ್ಗಿಕ ವಾಸುದೇವ್ ಘಾಟ್ ಅನ್ನು ಸ್ವಚ್ಛಗೊಳಿಸಲು ಮತ್ತು ಅಲ್ಲಿ ಶುದ್ಧ ನೀರಿನ ಲಭ್ಯತೆಗೆ ಎಎಪಿ ನಾಯಕ ಸೌರಭ್ ಭಾರದ್ವಾಜ್ ಆಕ್ಷೇಪ ವ್ಯಕ್ತಪಡಿಸಿದ್ದನ್ನು ಜನರು ನೋಡಿದ್ದಾರೆ” ಎಂದು ಹೇಳಿದ್ದಾರೆ.

“ಯಮುನಾ ನದಿಯ ಶುದ್ಧೀಕರಣಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸೌರಭ್ ಭಾರದ್ವಾಜ್ ಅವರು ಯಮುನಾ ದಡದಿಂದ ಬಿಡುಗಡೆ ಮಾಡಿದ ಲೈವ್ ವಿಡಿಯೋ, ಸರ್ಕಾರದ ಸ್ವಚ್ಛತೆ ಮತ್ತು ನೈರ್ಮಲ್ಯ ಪ್ರಯತ್ನಗಳ ವಿರುದ್ಧ ವಿರೋಧ ಪಕ್ಷದ ನಾಯಕರೊಬ್ಬರು ಆಕ್ಷೇಪಣೆ ವ್ಯಕ್ತಪಡಿಸಿದ ಮೊದಲ ರಾಜಕೀಯ ನಾಟಕವಾಗಿದೆ” ಎಂದು ಸಚ್‌ದೇವ ವಾಗ್ದಾಳಿ ನಡೆಸಿದ್ದಾರೆ.

ಹಿಂದಿನ ಎಎಪಿ ಸರ್ಕಾರವನ್ನು ಟೀಕಿಸಿದ ಸಚ್‌ದೇವ, 2018 ರಿಂದ 2024 ರವರೆಗೆ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಯಮುನಾ ನದಿಯ ದಡದಲ್ಲಿ ಛತ್ ಪೂಜೆಯನ್ನು ನಿಷೇಧಿಸಿದ್ದರು ಎಂದು ಹೇಳಿದ್ದಾರೆ.

ಈಗ, ರೇಖಾ ಗುಪ್ತಾ ಅವರ ಸರ್ಕಾರವು ಯಮುನಾದ ಮೂಲಭೂತ ಶುಚಿಗೊಳಿಸುವಿಕೆಯನ್ನು ಪೂರ್ಣಗೊಳಿಸಿ, ಕೇವಲ ಎಂಟು ತಿಂಗಳಲ್ಲಿ ಭಕ್ತರಿಗೆ ಛತ್ ಆಚರಣೆಗಳನ್ನು ಮಾಡಲು ನೈಸರ್ಗಿಕ ಘಾಟ್‌ಗಳು ಲಭ್ಯವಾಗುವಂತೆ ಮಾಡಿದಾಗ, ಅವರು ಗದ್ದಲ ಎಬ್ಬಿಸುತ್ತಿದ್ದಾರೆ ಎಂದಿದ್ದಾರೆ.

ಎಎಪಿ ನಾಯಕ ಭಾರದ್ವಾಜ್ ಅವರ ಸುದ್ದಿಗೋಷ್ಠಿ ಬಳಿಕ ಪ್ರಧಾನಿ ನಕಲಿ ಯಮುನಾ ಘಾಟ್ ವಿಷಯ ದೇಶದಾದ್ಯಂತ ಚರ್ಚೆಯಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗಳಿಗೆ ಆಹಾರವಾಗಿದೆ.

ದೆಹಲಿ ಗಲಭೆ ಪ್ರಕರಣ | ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ ಅ.31ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...