Homeಮುಖಪುಟಬಿಜೆಪಿ ಸಂಸದೀಯ ಮಂಡಳಿ: ಬಿ.ಎಸ್.ಯಡಿಯೂರಪ್ಪ ಒಳಗೆ, ನಿತಿನ್ ಗಡ್ಕರಿ ಔಟ್; ಆದಿತ್ಯನಾಥ್‌ಗೆ ಸ್ಥಾನವಿಲ್ಲ!

ಬಿಜೆಪಿ ಸಂಸದೀಯ ಮಂಡಳಿ: ಬಿ.ಎಸ್.ಯಡಿಯೂರಪ್ಪ ಒಳಗೆ, ನಿತಿನ್ ಗಡ್ಕರಿ ಔಟ್; ಆದಿತ್ಯನಾಥ್‌ಗೆ ಸ್ಥಾನವಿಲ್ಲ!

- Advertisement -
- Advertisement -

ಬಿಜೆಪಿಯ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ‘ಸಂಸದೀಯ ಮಂಡಳಿ’ಯಿಂದ ಒಕ್ಕೂಟ ಸರ್ಕಾರದ ಸಚಿವ ನಿತಿನ್ ಗಡ್ಕರಿ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಅವರನ್ನು ಪಕ್ಷವೂ ಬುಧವಾರ ಕೈಬಿಟ್ಟಿದೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕಿತ್ತೊಗೆಯಲ್ಪಟ್ಟ ಬಿಎಸ್‌ ಯಡಿಯೂರಪ್ಪ ಅವರನ್ನು ಮಂಡಳಿಗೆ ಹೊಸದಾಗಿ ಸೇರಿಸಿಕೊಳ್ಳಲಾಗಿದೆ. ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ದೇವೇಂದ್ರ ಫಡ್ನವಿಸ್ ಅವರನ್ನು ಚುನಾವಣಾ ಸಮಿತಿಯಲ್ಲಿ ಸೇರಿಸಲಾಗಿದೆ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಸಂಸದೀಯ ಮಂಡಳಿಗೆ ಮಾತ್ರವಲ್ಲದೆ, ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ ಕೂಡಾ ಸೇರ್ಪಡೆ ಮಾಡಲಾಗಿದೆ. ಸಂಸದೀಯ ಮಂಡಳಿಯು ಬಿಜೆಪಿಯ ಉನ್ನತ ಸಂಸ್ಥೆಯಾಗಿದ್ದು, ಮುಖ್ಯಮಂತ್ರಿಗಳು, ರಾಜ್ಯಗಳ ಮುಖ್ಯಸ್ಥರು ಮತ್ತು ಇತರ ಪ್ರಮುಖ ಪಾತ್ರಗಳನ್ನು ಬಗ್ಗೆ ನಿರ್ಧರಿಸುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಅಭೂತಪೂರ್ವವಾಗಿ ಎರಡನೇ ಅವಧಿಗೆ ಅಧಿಕಾರ ಹಿಡಿಯುವಂತೆ ಮಾಡಿದ ಸಿಎಂ ಆದಿತ್ಯನಾಥ್ ಅವರನ್ನು ಕೂಡಾ ಸಂಸದೀಯ ಮಂಡಳಿಗೆ ಸೇರ್ಪಡೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತಾದರೂ ಅವರನ್ನು ಇದರಿಂದ ಹೊರಗಿಟ್ಟಿದ್ದು ರಾಜಕೀಯ ವಲಯದಲ್ಲಿ ಆಶ್ಚರ್ಯಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶ: 4 ವರ್ಷಗಳಲ್ಲಿ sc/st ದೌರ್ಜನ್ಯ ತಡೆ ಕಾಯ್ದೆಯಡಿ 33,000 ಕ್ಕೂ ಹೆಚ್ಚು ಪ್ರಕರಣ ದಾಖಲು

ಬಿ.ಎಸ್.ಯಡಿಯೂರಪ್ಪ, ಸರ್ಬಾನಂದ ಸೋನೋವಾಲ್, ಕೆ.ಲಕ್ಷ್ಮಣ್, ಇಕ್ಬಾಲ್ ಸಿಂಗ್ ಲಾಲ್‌ಪುರ, ಸುಧಾ ಯಾದವ್ ಮತ್ತು ಸತ್ಯನಾರಾಯಣ್ ಜತಿಯಾ ಸೇರಿದಂತೆ ಒಟ್ಟು ಆರು ಹೊಸ ಮುಖಗಳನ್ನು ಮಂಡಳಿಗೆ ಹೆಸರಿಸಲಾಗಿದೆ.

ಪಕ್ಷದ ಪ್ರಮುಖ ಸಮಿತಿಯಿಂದ ನಿತಿನ್ ಗಡ್ಕರಿ ಅವರನ್ನು ಕೈಬಿಟ್ಟಿರುವುದು ಭಾರಿ ಊಹಾಪೋಹಕ್ಕೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಹಿರಿಯ ಸಚಿವರಾಗಿರುವ ಗಡ್ಕರಿ ಅವರು ಬಿಜೆಪಿಯ ಮಾಜಿ ಅಧ್ಯಕ್ಷರೂ ಆಗಿದ್ದಾರೆ.

ಬಿಜೆಪಿಯು ಈ ವರೆಗೆ ಮಾಜಿ ಅಧ್ಯಕ್ಷರನ್ನು ಸಂಸದೀಯ ಮಂಡಳಿಯಲ್ಲಿ ಉಳಿಸಿಕೊಳ್ಳುವ ಸಾಂಪ್ರದಾಯವನ್ನು ಅನುಸರಿಸುತ್ತಾ ಬಂದಿದೆ. ಪಕ್ಷದ ಸೈದ್ಧಾಂತಿಕ ಮಾರ್ಗದರ್ಶಕ ಸಂಘಟನೆಯಾದ ಆರ್‌ಎಸ್‌ಎಸ್‌ನೊಂದಿಗೆ ಅವರ ಆಳವಾದ ಸಂಪರ್ಕದಿಂದಾಗಿ ತಮ್ಮ ಸ್ವಂತ ಸರ್ಕಾರದ ಮೇಲೆ ಆಗಾಗ್ಗೆ ಗುರಿ ಮಾಡಿಕೊಂಡಿದ್ದರು.

ಇದನ್ನೂ ಓದಿ: ಶಿಕಾರಿಪುರ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ: ದೊಡ್ಡ ಅಂತರದಲ್ಲಿ ಗೆಲ್ಲಿಸಲು ಯಡಿಯೂರಪ್ಪ ಮನವಿ

ಬಿಜೆಪಿಯ ಮಾಜಿ ಅಧ್ಯಕ್ಷರೂ ಆಗಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಂಸದೀಯ ಮಂಡಳಿಗೆ ಮರು ಪ್ರವೇಶ ಪಡೆದಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರನ್ನೂ ಸಂಸದೀಯ ಮಂಡಳಿಯಿಂದ ಕೈಬಿಡಲಾಗಿದ್ದು, 20 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ವ್ಯಕ್ತಿಗೆ ಭಾರಿ ಹಿನ್ನಡೆ ಅನುಭವಿಸಿದ್ದಾರೆ.

ಕಳೆದ ವರ್ಷ ಒಳಜಗಳ ಮತ್ತು ಭ್ರಷ್ಟಾಚಾರದ ಆರೋಪದ ಮೇಲೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಪಕ್ಷದ ಅಲಿಖಿತ ನಿಯಮದ ಪ್ರಕಾರ 75 ವಯಸ್ಸಿನ ನಂತರ ಅಧಿಕಾರಕ್ಕೆ ಏರುವಂತಿಲ್ಲ, ಆದರೂ ಅವರು ತಮ್ಮ 77 ನೇ ವಯಸ್ಸಿನವರೆಗೂ ಮುಖ್ಯಮಂತ್ರಿಯಾಗಿದ್ದರು.

ಪ್ರಭಾವಿ ಲಿಂಗಾಯತ ರಾಜಕಾರಣಿಯಾಗಿರುವ ಯಡಿಯೂರಪ್ಪ ಅವರು ವರ್ಷಗಳಿಂದ ಅತೃಪ್ತರಾಗಿದ್ದು, ಮುಂದಿನ ವರ್ಷ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಅವರ ಸಹಕಾರವನ್ನು ಖಚಿತಪಡಿಸಿಕೊಳ್ಳಲು ಪಕ್ಷವು ಅವರನ್ನು ಸಮಾಧಾನಪಡಿಸಲು ಬಯಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ರಾಜ್ಯದಲ್ಲಿ ಲಿಂಗಾಯತ ಸಮುದಾಯವೂ ಬಿಜೆಪಿಯ ಪ್ರಬಲ ಓಟ್‌ ಬ್ಯಾಂಕ್ ಆಗಿದ್ದು, ರಾಜ್ಯದಾದ್ಯಂತ 18% ರಷ್ಟು ಮತಗಳನ್ನು ಹೊಂದಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಶಿಕಾರಿಪುರ: ಯಡಿಯೂರಪ್ಪ ಸಂಸ್ಥಾನದಲ್ಲಿ ಬಿಜೆಪಿಯೇ ಕಾಣೆ!!

ಅಸ್ಸಾಂನಲ್ಲಿ ಬಿಜೆಪಿ ಪುನರಾಯ್ಕೆಯಾದ ನಂತರ ಹಿಮಂತ ಬಿಸ್ವಾ ಶರ್ಮಾಗೆ ದಾರಿ ಮಾಡಿಕೊಡಲು ಒಪ್ಪಿದ ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಅವರನ್ನು ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿಗೆ ಹೆಸರಿಸಲಾಗಿದೆ. ಪ್ರಧಾನಿ ಮೋದಿ, ಅಮಿತ್ ಶಾ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಮಾತ್ರ ಈ ಸಮಿತಿಯಲ್ಲಿ ಸ್ಥಿರವಾಗಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...