Homeಮುಖಪುಟದೆಹಲಿಗೆ ಬಿಜೆಪಿ ಸಿಎಂ; ಕೇಂದ್ರ ನಾಯಕತ್ವ ನಿರ್ಧರಿಸುತ್ತದೆ: ವೀರೇಂದ್ರ ಸಚ್‌ದೇವ

ದೆಹಲಿಗೆ ಬಿಜೆಪಿ ಸಿಎಂ; ಕೇಂದ್ರ ನಾಯಕತ್ವ ನಿರ್ಧರಿಸುತ್ತದೆ: ವೀರೇಂದ್ರ ಸಚ್‌ದೇವ

- Advertisement -
- Advertisement -

ರಾಷ್ಟ್ರ ರಾಜಧಾನಿಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸುತ್ತಿರುವ ಮಧ್ಯೆ, ದೆಹಲಿಯ ಮುಂದಿನ ಮುಖ್ಯಮಂತ್ರಿ ಬಿಜೆಪಿಯವರಾಗಿರಲಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ವೀರೇಂಧ್ರ ಸಚ್‌ದೇವ ಶನಿವಾರ ಹೇಳಿದ್ದಾರೆ. ಅದಾಗ್ಯೂ, ಪಕ್ಷದ ಕೇಂದ್ರ ನಾಯಕತ್ವವು ಮುಖ್ಯಮಂತ್ರಿ ಯಾರಾಗಬೇಕೆಂದು ನಿರ್ಧರಿಸುತ್ತದೆ ಎಂದು ಅವರು ಹೇಳಿದ್ದಾರೆ. ದೆಹಲಿಗೆ ಬಿಜೆಪಿ ಸಿಎಂ

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿನ ಮಧ್ಯಾಹ್ನ 12.40ರ ವೇಳೆಗೆ ಬಿಜೆಪಿ 48 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದರೆ, ಆಡಳಿತರೂಢ ಎಎಪಿ 22 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ದೆಹಲಿಗೆ ಬಿಜೆಪಿ ಸಿಎಂ

“ಇದುವರೆಗಿನ ಫಲಿತಾಂಶಗಳು ನಮ್ಮ ನಿರೀಕ್ಷೆಗಳಿಗೆ ಅನುಗುಣವಾಗಿವೆ. ಆದರೆ ನಾವು ಅಂತಿಮ ಫಲಿತಾಂಶಕ್ಕಾಗಿ ಕಾಯುತ್ತೇವೆ” ಎಂದು ಕನ್ನಾಟ್ ಪ್ಲೇಸ್‌ನ ಹನುಮಾನ್ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಸಚ್‌ದೇವ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಜೆಪಿ ಅಭ್ಯರ್ಥಿಗಳು ಶ್ರದ್ಧೆಯಿಂದ ಕೆಲಸ ಮಾಡಿದ್ದು, ದೆಹಲಿಯ ಮತದಾರರು ಅಭಿವೃದ್ಧಿ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತ ಮಾದರಿಯನ್ನು ಆರಿಸಿಕೊಂಡಿದ್ದಾರೆ ಎಂದು ಸಚ್‌ದೇವ ಅವರು ಹೇಳಿದ್ದು, “ಅಭಿವೃದ್ಧಿಯ ಮಾದರಿಯನ್ನು ಬಯಸಿದ್ದ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಜನರು ಆರಿಸಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಬಿಜೆಪಿ “ಡಬಲ್-ಎಂಜಿನ್ ಸರ್ಕಾರ”ವನ್ನು ರಚಿಸುತ್ತದೆ ಎಂದು ಪ್ರತಿಪಾದಿಸಿದ ಅವರು, “ಈ ಗೆಲುವು ಪ್ರಧಾನಿ ಮೋದಿಯವರ ದೂರದೃಷ್ಟಿಯ ಪರಿಣಾಮ ಎಂದು ಹೇಳಲು ನಮಗೆ ಯಾವುದೇ ಹಿಂಜರಿಕೆಯಿಲ್ಲ. ದೆಹಲಿಗೆ ಬಲವಾದ ಮತ್ತು ಸ್ಥಿರವಾದ ಸರ್ಕಾರ ಸಿಗುವುದನ್ನು ನಾವು ಖಚಿತಪಡಿಸುತ್ತೇವೆ.” ಎಂದು ತಿಳಿಸಿದ್ದಾರೆ.

ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಪಕ್ಷವನ್ನು ಟೀಕಿಸಿದ ಅವರು, ದೆಹಲಿಯ ಜನರ ಮೇಲೆ ಪರಿಣಾಮ ಬೀರುವ ನಿಜವಾದ ಸಮಸ್ಯೆಗಳಾದ ಹದಗೆಟ್ಟ ರಸ್ತೆಗಳು, ಮದ್ಯ ನೀತಿ ವಿವಾದಗಳು, ಕೊಳಕು ನೀರು ಮತ್ತು ಭ್ರಷ್ಟಾಚಾರದ ಮೇಲೆ ಬಿಜೆಪಿ ಚುನಾವಣೆಗಳನ್ನು ಎದುರಿಸಿದೆ ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ ಸಚ್‌ದೇವ್, “ನಾವು ಈ ವಿಷಯಗಳ ಬಗ್ಗೆ ಅವರನ್ನು ಪ್ರಶ್ನಿಸಿದಾಗಲೆಲ್ಲಾ ಅವರು ಮೌನವಾಗಿರುತ್ತಿದ್ದರು ಅಥವಾ ಓಡಿಹೋಗುತ್ತಿದ್ದರು. ಅವರು ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಚುನಾವಣೆಗಳನ್ನು ಗೆಲ್ಲಲು ಪ್ರಯತ್ನಿಸಿದರು” ಎಂದು ಸಚ್‌ದೇವ್ ಹೇಳಿದ್ದಾರೆ.

ದೆಹಲಿಯ ಜನರು ಬಿಜೆಪಿಯ ಹೋರಾಟಗಳನ್ನು ಅರ್ಥಮಾಡಿಕೊಂಡಿದ್ದು, ಬದಲಾವಣೆಗೆ ಮತ ಹಾಕಿದ್ದಾರೆ. ದೆಹಲಿಯ ನೋವು ನಿಜವಾಗಿದ್ದು, ಜನರು ಪ್ರಧಾನಿ ಮೋದಿಯವರ ನಾಯಕತ್ವವನ್ನು ಆಯ್ಕೆ ಮಾಡುವ ಮೂಲಕ ಅದನ್ನು ಕೊನೆಗೊಳಿಸಲು ಮತ ಚಲಾಯಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ದೆಹಲಿ ಫಲಿತಾಂಶ | ಮ್ಯಾಜಿಕ್ ನಂಬರ್ ದಾಟಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ : ಎಎಪಿಯ ಘಟಾನುಘಟಿಗಳಿಗೆ ಹಿನ್ನಡೆ!

ದೆಹಲಿ ಫಲಿತಾಂಶ | ಮ್ಯಾಜಿಕ್ ನಂಬರ್ ದಾಟಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ : ಎಎಪಿಯ ಘಟಾನುಘಟಿಗಳಿಗೆ ಹಿನ್ನಡೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...