Homeಮುಖಪುಟಫೇಸ್‌ಬುಕ್ ಪೋಸ್ಟ್ ವಿರುದ್ಧ ಬಿಜೆಪಿ ದೂರು: ಮಣಿಪುರದಲ್ಲಿ ಇಬ್ಬರ ಬಂಧನ

ಫೇಸ್‌ಬುಕ್ ಪೋಸ್ಟ್ ವಿರುದ್ಧ ಬಿಜೆಪಿ ದೂರು: ಮಣಿಪುರದಲ್ಲಿ ಇಬ್ಬರ ಬಂಧನ

- Advertisement -
- Advertisement -

ತನ್ನ ವಿರುದ್ಧದ ಟೀಕೆ, ವಿಮರ್ಶೆಯನ್ನು ಸಹಿಸದ ಬಿಜೆಪಿ ಹಲವಾರು ಜನರ ವಿರುದ್ಧ ದೇಶಾದ್ಯಂತ ದೂರು ನೀಡಿರುವುದು ನಮಗೆಲ್ಲ ಗೊತ್ತಿದೆ. ಅದೇ ರೀತಿಯಲ್ಲಿ ಮಣಿಪುರದಲ್ಲಿ ವಿವಾದಿತ ಫೇಸ್‌ಬುಕ್‌ ಪೋಸ್ಟ್ ಹಾಕಿದ ಆರೋಪದ ಮೇಲೆ ಪತ್ರಕರ್ತ ಮತ್ತು ರಾಜಕೀಯ ಕಾರ್ಯಕರ್ತನ ವಿರುದ್ಧ ದೂರು ನೀಡಿದ್ದು, ಅವರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಮಣಿಪುರ ಬಿಜೆಪಿ ಅಧ್ಯಕ್ಷ ಮೃತ ಸೈಖೋಮ್ ತಿಕೇಂದ್ರ ಸಿಂಗ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಮಣಿಪುರ ಬಿಜೆಪಿ ಕಾರ್ಯದರ್ಶಿ ಪಿ.ಪ್ರೇಮಾನಂದ ಮೀಟೈ ಮತ್ತು ಬಿಜೆಪಿ ಉಪಾಧ್ಯಕ್ಷ ಉಷಮ್ ದೇಬನ್ ದೂರು ಸಲ್ಲಿಸಿದ್ದರು. ಅದರ ಆಧಾರದಲ್ಲಿ ಪತ್ರಕರ್ತ ಕಿಶೋರ್‌ಚಂದ್ರ ವಾಂಗ್‌ಖೆಮ್ ಮತ್ತು ರಾಜಕೀಯ ಕಾರ್ಯಕರ್ತ ಎರೆಂಡ್ರೊ ಲೈಚೋಂಬಮ್‌ರನ್ನು ಪೊಲೀಸರು ಬಂಧಿಸಿದ್ದಾರೆ.

ಐಪಿಸಿಯ ಸೆಕ್ಷನ್ 153-ಎ (ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) / 505 (ಬಿ) (2) (ಪ್ರಚೋದನಾಕಾರಿ ಹೇಳಿಕೆ ನೀಡುವುದು) ಅಡಿಯಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಮೇ 17 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಣಿಪುರ ಬಿಜೆಪಿ ಅಧ್ಯಕ್ಷ ಸೈಖೋಮ್ ತಿಕೇಂದ್ರ ಸಿಂಗ್ ಕೋವಿಡ್‌ನಿಂದ ನಿಧನರಾದಾಗ “ಹಸುವಿನ ಸೆಗಣಿ, ಹಸುವಿನ ಗಂಜಲ ಕೆಲಸ ಮಾಡುವುದಿಲ್ಲ. ಆಧಾರವಿಲ್ಲದ ವಾದಗಳು. ನಾನು ನಾಳೆ ಮೀನು ತಿನ್ನುತ್ತೇನೆ” ಎಂದು ಫೇಸ್‌ಬುಕ್‌ನಲ್ಲಿ ವಾಂಗ್‌ಖೆಮ್ ಬರೆದಿದ್ದರು ಎನ್ನಲಾಗಿದೆ. ಅದೇ ರೀತಿ ಎರೆಂಡ್ರೊ ಲೈಚೋಂಬಮ್‌ ಕೂಡ “ಹಸುವಿನ ಸೆಗಣಿ, ಹಸುವಿನ ಗಂಜಲದಿಂದ ಕೊರೊನಾ ವಾಸಿಯಾಗುವುದಿಲ್ಲ. ವಿಜ್ಞಾನ ಮತ್ತು ಸಾಮಾನ್ಯ ಜ್ಞಾನದಿಂದ ವಾಸಿಯಾಗುತ್ತದೆ ಪ್ರೊಫೆಸರ್‌ಜಿ, RIP” ಎಂದು ಬರೆದಿದ್ದರು.

ಹಸುವಿನ ಸೆಗಣಿ, ಹಸುವಿನ ಗಂಜಲದಿಂದ ಕೊರೊನಾ ವಾಸಿಯಾಗುತ್ತದೆ ಎಂದು ಹಲವು ಬಿಜೆಪಿ ನಾಯಕರು ಹೇಳಿಕೆ ನೀಡಿದ್ದಾರೆ. ಅದನ್ನು ಟೀಕಿಸಲು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ ಇಬ್ಬರನ್ನು ಬಂಧಿಸಲಾಗಿದೆ.

ಈ ಇಬ್ಬರೂ ಈ ಮೊದಲು ಸಹ ಬಿಜೆಪಿ ನೀಡಿದ ದೂರುಗಳಿಂದಾಗಿ ಬಂಧಿತರಾಗಿದ್ದರು. ಅವರ ಮೇಲೆ ದೇಶದ್ರೋಹದ ಆರೋಪ ಹೊರಿಸಲಾಗಿತ್ತು.


ಇದನ್ನೂ ಓದಿ; ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...