Homeರಾಷ್ಟ್ರೀಯಕೇಜ್ರಿವಾಲ್‌‌‌ ಹತ್ಯೆಗೆ ಬಿಜೆಪಿ ಸಂಚು ರೂಪಿಸಿದೆ: ಎಎಪಿ ಗಂಭೀರ ಆರೋಪ

ಕೇಜ್ರಿವಾಲ್‌‌‌ ಹತ್ಯೆಗೆ ಬಿಜೆಪಿ ಸಂಚು ರೂಪಿಸಿದೆ: ಎಎಪಿ ಗಂಭೀರ ಆರೋಪ

- Advertisement -
- Advertisement -

ಗುಜರಾತ್ ಮತ್ತು ದೆಹಲಿ ಮುನ್ಸಿಪಲ್ ಕಾರ್ಪೋರೇಷನ್‌‌‌(ಎಂಸಿಡಿ)ನ ಚುನಾವಣಾ ಸೋಲಿನ ಭೀತಿಯಿಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಸಂಚು ರೂಪಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಆರೋಪಿಸಿದ್ದು, ಇದಾಗಿ ಒಂದು ದಿನದ ನಂತರ ಈ ಬಗ್ಗೆ ತನಿಖೆಗೆ ಒತ್ತಾಯಿಸಿದ್ದು, ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಕೂಡಾ ನಗರ ಪೊಲೀಸ್ ಕಮಿಷನರ್‌ಗೆ ಎಎಪಿ ನಾಯಕರ ಆರೋಪಗಳನ್ನು ಪರಿಗಣಿಸುವಂತೆ ಸೂಚಿಸಿದ್ದಾರೆ. “ಡಿಸಿಎಂ ಮನೀಶ್ ಸಿಸೋಡಿಯಾ ಸೇರಿದಂತೆ ಎಎಪಿ ನಾಯಕರ ಟ್ವೀಟ್‌ಗಳು ಮತ್ತು ಹೇಳಿಕೆಗಳನ್ನು ಲೆಫ್ಟಿನೆಂಟ್ ಗವರ್ನರ್‌ ಗಮನಿಸಿದ್ದಾರೆ. ಅಂತಹ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಲು ಪೊಲೀಸ್ ಆಯುಕ್ತರನ್ನು ಕೇಳಿದ್ದಾರೆ” ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಗುಜರಾತ್ ಮತ್ತು ಎಂಸಿಡಿ ಚುನಾವಣೆಯ ಸೋಲಿನ ಭಯದಿಂದಾಗಿ, ಬಿಜೆಪಿಯು ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲಲು ಸಂಚು ರೂಪಿಸುತ್ತಿದೆ” ಎಂದು ಸಿಸೋಡಿಯಾ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಜೈಲಿನಲ್ಲೆ ಮಸಾಜ್ ಮಾಡಿಸಿಕೊಂಡ ದೆಹಲಿ ಎಎಪಿ ಸಚಿವ: ವಿಡಿಯೊ ವೈರಲ್

“ಬಿಜೆಪಿ ಸಂಸದ ಮನೋಜ್ ತಿವಾರಿ ಅವರು ಕೇಜ್ರಿವಾಲ್ ಮೇಲೆ ದಾಳಿ ಮಾಡಲು ತಮ್ಮ ಗೂಂಡಾಗಳಿಗೆ ಬಹಿರಂಗವಾಗಿ ಕೇಳಿಕೊಳ್ಳತ್ತಿದ್ಮದು, ಈ ಬಗ್ಗೆ ಅವರು ಸಂಪೂರ್ಣ ಯೋಜನೆಯನ್ನು ಮಾಡಿದ್ದಾರೆ. ಅವರ ಕ್ಷುಲ್ಲಕ ರಾಜಕೀಯಕ್ಕೆ ಎಎಪಿ ಹೆದರುವುದಿಲ್ಲ ಮತ್ತು ಅವರ ಗೂಂಡಾಗಿರಿಗೆ ಜನರು ತಕ್ಕ ಉತ್ತರ ನೀಡುತ್ತಾರೆ” ಎಂದು ಸಿಸೋಡಿಯಾ ಬರೆದಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಸೋಡಿಯಾ, “ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ನಾಯಕ ಮನೋಜ್ ತಿವಾರಿ ಅವರು ಗುರುವಾರ ಬಳಸಿದ ರೀತಿಯ ಭಾಷೆಯು ಬಹಿರಂಗ ಬೆದರಿಕೆಯಾಗಿದೆ. ಈ ಬೆದರಿಕೆಗಾಗಿ ಮನೋಜ್ ತಿವಾರಿ ಅವರನ್ನು ಬಂಧಿಸಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಹೇಳಿದ್ದರು.

ಹಿಂದಿನ ದಿನವಷ್ಟೆ ಮನೋಜ್‌ ತಿವಾರಿ, ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಭದ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಭ್ರಷ್ಟಾಚಾರ ಮತ್ತು ಎಂಸಿಡಿ ಚುನಾವಣೆಗೆ ‘ಟಿಕೆಟ್ ಮಾರಾಟ’ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದರು.

ಇದನ್ನೂ ಓದಿ: ಅಮಿತ್ ಶಾರನ್ನು ಬಂಧಿಸಿ: ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ಆಗ್ರಹ

“ಜನರು ಮತ್ತು ಎಎಪಿ ಸ್ವಯಂಸೇವಕರು ನಿರಂತರ ಭ್ರಷ್ಟಾಚಾರ, ಟಿಕೆಟ್ ಮಾರಾಟ (ಎಂಸಿಡಿ ಚುನಾವಣೆಗೆ), ಅತ್ಯಾಚಾರಿಗಳೊಂದಿಗಿನ ಸ್ನೇಹ ಮತ್ತು ಜೈಲಿನ ಘಟನೆಗಳಲ್ಲಿ ಮಸಾಜ್ ಮಾಡಿದ ಬಗ್ಗೆ ಕೋಪಗೊಂಡಿದ್ದಾರೆ. ಹೀಗಾಗಿ ನಾನು ಅರವಿಂದ್ ಕೇಜ್ರಿವಾಲ್ ಅವರ ಭದ್ರತೆಯ ಬಗ್ಗೆ ಕಾಳಜಿ ವಹಿಸುತ್ತೇನೆ. ಅವರ ಶಾಸಕರಿಗೂ ಥಳಿಸಲಾಗಿದೆ. ಇದು ದೆಹಲಿ ಮುಖ್ಯಮಂತ್ರಿಗೂ ಸಂಭವಿಸಬಾರದು” ಎಂದು ಈಶಾನ್ಯ ದೆಹಲಿ ಸಂಸದರೂ ಆಗಿರುವ ಮನೋಜ್ ತಿವಾರಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅವೆಲ್ಲ ಸುಮ್ಮನೆ ಸ್ವಾಮಿ ಕೇಜ್ರಿವಾಲಿ ಬಿಜೆಪಿಗೆ ಸಣ್ಣ ಕೂಸು ಅಂತದ್ರಲ್ಲಿ ಅವರೇನು ಮಾಡ್ತಾರೆ, ಏನು ಮಾಡಲ್ಲ ಅವರಿಗೆ ಕೇಜ್ರಿವಾಲೆ ಬೇಕು ಇವೆಲ್ಲ ನಾಟಕ ಅವರು ಮತದಾನದಲ್ಲಿ ಫೈಟ್ ಕೊಟ್ರೆನೇ ಬಿಜೆಪಿಗೆ ಲಾಭ ಹಾಗಾಗಿ ಇದೆಲ್ಲ ಕಪೋಲ ಕಲ್ಪಿತ ಜನರ ಗಮನ ಸೆಳೆಯುವುದು ಅಷ್ಟೇ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...