Homeಮುಖಪುಟಫೋನ್ ಹ್ಯಾಕ್ ಮಾಡಿಯೂ ಬಿಜೆಪಿಗೆ ಚುನಾವಣೆ ಗೆಲ್ಲಲು ಸಾಧ್ಯವಾಗಲಿಲ್ಲ: ಟಿಎಂಸಿ

ಫೋನ್ ಹ್ಯಾಕ್ ಮಾಡಿಯೂ ಬಿಜೆಪಿಗೆ ಚುನಾವಣೆ ಗೆಲ್ಲಲು ಸಾಧ್ಯವಾಗಲಿಲ್ಲ: ಟಿಎಂಸಿ

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಹೆಸರುಗಳು ಪೆಗಾಸಸ್ ಪ್ರಾಜೆಕ್ಟ್‌ನಲ್ಲಿ ಕೇಳಿ ಬಂದ ಹಿನ್ನೆಲೆ, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರದ ವಿರುದ್ಧ ಟಿಎಂಸಿ ವಾಗ್ದಾಳಿ ನಡೆಸಿದೆ. “ಫೋನ್  ಹ್ಯಾಕಿಂಗ್” ಹೊರತಾಗಿಯೂ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಗೆಲ್ಲಲು ಸಾಧ್ಯವಾಗಲಿಲ್ಲ” ಎಂದು ತೃಣಮೂಲ ಕಾಂಗ್ರೆಸ್ ವ್ಯಂಗ್ಯವಾಡಿದೆ.

’ಪೆಗಾಸಸ್’ ತಂತ್ರಾಂಶವನ್ನು ಬಳಸಿಕೊಂಡು ಭಾರತದ ವಿರೋಧ ಪಕ್ಷಗಳ ನಾಯಕರು, ಪತ್ರಕರ್ತರು, ಸಚಿವರ ಫೋನ್ ಟ್ಯಾಪ್‌ ಮಾಡಲಾಗುತ್ತಿದೆ ಎಂದು ಪ್ಯಾರಿಸ್ ಮೂಲದ ಪಾರ್ಬಿಡನ್ ಸ್ಟೋರಿಸ್ ತನಿಖಾ ವರದಿ ಬಹಿರಂಗ ಪಡಿಸಿದೆ. ಇದರಲ್ಲಿ ಟಿಎಂಸಿ ಪಕ್ಷದ ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಹೆಸರುಗಳು ಪಟ್ಟಿಯಲ್ಲಿವೆ.

ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ಗೂಢಚರ್ಯೆ ತಂತ್ರಾಂಶ ಬಳಸಿಕೊಂಡು ಪ್ರಸ್ತುತ ಸಂಪುಟದಲ್ಲಿರುವ ಇಬ್ಬರು ಮಂತ್ರಿಗಳು, 40 ಕ್ಕೂ ಹೆಚ್ಚು ಪತ್ರಕರ್ತರು, ಮೂವರು ವಿರೋಧ ಪಕ್ಷದ ನಾಯಕರು ಮತ್ತು ಒಬ್ಬ ನ್ಯಾಯಾಧೀಶರು, ಹಲವಾರು ಉದ್ಯಮಿಗಳು ಮತ್ತು  ಹೋರಾಟಗಾರರು ಸೇರಿದಂತೆ 300 ಕ್ಕೂ ಹೆಚ್ಚು ಜನರ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ.

ಇದನ್ನೂ ಓದಿ: ನ್ಯಾ. ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾಕೆಯ ಇಡೀ ಕುಟುಂಬದ ಮೇಲೆ ಪೆಗಾಸಸ್ ಕಣ್ಗಾವಲು!

ಭಾನುವಾರ ಪ್ರಕಟವಾದ ವರದಿಯ ಪ್ರಕಾರ, ಟಿಎಂಸಿಯ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಫೋನ್ ನಂಬರ್‌ ಅನ್ನು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಹ್ಯಾಕ್ ಮಾಡಲಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಸೋದರಳಿಯ ಮತ್ತು ಟಿಎಂಸಿಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಯಾಗಿರುವ ಅಭಿಷೇಕ್ ಬ್ಯಾನರ್ಜಿಯ ಮೊಬೈಲ್ ಸಂಖ್ಯೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ಅಭಿಷೇಕ್ ಬ್ಯಾನರ್ಜಿ, “ಸೋತವರಿಗಾಗಿ ಎರಡು ನಿಮಿಷಗಳ ಮೌನವಹಿಸಿ. ಇಡಿ, ಸಿಬಿಐ, ಎನ್ಐಎ, ಐಟಿ, ಇಸಿಐ, ಬಿಜೆಪಿಯ ಹಣ ಮತ್ತು ಶಕ್ತಿ ಇದರ ಜೊತೆಗೆ ಪೆಗಾಸಸ್ ಸ್ಪೈಯಿಂಗ್… ಇಷ್ಟಿದ್ದರೂ ಅಮಿತ್‌ ಶಾ ಅವರಂತಹವರು 2021ರ ಬಂಗಾಳ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಲಿಲ್ಲ. ದಯವಿಟ್ಟು 2024 ರಲ್ಲಿ ಮತ್ತಷ್ಟು ಉತ್ತಮ ಸಂಪನ್ಮೂಲಗಳೊಂದಿಗೆ ಸಿದ್ಧರಾಗಿ!” ಎಂದು ವ್ಯಂಗ್ಯವಾಡಿದ್ದಾರೆ.

ಟಿಎಂಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ಬಿಜೆಪಿ ಭಯ ಮತ್ತು ಮನೋರೋಗದಿಂದ ಬಳಲುತ್ತಿದೆ ಎಂದು ಒಕ್ಕೂಟ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: Explainer: ಏನಿದು ಪೆಗಾಸಸ್? ಹೇಗೆ ಫೋನ್ ಹ್ಯಾಕ್ ಮಾಡುತ್ತದೆ? ಅಪಾಯಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...