Homeಮುಖಪುಟಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

- Advertisement -
- Advertisement -

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ. 

ಆರೋಪಿ ಸೋಹಮ್ ನಾಯ್ಕ್ ಕಳೆದ ಮೂರು ವರ್ಷಗಳಿಂದ ಬಾಲಕಿಯರ ಲೈಂಗಿಕ ಶೋಷಣೆ ನಡೆಸಿ, ಆ ದೃಶ್ಯಗಳನ್ನು ವಿಡಿಯೋ ಮಾಡಿಟ್ಟುಕೊಂಡು ಬಾಲಕಿಯರನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಈ ವಿಡಿಯೋಗಳನ್ನು ಸಾರ್ವಜನಿಕವಾಗಿ ಹಂಚಿಕೊಂಡ ಹಿನ್ನೆಲೆ ಕೃತ್ಯ ಬೆಳಕಿಗೆ ಬಂದಿದೆ.

ಮಾರ್ಚ್ 23ರಂದು ಆರೋಪಿಯನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಪೋಕ್ಸೊ ಕಾಯ್ದೆ, ಗೋವಾ ಮಕ್ಕಳ ಕಾಯ್ದೆ, ಐಟಿ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸೋಹಮ್ ನಾಯ್ಕ್ ವಿಡಿಯೋಗಳು ವೈರಲ್ ಆದ ಬಳಿಕ, ಮಾರ್ಚ್ 22ರಂದು ಸಾರ್ವಜನಿಕರು ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದರು.

ಮಂಗಳವಾರ (ಮಾ.24) ಪ್ರಕರಣವನ್ನು ಕ್ರೈಂ ಬ್ರ್ಯಾಂಚ್‌ಗೆ ವರ್ಗಾಯಿಸಲಾಗಿದೆ. ಈವರೆಗೆ ಮೂರು ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಇಬ್ಬರು ಸಂತ್ರಸ್ತರ ಹೇಳಿಕೆಗಳನ್ನು ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ತನಿಖೆಯ ಪ್ರಕಾರ, ಕೃತ್ಯ ನಡೆದಾಗ ಆರೋಪಿ ಮತ್ತು ಸಂತ್ರಸ್ತರು ಇಬ್ಬರೂ ಅಪ್ರಾಪ್ತರಾಗಿದ್ದರು ಎಂದು timesofindia.indiatimes.com ವರದಿ ಮಾಡಿದೆ.

ತನಿಖೆಯನ್ನು ಪರಿಶೀಲಿಸಲು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ದಕ್ಷಿಣ ಗೋವಾ ಎಸ್ಪಿ ಸಂತೋಷ್ ದೇಸಾಯಿ, ಈ ವಿಷಯದಲ್ಲಿ ಆರಂಭದಲ್ಲಿ ಒಂದು ಪ್ರಕರಣ ದಾಖಲಾಗಿದ್ದರೆ, ಸೋಮವಾರ ಇನ್ನೂ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ. ಪ್ರಮುಖ ಆರೋಪಿ ಎಂದು ಪರಿಗಣಿಸಲಾದ ಸೋಹಮ್‌ನನ್ನು ಪ್ರಸ್ತುತ ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರಾಗಿರುವ ಇತರ ಹಲವರನ್ನು ಸಹ ವಿಚಾರಣೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ತನಿಖೆಯ ಪ್ರಗತಿಯನ್ನು ಪರಿಶೀಲಿಸಲು ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ವರ್ಷಾ ಶರ್ಮಾ ಕರ್ಚೋರೆಮ್ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು, ಸಂತ್ರಸ್ತರ ಹೇಳಿಕೆಗಳ ಆಧಾರದ ಮೇಲೆ, ಇನ್ನೂ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಆರೋಪಿಗಳು ಮತ್ತು ಸಂತ್ರಸ್ತರು ಕಾಲೇಜಿನಲ್ಲಿದ್ದಾಗ ಸುಮಾರು ಮೂರು ವರ್ಷಗಳ ಹಿಂದೆ ಈ ಘಟನೆಗಳು ನಡೆದಿವೆ. ವಿಡಿಯೋ ತುಣುಕುಗಳಲ್ಲಿ ಸಂತ್ರಸ್ತರು ಕಂಡು ಬಂದಿಲ್ಲ. ಆರೋಪಿಗಳ ಮೊಬೈಲ್ ಅನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಶರ್ಮಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...