Homeಕರ್ನಾಟಕಬೆಂಗಳೂರು ಮತದಾರರ ಮಾಹಿತಿ ಕಳ್ಳತನದಲ್ಲಿ ಬಿಜೆಪಿಯ ನೇರ ಕೈವಾಡ; ಏಜೆಂಟರಿಗೆ ಪಕ್ಷದ ಕಚೇರಿಯಲ್ಲೆ ತರಬೇತಿ!

ಬೆಂಗಳೂರು ಮತದಾರರ ಮಾಹಿತಿ ಕಳ್ಳತನದಲ್ಲಿ ಬಿಜೆಪಿಯ ನೇರ ಕೈವಾಡ; ಏಜೆಂಟರಿಗೆ ಪಕ್ಷದ ಕಚೇರಿಯಲ್ಲೆ ತರಬೇತಿ!

ಬಿಬಿಎಂಪಿ ಅನುಮತಿ ರದ್ದುಗೊಳಿಸಿದ 15 ದಿನಗಳ ನಂತರವೂ ಅಕ್ರಮ ನಡೆಯುತ್ತಲೆ ಇತ್ತು!

- Advertisement -
- Advertisement -

ಬೆಂಗಳೂರು ಮತದಾರರ ಮಾಹಿತಿ ಕಳ್ಳತನದಲ್ಲಿ ರಾಜ್ಯದ ಆಡಳಿತರೂಢ ಪಕ್ಷವಾದ ಬಿಜೆಪಿಗೆ ನೇರ ಕೈವಾಡವಿದೆ ಎಂದು ದಿ ನ್ಯೂಸ್ ಮಿನಿಟ್‌ ಹೊಸ ವರದಿ ಹೇಳಿದೆ. ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ತನ್ನ ಏಜೆಂಟರಿಗೆ ಬಿಜೆಪಿ ಕಚೇರಿಯಲ್ಲೆ ತರಬೇತಿ ನೀಡುತ್ತಿತ್ತು ಮತ್ತು ಬಿಬಿಎಂಪಿ ಅವರಿಗೆ ನೀಡಿದ್ದ ಅನುಮತಿ ರದ್ದುಗೊಳಿಸಿದ 15 ದಿನಗಳ ನಂತರವೂ ಅದು ಮುಂದುವರೆದಿತ್ತು ಎಂದು ಆರೋಪಿಸಿದೆ.

ದಿ ನ್ಯೂಸ್ ಮಿನಿಟ್ ಮತ್ತು ಪ್ರತಿಧ್ವನಿ ಜಂಟಿಯಾಗಿ ನಡೆಸಿದ ತನಿಖಾ ವರದಿಯಲ್ಲಿ ಬೆಂಗಳೂರಿನಲ್ಲಿ ಬೃಹತ್ ಮತದಾರರ ಮಾಹಿತಿ ಕಳ್ಳತನ ಹಗರಣ ಬಯಲಿಗೆಳೆದಿತ್ತು. ಈ ಹಗರಣದಲ್ಲಿ ಪೊಲೀಸರು ಈಗಾಗಲೆ ಒಟ್ಟು ಐವರನ್ನು ಬಂಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರಿನ ಹೊಂಗಸಂದ್ರದ ಬಿಜೆಪಿ ವಾರ್ಡ್ ಕಚೇರಿಯಲ್ಲೆ ಏಜೆಂಟರಿಗೆ ತರಬೇತಿ ನೀಡಲಾಗಿತ್ತು ಎಂದು ನ್ಯೂಸ್ ಮಿನಿಟ್‌ ಹೇಳಿದೆ. ಚಿಲುಮೆ ಸಂಸ್ಥೆಯ ಉದ್ಯೋಗಾಕಾಂಕ್ಷಿಯಂತೆ ತೆರಳಿದ್ದ ನ್ಯೂಸ್ ಮಿನಿಟ್‌‌ನ ವ್ಯಕ್ತಿಯೊಬ್ಬರು ಮೂಲಕ ಈ ಮಾಹಿತಿ ಬಹಿರಂಗವಾಗಿದೆ. ಈ ಕಚೇರಿಯಲ್ಲಿ ಕಾರ್ಯಕರ್ತರು ಕಾರ್ಯನಿರ್ವಹಿಸುವ ಏರಿಯಾಗಳ ನಕ್ಷೆ ಮಾಡುವುದು ಮತ್ತು ಮತದಾರರ ಡೇಟಾವನ್ನು ಹೇಗೆ ಸಂಗ್ರಹಿಸುವುದು ಎಂಬುದರ ಕುರಿತು ಚಿಲುಮೆ ಎನ್‌ಜಿಒ ತನ್ನ ಕ್ಷೇತ್ರ ಕಾರ್ಯಕರ್ತರಿಗೆ ತರಬೇತಿ ನೀಡಿತ್ತು ಎಂದು ನ್ಯೂಸ್ ಮಿನಿಟ್ ವರದಿ ಹೇಳಿದೆ.

ಇದನ್ನೂ ಓದಿ: ಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಎನ್‌ಜಿಒ ನಿರ್ದೇಶಕ ರವಿಕುಮಾರ್ ಬಂಧನ

ಬಿಜೆಪಿಯ ಈ ಕಚೇರಿಯನ್ನು ಕಾರ್ಪೊರೇಟರ್ ಹುದ್ದೆಯ ಆಕಾಂಕ್ಷಿಗಳು ಪ್ರಾಥಮಿಕವಾಗಿ ಬಳಸುತ್ತಾರೆ. ಸೆಪ್ಟೆಂಬರ್ 2020 ರವರೆಗೆ ವಾರ್ಡ್‌ನ ಕೌನ್ಸಿಲರ್ ಬಿಜೆಪಿಯ ಭಾರತಿ ರಾಮಚಂದ್ರ ಆಗಿದ್ದರು. ಈ ಕಚೇರಿಗೆ ಪ್ರಸ್ತುತ ಶಾಸಕರ ವಾರ್ಡ್‌ ಕಚೇರಿ ಎಂದು ಹೆಸರು ಹಾಕಲಾಗಿದೆ. ಹೊಂಗಸಂದ್ರವು ಬಿಜೆಪಿ ಶಾಸಕ ಸತೀಶ್‌ ರೆಡ್ಡಿ ಅವರ ಕ್ಷೇತ್ರಕ್ಕೆ ಸೇರುತ್ತದೆ.

PC: TNM

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಮ್ಮ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಆದೇಶಿಸಿದ ನಂತರವೂ ಚಿಲುಮೆಯ ಏಜೆಂಟರು ಅಕ್ರಮ ಮತದಾರರ ಮಾಹಿತಿ ಸಂಗ್ರಹಣೆಯನ್ನು ಮುಂದುವರೆಸುತ್ತಿದ್ದಾರೆ ಎಂಬ ಹೇಳಿಕೆಗಳನ್ನು ಪರಿಶೀಲಿಸಲು ನ್ಯೂಸ್ ಮಿನಿಟ್‌ ರಹಸ್ಯವಾಗಿ ಅಲ್ಲಿಗೆ ತೆರಳಿತ್ತು.

ಇದನ್ನೂ ಓದಿ: ಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಸಂಸ್ಥೆಯ ಇಬ್ಬರ ಬಂಧನ, ನಿರ್ದೇಶಕ ಪರಾರಿ

ಈ ಹಿಂದೆ ವರದಿಯಾದಂತೆ, ನವೆಂಬರ್ 2 ರಂದು ಚುನಾವಣಾ ವಂಚನೆಯ ತನಿಖೆಯನ್ನು ನ್ಯೂಸ್ ಮಿನಿಟ್‌ ಪ್ರಾರಂಭಿಸಿದ ನಂತರ BBMP ತರಾತುರಿಯಲ್ಲಿ ಚಿಲುಮೆ ಎನ್‌ಜಿಒಗೆ ನೀಡಿದ್ದ ಅನುಮತಿಯನ್ನು ರದ್ದುಗೊಳಿಸಿತು. ಆದರೂ ಕನಿಷ್ಠ ನವೆಂಬರ್ 17 ರವರೆಗೆ ಚಿಲುಮೆಯು ತನ್ನ ಕಾರ್ಯಾಚರಣೆಯನ್ನು ಯಾವುದೇ ಬದಲಾವಣೆಯಿಲ್ಲದೆ ಮುಂದುವರಿಸಿತ್ತು ನ್ಯೂಸ್ ಮಿನಿಟ್‌ ವರದಿ ಹೇಳಿದೆ.

ಬಿಬಿಎಂಪಿಯ ರದ್ದತಿ ಆದೇಶವನ್ನು ಧಿಕ್ಕರಿಸಿ ಚಿಲುಮೆಯು ಹೊಸ ತಾಜಾ ಫೀಲ್ಡ್ ಏಜೆಂಟರನ್ನು ನೇಮಿಸಿಕೊಳ್ಳುತ್ತಿದೆ ಎಂಬ ಸುಳಿವು ಆಧರಿಸಿ, ನ್ಯೂಸ್‌ ಮಿನಿಟ್‌‌ ನವೆಂಬರ್ 12 ರಂದು ಕೆಲಸ ಹುಡುಕುವ ನೆಪದಲ್ಲಿ ಚಿಲುಮೆ ಎನ್‌ಜಿಒ ಮಲ್ಲೇಶ್ವರಂ ಕಚೇರಿಗೆ ಭೇಟಿ ನೀಡಿತ್ತು. ಕೆಲವು ಪ್ರಶ್ನೆಗಳ ನಂತರ ನ್ಯೂಸ್‌ ಮಿನಿಟ್‌‌ನ ವ್ಯಕ್ತಿಯನ್ನು ಅಲ್ಲಿ ಕೆಲಸಕ್ಕೆ ಸೇರಿಸಿಕೊಂಡಿದ್ದರು.

ನವೆಂಬರ್ 16 ರಂದು ದಕ್ಷಿಣ ಬೆಂಗಳೂರಿನ ಹೊಂಗಸಂದ್ರ ಪ್ರದೇಶದಲ್ಲಿ ತರಬೇತಿ ಕೇಂದ್ರದ ಸ್ಥಳದ ಲೊಕೇಷನ್‌ ಕಳುಹಿಸಿದ್ದರು. ಮರುದಿನ ಸ್ಥಳಕ್ಕೆ ತೆರಳಿದ್ದ ನ್ಯೂಸ್ ಮಿನಿಟ್‌ನ ವ್ಯಕ್ತಿ, ಬಿಜೆಪಿಯ ಬೊಮ್ಮಸಂದ್ರ ಶಾಸಕ ಸತೀಶ್ ರೆಡ್ಡಿ ಅವರ ಕಚೇರಿಯಲ್ಲಿ ತರಬೇತಿ ನಡೆಯುತ್ತಿರುವುದನ್ನು ಕಂಡು ಅಚ್ಚರಿಗೊಂಡಿದ್ದಾರೆ. ಅವರು ಕಚೇರಿಯ ಒಳಗಿನ ಮತ್ತು ಹೊರಗಿನ ಫೋಟೋಗಳನ್ನು ಕ್ಲಿಕ್ ಮಾಡಿದ್ದು, ಅದನ್ನು ನ್ಯೂಸ್ ಮಿನಿಟ್‌ ಪ್ರಕಟಿಸಿದೆ. ಕಚೇರಿಯ ಮುಖ್ಯ ಕಿಟಕಿಯ ಮೇಲೆ ಸತೀಶ್ ರೆಡ್ಡಿ ಅವರ ಚಿತ್ರವಿರುವ ದೊಡ್ಡ ಪೋಸ್ಟರ್ ಅನ್ನು ಫೋಟೋಗಳಲ್ಲಿ ಸ್ಪಷ್ಟವಾಗಿ ಕಾಣುತ್ತದೆ.

ಇದನ್ನೂ ಓದಿ: ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

“ನವೆಂಬರ್‌ 17 ರಂದು ಹಗರಣ ಬಯಲಾಗುತ್ತಿದ್ದಂತೆ ಕನ್ನಡ ಮಾಧ್ಯಮಗಳು ಅದನ್ನು ವರದಿ ಮಾಡಿದ್ದವು. ಹೀಗಾಗಿ ಏಜೆಂಟರಿಗೆ ತರಬೇತಿ ನೀಡುತ್ತಿದ್ದ ಬಿಜೆಪಿ ಕಚೇರಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ನಂತರ ನಡೆದ ಸಂಕ್ಷಿಪ್ತ ಚರ್ಚೆಯ ನಂತರ ಎಲ್ಲರೂ ಅಲ್ಲಿಂದ ಹಿಂತಿರುಗಿದ್ದು, ಅಲ್ಲಿನ ಮೇಲ್ವಿಚಾರಕರು, ‘ತಾಂತ್ರಿಕ ಸಮಸ್ಯೆಯಿಂದ ಕೆಸಲ ನಡೆಸಲು ಸಾಧ್ಯವಾಗುತ್ತಿಲ್ಲ. ಮತ್ತೆ ಪುನರಾರಂಭಿಸಿದಾಗ ತಿಳಿಸಲಾಗುವುದು’ ಎಂದು ಹೇಳಿದ್ದರು” ಎಂದು ನ್ಯೂಸ್ ಮಿನಿಟ್‌ ವರದಿ ಹೇಳಿದೆ.

ನವೆಂಬರ್ 19 ರಂದು, ನ್ಯೂಸ್‌ ಮಿನಿಟ್‌‌ನ ವ್ಯಕ್ತಿಯು ಮೇಲ್ವಿಚಾರಕರಿಗೆ ಕರೆ ಮಾಡಿ ಚಿಲುಮೆ ಕಚೇರಿಗಳ ಮೇಲೆ ಪೋಲೀಸ್ ದಾಳಿಯ ಬಗ್ಗೆ ಕೇಳಿದ್ದು, ತಮ್ಮ ಕೆಲಸದ ಬಗ್ಗೆ ಪ್ರಶ್ನಿಸಿದ್ದಾರೆ. ಮೇಲ್ವಿಚಾರಕರು ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸಿದ್ದು, ಚಿಂತಿಸಬೇಕಾಗಿಲ್ಲ ಎಂದು ಹೇಳಿದ್ದಾಗಿ ವರದಿ ಉಲ್ಲೇಖಿಸಿದೆ.

“ಸಣ್ಣಪುಟ್ಟ ಸಮಸ್ಯೆಗಳಿದ್ದು, ಶೀಘ್ರದಲ್ಲೇ ಕಾರ್ಯಾಚರಣೆ ಪುನರಾರಂಭಿಸಲಾಗುವುದು” ಎಂದು ಮೇಲ್ವಿಚಾರಕರು ತಿಳಿಸಿದ್ದಾರೆ. ಆದರೆ, ಅಂದಿನಿಂದ ಒಂದನ್ನು ಹೊರತುಪಡಿಸಿ ಎಲ್ಲಾ ಸಂಖ್ಯೆಗಳು ಸ್ವಿಚ್ ಆಫ್ ಆಗಿವೆ ಎಂದು ನ್ಯೂಸ್ ಮಿನಿಟ್‌ ವರದಿ ಹೇಳಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಂಗಳೂರು ನಗರ ಉತ್ತರ: ಹಿಂದುತ್ವದ ಫ್ರಿಂಜ್ ಅಖಾಡದಲ್ಲಿ ಕಾಂಗ್ರೆಸ್ ಕ್ಯಾಂಡಿಡೇಟ್ ಯಾರು?

ತಮ್ಮ ವಾರ್ಡ್ ಕಚೇರಿಯಲ್ಲಿ ನಡೆದ ತರಬೇತಿ ಕುರಿತು ಸತೀಶ್ ರೆಡ್ಡಿ ಅವರ ಪ್ರತಿಕ್ರಿಯೆ ಕೇಳಿದಾಗ, ಈ ಬಗ್ಗೆ ಯಾವುದೆ ಮಾಹಿತಿ ತನಗೆ ಇಲ್ಲ ಎಂದು ಶಾಸಕ ಹೇಳಿದ್ದಾಗಿ ನ್ಯೂಸ್ ಮಿನಿಟ್‌ ಹೇಳಿದೆ. ತರಬೇತಿಗಾಗಿ ತಮ್ಮ ಅನುಮತಿಯಿಲ್ಲದೆ ಕಚೇರಿಯನ್ನು ಬಳಸುತ್ತಿದ್ದಾರೆಯೇ ಎಂಬ ಪ್ರಶ್ನೆಗೆ, ಅನೇಕ ಜನರು ಕಚೇರಿಗೆ ಭೇಟಿ ನೀಡುತ್ತಾರೆ ಮತ್ತು ತರಬೇತಿಯ ಬಗ್ಗೆ ತನಗೆ ತಿಳಿದಿಲ್ಲ ಎಂದು ಅವರು ಉತ್ತರಿಸಿದ್ದಾರೆ.

ನ್ಯೂಸ್ ಮಿನಿಟ್‌‌ನ ಸಂಪೂರ್ಣ ವರದಿ ಇಲ್ಲಿ ಓದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...