Homeಮುಖಪುಟಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ ದೇಶದಾದ್ಯಂತ ಚರ್ಚೆಗೆ ಕಾರಣವಾಗಿದೆ.

ಕಳೆದ ಏಪ್ರಿಲ್ 21ರಂದು ರಾಜಸ್ಥಾನದಲ್ಲಿ ಬಿಜೆಪಿ ಆಯೋಜಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮುಸಲ್ಮಾನರ ವಿರುದ್ಧ ಖುದ್ದು ದ್ವೇಷ ಭಾಷಣಗೈದಿದ್ದ ಪ್ರಧಾನಿ ನರೇಂದ್ರ ಮೋದಿ, “ದೇಶದ ಸಂಪತ್ತನ್ನು ಒಟ್ಟುಗೂಡಿಸಿ, ಹೆಚ್ಚು ಮಕ್ಕಳಿರುವ ಮುಸ್ಲಿಮರಿಗೆ ನೀಡುವುದೇ ಕಾಂಗ್ರೆಸ್‌ನ ಪ್ರಣಾಳಿಕೆ” ಎಂದಿದ್ದರು. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುವುದರ ಜೊತೆ ದೊಡ್ಡ ವಿವಾದಕ್ಕೆ ನಾಂದಿ ಹಾಡಿತ್ತು.

ಹಿಂದಿಯ ಖಾಸಗಿ ಸುದ್ದಿ ಸಂಸ್ಥೆ 24 ನ್ಯೂಸ್ ಪತ್ರಕರ್ತ ರಾಜೀವ್ ರಂಜನ್ ಅವರು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ‘ಮಹೋಲ್ ಕ್ಯಾ ಹೇ’ ಎಂಬ ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ. ಈ ವೇಳೆ ಅನಿರೀಕ್ಷಿತವಾಗಿ ಬಿಕಾನೇರ್‌ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಸ್ಮಾನ್ ಘನಿ ಅವರನ್ನು ಮಾತನಾಡಿಸಿದ್ದಾರೆ.

ಪ್ರಧಾನಿಯ ದ್ವೇಷ ಭಾಷಣದ ಬಗ್ಗೆ ಪತ್ರಕರ್ತ ರಾಜೀವ್ ರಂಜನ್ ಅಭಿಪ್ರಾಯ ಕೇಳಿದಾಗ, “ಪ್ರಧಾನಿ ನರೇಂದ್ರ ಮೋದಿ ಭಾರತದ ಮುಸ್ಲಿಮರನ್ನು ಅವಮಾನಿಸಬಾರದು. ದೇಶದ ಅಭಿವೃದ್ಧಿಯತ್ತ ಗಮನ ಹರಿಸಬೇಕು. ಈ ಬಗ್ಗೆ ಪ್ರಧಾನಿಯವರಿಗೆ ಪತ್ರ ಬರೆಯುವ ಬಗ್ಗೆ ಕೂಡ ಯೋಚನೆ ಮಾಡುತ್ತಿದ್ದೇನೆ” ಎಂದು ಉಸ್ಮಾನ್ ಘನಿ ಹೇಳಿದ್ದರು.

ಈ ವಿಡಿಯೋ ವೈರಲ್ ಆದ ನಂತರ, ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಸ್ಥಾನದಿಂದ ಉಸ್ಮಾನ್ ಘನಿ ಅವರನ್ನು ಉಚ್ಚಾಟಿಸಲಾಗಿದೆ ಎಂದು ತಿಳಿದು ಬಂದಿದೆ.

“ಪಕ್ಷದ ವರ್ಚಸ್ಸು ಹಾಳು ಮಾಡಿದ್ದಕ್ಕಾಗಿ ಈ ಕ್ರಮ” ಎಂದ ಬಿಜೆಪಿ!

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ರಾಜಸ್ಥಾನ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಓಂಕಾರ್ ಸಿಂಗ್ ಲಖಾವತ್, “ವಿದ್ಯುನ್ಮಾನ ಮಾಧ್ಯಮಗಳಲ್ಲಿ ಬಿಜೆಪಿಯ ವರ್ಚಸ್ಸು ಹಾಳು ಮಾಡಿದ್ದಕ್ಕಾಗಿ, ಶಿಸ್ತು ಉಲ್ಲಂಘನೆ ಆರೋಪದ ಮೇಲೆ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ಉಸ್ಮಾನ್ ಘನಿ ಅವರನ್ನು ಪಕ್ಷದ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಮೋದಿ ಸರ್ಕಾರ 5ಜಿ ಮೆಗಾ ಹಗರಣವನ್ನು ರೂಪಿಸುತ್ತಿದೆ: ಎಎಪಿ ಮುಖಂಡ ಸಂಜಯ್ ಸಿಂಗ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...