Homeಕರ್ನಾಟಕಬಿಜೆಪಿ ಜಿಲ್ಲಾಧ್ಯಕ್ಷರ ಆಮಿಷ: ಪಕ್ಷಕ್ಕೆ ಬಂದರೆ ಅಧ್ಯಕ್ಷ ಪದವಿ ಗ್ಯಾರೆಂಟಿ ಎಂದ ಬಿ.ಸುರೇಶ್ ಗೌಡ

ಬಿಜೆಪಿ ಜಿಲ್ಲಾಧ್ಯಕ್ಷರ ಆಮಿಷ: ಪಕ್ಷಕ್ಕೆ ಬಂದರೆ ಅಧ್ಯಕ್ಷ ಪದವಿ ಗ್ಯಾರೆಂಟಿ ಎಂದ ಬಿ.ಸುರೇಶ್ ಗೌಡ

- Advertisement -
- Advertisement -

ತುಮಕೂರು ಗ್ರಾಮಾಂತರದ ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯತ್‌ ಸದಸ್ಯರೊಬ್ಬರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಬಿ.ಸುರೇಶ್ ಗೌಡ ಬಿಜೆಪಿ ಪಕ್ಷಕ್ಕೆ ಬಂದರೆ ಅಧ್ಯಕ್ಷ ಪದವಿ ಕೊಡಿಸುವ ಭರವಸೆ ನೀಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸುಮಾರು ಮೂರುವರೆ ನಿಮಿಷವಿರುವ ಈ ಆಡಿಯೋದಲ್ಲಿ ಬಿ.ಸುರೇಶ್ ಗೌಡ ಗ್ರಾಮ ಪಂಚಾಯ್ತಿ ಸದಸ್ಯ ರವಿ ಎಂಬುವರೊಂದಿಗೆ ಮಾತನಾಡಿರುವುದು ತಿಳಿದುಬರುತ್ತದೆ. “ನೀನು ಅಲ್ಲೇನಿರ್ತೀಯಾ, ನಮ್ಮ ಪಕ್ಷಕ್ಕೆ ಬಾ, ಅಲ್ಲಿದ್ರೆ ನೀನು ಏನೂ ಆಗೋಕೆ ಆಗೊಲ್ಲ. ನೀನು ಬಿಜೆಪಿಗೆ ಬಂದ್ರೆ ಅಧ್ಯಕ್ಷ ಆಗ್ತೀಯ. ನಾನು ನಿನಗೆ ಮಾತು ಕೊಡುತ್ತೇನೆ” ಎಂಬ ಸಂಭಾಷಣೆ ಆಡಿಯೋದಲ್ಲಿದೆ.

ಇದನ್ನೂ ಓದಿ:ತುಮಕೂರು: ಬೌದ್ಧ ಧರ್ಮ ಸ್ವೀಕಾರ ಮಾಡಿದ 250 ದಲಿತರು

ಮುಂದೆ ವಿಷಯ ನಾಸಿರ್ ಎಂಬುವರ ಕಡೆ ಹೊರಳುತ್ತದೆ. “ಆ ಸಾಬಿ ಇದಾನಲ್ಲ, ಅವನೆಸರು ಏನೇಳು? ಅದೇನಪ್ಪ ಅವನು, ನಾಸಿರ್. ಅವ್ನು ಕುಮಾರಸ್ವಾಮಿ ಗೊತ್ತು, ರೇವಣ್ಣ ಗೊತ್ತು, ದೇವೇಗೌಡ ಗೊತ್ತ ಅಂತ ನಿಮ್ಮ ಶಾಸಕ ಅವ್ನಲ್ಲ, ಅವ್ನು ಮಾತು ಕೇಳ್ತನಲ್ಲ ನಾಸಿರ್, ಅವ್ನು ಇರೋವರೆಗೂ ನೀನು ಏನೂ ಆಗೋಕೆ ಬಿಡಲ್ಲ. ಸುಮ್ನೆ ಬಂದು ಬಿಡು. ನೀನು ಅಧ್ಯಕ್ಷ ಆಗ್ತೀಯಾ” ಎಂದು ಆಮಿಷ ನೀಡಲಾಗಿದೆ.

ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಬೆಂಬಲಿತ ಶೇಖರ್ ಅನ್ನೋರಿಗೆ ಓಟು ಹಾಕಬೇಡಿ. ಅವ್ನು ಸೋಲ್ತಾನೆ ಅಂತ ಹೇಳಿದ್ದೆ. ಸೀಕ್ರೇಟ್ ಅಂದ್ರೆ ಸೀಕ್ರೇಟ್. ಅದು ಎಲ್ಲೂ ಹೇಳ್ಕೊಬ್ಯಾಡ್ರಿ. ನಾನೇ ಶೇಖರ್ ನನ್ನ ಸೋಲ್ಸಿದೆ ಅಂತಾ ಗೊತ್ತಾದ್ರೆ, ಊರಾಕೆ ಬರೋಕಾಗುತ್ತ, ಮರ್ಯಾದೆ ಹೋಗುತ್ತೆ. ಒಂದ್ ಕೆಲ್ಸ ಮಾಡು ನಮ್ಮ ಕಡೆ ಬಂದು ಬಿಡು ಸಹಾಯ ಮಾಡ್ತೀನಿ. ಅಧ್ಯಕ್ಷನು ಆಗ್ತೀಯ. ನಂಬಿಕೆ ಇದ್ರೆ ಬಾ, ಗೊತ್ತಾಯ್ತ” ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾಗಿ ವೈರಲ್ ಆಗಿದೆ.

ಇದನ್ನೂ ಓದಿ: ತುಮಕೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿ ಗಮನ ಸೆಳೆದ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...