Homeಕರ್ನಾಟಕBJP ಮತೀಯ ಭಾವನೆ ಕೆರಳಿಸುತ್ತದೆಯೆ ವಿನಃ ಗೋವಿನ ಬಗ್ಗೆ ಭಕ್ತಿ, ಕಾಳಜಿ ಇಲ್ಲ: ಸಿದ್ದರಾಮಯ್ಯ

BJP ಮತೀಯ ಭಾವನೆ ಕೆರಳಿಸುತ್ತದೆಯೆ ವಿನಃ ಗೋವಿನ ಬಗ್ಗೆ ಭಕ್ತಿ, ಕಾಳಜಿ ಇಲ್ಲ: ಸಿದ್ದರಾಮಯ್ಯ

ನೂತನ ಗೋಹತ್ಯೆ ನಿಷೇಧ ಕಾಯ್ದೆಯನ್ನು ತರಲು ಹೊರಟಿರುವುದು, ಗೋಸಾಗಾಣಿಕೆದಾರರ ಮೇಲೆ ಸುಳ್ಳು ಆರೋಪ ಹೊರಿಸಿ ಅವರ ಮೇಲೆ ದೌರ್ಜನ್ಯ ನಡೆಸುವವರ ರಕ್ಷಣೆಗಾಗಿಯೇ ಹೊರತು ಗೋವುಗಳ ರಕ್ಷಣೆಗೆ ಅಲ್ಲ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ರಾಜ್ಯದ ಬಿಜೆಪಿ ಸರ್ಕಾರ ಜಾರಿಗೆ ತರಲು ಹೊರಟಿರುವ ಗೋಹತ್ಯೆ ನಿಷೇಧ ಕಾಯ್ದೆ ಕಠೋರ ಮತ್ತು ಅವೈಜ್ಞಾನಿಕ ಮಾತ್ರವಲ್ಲ, ಸಂಪೂರ್ಣ ರೈತವಿರೋಧಿಯಾಗಿದೆ. ಈ ಕಾಯ್ದೆಗೆ ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಲಾಭ ಪಡೆಯುವ ದುರುದ್ದೇಶ ಇದೆಯೇ ಹೊರತು ಗೋವಿನ ಬಗ್ಗೆ ಭಕ್ತಿಯಾಗಲಿ, ಕಾಳಜಿಯಾಗಲಿ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “ಜಾನುವಾರುಗಳ ಬಗ್ಗೆ ಬಿಜೆಪಿ ಸರ್ಕಾರ ಪ್ರಾಮಾಣಿಕವಾದ ಕಾಳಜಿ ಹೊಂದಿದ್ದರೆ ಜಾನುವಾರು ಸಂಬಂಧಿ ಆರ್ಥಿಕ ಮತ್ತು ಸಾಮಾಜಿಕ ಅಧ್ಯಯನವನ್ನು ತಜ್ಞರಿಂದ ನಡೆಸಿ, ಅದರ ವರದಿ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಿ ನಂತರ ಗೋಹತ್ಯೆ ನಿಷೇಧ ಕಾಯ್ದೆಯನ್ನು ರೂಪಿಸಬೇಕು” ಎಂದು ಹೇಳಿದ್ದಾರೆ.

“ಗೋವುಗಳ ಬಗ್ಗೆ ಬಿಜೆಪಿ ಅಷ್ಟೊಂದು ಭಕ್ತಿ ಮತ್ತು ಕಾಳಜಿ ಹೊಂದಿದ್ದರೆ ಗೋವಾ, ಕೇರಳ ಮತ್ತು ಈಶಾನ್ಯ ರಾಜ್ಯಗಳೂ ಸೇರಿದಂತೆ ಇಡೀ ದೇಶಕ್ಕೆ ಅನ್ವಯವಾಗುವಂತಹ ಒಂದು ಕಾನೂನನ್ನು ಜಾರಿಗೆ ತನ್ನಿ, ಇದರ ಜೊತೆಗೆ ಗೋಮಾಂಸ ರಫ್ತು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ” ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ: ವಯಸ್ಸಾದ ದನಗಳನ್ನು ಸರ್ಕಾರವೇ ಖರೀದಿಸಲಿ – ಸಿದ್ದರಾಮಯ್ಯ ಸಲಹೆ

“ಗೋಹತ್ಯೆಯನ್ನು ನಿಷೇಧಿಸುವ ಮೊದಲು ಎಲ್ಲ ಅನುತ್ಪಾದಕ ಜಾನುವಾರುಗಳನ್ನು ಸರ್ಕಾರವೇ ಖರೀದಿಸಬೇಕು, ಅವುಗಳನ್ನು ರೈತರೇ ಸಾಕಬೇಕಾದರೆ ಅದಕ್ಕೆ ತಗುಲುವ ವೆಚ್ಚವನ್ನು ಸರ್ಕಾರ ಭರಿಸಬೇಕು. ಇದಕ್ಕೆ ಸಿದ್ಧವಿದ್ದರೆ ಮುಂದಿನ ವಾರವೇ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲಿ, ನಾವು ಭಾಗವಹಿಸುತ್ತೇವೆ” ಎಂದು ಅವರು ಸವಾಲೆಸೆದಿದ್ದಾರೆ.

“ಗೋಹತ್ಯೆ ನಿಷೇಧ 1964 ರಿಂದಲೇ ಇದೆ, ಹಾಲು ನೀಡದ, ಕೃಷಿಯೋಗ್ಯವಲ್ಲದ, ರೋಗಗ್ರಸ್ತ ಗೋವುಗಳನ್ನು ಕೊಲ್ಲುವುದಕ್ಕೆ ಅವಕಾಶ ನೀಡಿರುವ ಆ ಕಾಯ್ದೆ ಉಳಿದಂತೆ ಗೋಹತ್ಯೆಯನ್ನು ನಿಷೇಧಿಸಿದೆ. ರಾಜ್ಯ ಸರ್ಕಾರ ತನ್ನ ಆಡಳಿತದ ವೈಫಲ್ಯವನ್ನು ಮುಚ್ಚಿಹಾಕಲು ಜನರ ಗಮನ ಬೇರೆಡೆ ಸೆಳೆಯಲು ಈ ಕಾಯ್ದೆಯನ್ನು ತರಲು ಹೊರಟಿದೆ” ಎಂದು ಅವರು ಗಮನಸೆಳೆದಿದ್ದಾರೆ.

“ನಾವು ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಒಪ್ಪಿಕೊಂಡಿರುವ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಚರ್ಚೆಗೆ ಕೂಡ ಅವಕಾಶ ನೀಡದೆ ದಿಢೀರನೆ ಮಸೂದೆ ಮಂಡಿಸಿ ಅಂಗೀಕಾರ ಪಡೆಯುವ ಪ್ರಯತ್ನ ಮಾಡಿದೆ. ಇದು ಬಿಜೆಪಿ ಪಕ್ಷದ ರಾಜಕೀಯ ಮತ್ತು ನೈತಿಕ ದಿವಾಳಿತನಕ್ಕೆ ಸಾಕ್ಷಿ. ನೂತನ ಗೋಹತ್ಯೆ ನಿಷೇಧ ಕಾಯ್ದೆಯನ್ನು ತರಲು ಹೊರಟಿರುವುದು, ಗೋಸಾಗಾಣಿಕೆದಾರರ ಮೇಲೆ ಸುಳ್ಳು ಆರೋಪ ಹೊರಿಸಿ ಅವರ ಮೇಲೆ ದೌರ್ಜನ್ಯ ನಡೆಸುವವರ ರಕ್ಷಣೆಗಾಗಿಯೇ ಹೊರತು ಗೋವುಗಳ ರಕ್ಷಣೆಗೆ ಅಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ – ಸಿದ್ದರಾಮಯ್ಯ

“ಸಮೀಕ್ಷೆಯೊಂದರ ಪ್ರಕಾರ ದೇಶದಲ್ಲಿ ಪ್ರತಿ ವರ್ಷ 3.4 ಗಂಡು ಕರುಗಳು ಹುಟ್ಟುತ್ತವೆ ಮತ್ತು 3.5 ಕೋಟಿ ಜಾನುವಾರುಗಳು ಹೊಸದಾಗಿ ಕರು ಹಾಕುವ ವಯಸ್ಸಿಗೆ ಬರುತ್ತವೆ. ಗಂಡು ಕರುಗಳ ಸರಾಸರಿ ಆಯಸ್ಸು 10 ವರ್ಷ ಅಂದರೂ ಮುಂದಿನ 10 ವರ್ಷಗಳಲ್ಲಿ 34 ಕೋಟಿ ಗಂಡು ಕರುಗಳು ದೇಶದಲ್ಲಿರಲಿವೆ”

“ಪ್ರತೀ ವರ್ಷ 6 ಕೋಟಿ ಹಸುಗಳು ಹಾಲು ಕೊಡುವುದನ್ನು ನಿಲ್ಲಿಸಿ ಅನುತ್ಪಾದಕವಾಗುತ್ತವೆ. ಇವುಗಳಿಗೆ ದಿನಕ್ಕೆ ಸರಾಸರಿ ರೂ.100 ಖರ್ಚು ಎಂದು ಅಂದಾಜಿಸಿದರೂ ವರ್ಷಕ್ಕೆ ರೂ.36,500 ಬೇಕು. ಈ ಹಸುಗಳ ನಿರ್ವಹಣೆಗೆ 5 ಲಕ್ಷ ಎಕರೆ ಭೂಮಿ, ವಾಸಕ್ಕೆ ಶೆಡ್ಡು, ಗೋಶಾಲೆ ಇವೆಲ್ಲದರ ಒಟ್ಟು ಖರ್ಚು ರೂ.10 ಲಕ್ಷ ಕೋಟಿ ಎಂದು ಅಧ್ಯಯನ ಹೇಳುತ್ತದೆ”

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ, ಲವ್ ಜಿಹಾದ್ ತಡೆ ಕಾಯ್ದೆ ತರುವುದು ನೀತಿಸಂಹಿತೆಯ ಉಲ್ಲಂಘನೆ: ಸಿದ್ದರಾಮಯ್ಯ

“2019 ರ ಜಾನುವಾರು ಗಣತಿ ಪ್ರಕಾರ ಹಸು, ಹೋರಿ, ಎಮ್ಮೆ ಮತ್ತು ಕೋಣಗಳು ಸೇರಿ ರಾಜ್ಯದಲ್ಲಿ ಒಟ್ಟು 84,69,004 ಜಾನುವಾರುಗಳಿವೆ. ಇವುಗಳ ಸಾಕಾಣಿಕೆಗೆ ವಾರ್ಷಿಕ 2 ಕೋಟಿ 76 ಲಕ್ಷ ಟನ್ ಮೇವಿನ ಅಗತ್ಯವಿದೆ. ಆದರೆ ನಮ್ಮಲ್ಲಿ ಲಭ್ಯವಿರುವ ಮೇವಿನ 1 ಕೋಟಿ 49 ಲಕ್ಷ ಟನ್ ಮಾತ್ರ”

“ಕಳೆದ 20 ವರ್ಷಗಳಲ್ಲಿ 15 ವರ್ಷ ರಾಜ್ಯ ಬರಗಾಲ ಎದುರಿಸಿದೆ. ರೈತರು ಬೆಳೆದ ಬೆಳೆ ಕೈಸೇರದೆ, ಜಾನುವಾರುಗಳಿಗೆ ಮೇವು ಒದಗಿಸಲು ಅಸಾಧ್ಯ ಎಂಬ ಪರಿಸ್ಥಿತಿ ಎದುರಾದಾಗ ಸಹಜವಾಗಿಯೇ ಅವರು ತಮ್ಮ ಜಾನುವಾರುಗಳನ್ನು ಮಾರಾಟ ಮಾಡುತ್ತಾರೆ. ಆದರೆ ಹೊಸ ಕಾಯ್ದೆ ಇದಕ್ಕೆ ಅವಕಾಶ ನೀಡದಿದ್ದಾಗ ಸಹವಾಗಿಯೇ ಸಂಘರ್ಷ ಉಂಟಾಗುತ್ತದೆ”

“ರಾಜ್ಯದಲ್ಲಿ ಒಟ್ಟು159 ಗೋಶಾಲೆಗಳು ಇವೆ, ಅಲ್ಲಿರುವ ಹಸು, ಹೋರಿಗಳಿಗೇ ಸರ್ಕಾರ ಸರಿಯಾಗಿ ಮೇವು ಒದಗಿಸುತ್ತಿಲ್ಲ. ಇನ್ನು ರೈತರು ತಮ್ಮ ಬಳಿಯಿರುವ ಹೋರಿ, ವಯಸ್ಸಾದ ಹಸುಗಳನ್ನು ಕೊಂಡುಹೋಗಿ ಗೋಶಾಲೆಗೆ ಬಿಟ್ಟರೆ ಅವುಗಳಿಗೆ ಮೇವು ಹಾಕೋರು ಯಾರು? ಇದರ ಪರಿಕಲ್ಪನೆಯಾದರೂ ಸರ್ಕಾರಕ್ಕಿದೆಯೇ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...