Homeಮುಖಪುಟರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಯನ್ನು ಕೈಬಿಟ್ಟ ಬಿಜೆಪಿ

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಯನ್ನು ಕೈಬಿಟ್ಟ ಬಿಜೆಪಿ

- Advertisement -
- Advertisement -

ಬಿಜೆಪಿ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್​ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಅವರಿಗೆ ಕೊಕ್ ನೀಡಲಾಗಿದೆ.

ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್​.ಸಂತೋಷ್ ಅವರನ್ನು ಮುಂದುವರೆಸಲಾಗಿದೆ. ಇನ್ನು ತೆಲಂಗಾಣದ ಸಂಜಯ್ ಬಂಡಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಎಂಟು ನಾಯಕರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಳಾಗಿ ನೇಮಕ ಮಾಡಲಾಗಿದೆ. 13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

 

ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ

ಸಿಟಿ ರವಿ ಅವರನ್ನು ರಾಜ್ಯ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುತ್ತದೆ ಅನ್ನುವ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ಸಿಟಿ ರವಿ ಅವರನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತೆರವುಗೊಳಿಸಲಾಗಿದೆ. ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್ ನೀಡಿರುವ ಕಾರಣ ಮತ್ತು ಪಕ್ಷದಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ಅಲಿಖಿತ ನಿಯಮ ಚಾಲ್ತಿಯಲ್ಲಿರುವ ಕಾರಣ ಸಿಟಿ ರವಿ ಅವರನ್ನು ರಾಜ್ಯ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುತ್ತೆ ಅನ್ನುವ ಚರ್ಚೆಗೆ ಮತ್ತಷ್ಟು ಇಂಬು ನೀಡಿದಂತಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ 2024; ಐದನೇ ಹಂತದಲ್ಲಿ 60.09% ಮತದಾನ

0
ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳ ಮತದಾರರು ಸೋಮವಾರ ನಡೆದ ಐದನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ. ಅಂದಾಜು 60.09% ರಷ್ಟು ಮತದಾನದೊಂದಿಗೆ ಕೊನೆಗೊಂಡಿತು, ಪಶ್ಚಿಮ ಬಂಗಾಳದಲ್ಲಿ...