Homeಕರ್ನಾಟಕಕೋವಿಡ್-19 ವಂಚನೆ; ಡಿಕೆಶಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚಿಸಿ ಸಿಎಂ ಆದೇಶ

ಕೋವಿಡ್-19 ವಂಚನೆ; ಡಿಕೆಶಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚಿಸಿ ಸಿಎಂ ಆದೇಶ

- Advertisement -
- Advertisement -

ಬಿಎಸ್ ಯಡಿಯೂರಪ್ಪ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರದ ಅಡಿಯಲ್ಲಿ ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ನಡೆದಿದೆ ಎನ್ನಲಾದ ₹7,223.64 ಕೋಟಿ ಆರ್ಥಿಕ ಅಕ್ರಮಗಳ ಕುರಿತು ತನಿಖೆಗೆ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡವನ್ನು ಪ್ರಾರಂಭಿಸಲು ಸಚಿವ ಸಂಪುಟದಲ್ಲಿ ಅನುಮತಿ ನೀಡಲಾಗಿದೆ. ಇದೀಗ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

“ಕೋವಿಡ್-19 ಸಾಂಕ್ರಾಮಿಕ ರೋಗ ನಿರ್ವಹಣೆಯ ವೇಳೆ ನಡೆದಿರಬಹುದಾದ ಅವ್ಯವಹಾರಗಳ ತನಿಖೆಗೆ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ನಾ ಅವರ ನೇತೃತ್ವದ ವಿಚಾರಣಾ ಆಯೋಗವು ತನ್ನ ಮೊದಲ ವರದಿ ನೀಡಿದೆ. ಸದರಿ ವರದಿಯಲ್ಲಿ ಬೃಹತ್ ಪ್ರಮಾಣದ ಹಗರಣ ನಡೆದಿರುವುದಾಗಿ ಉಲ್ಲೇಖಿಸಿದ್ದು, ಈ ಕುರಿತು ಕ್ರಮ ಕೈಗೊಳ್ಳಬಹುದೆಂದು ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಿ, ಆದೇಶಿಸಿದ್ದೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಮಿತಿಯಲ್ಲಿ ಡಿಕೆ ಶಿವಕುಮಾರ್ ಅಧ್ಯಕ್ಷರಾಗಿದ್ದರೆ, ಸದಸ್ಯರಾಗಿ ಮಂತ್ರಿಗಳಾದ ಡಾ. ಜಿ.ಪರಮೇಶ್ವರ, ಎಚ್‌.ಕೆ. ಪಾಟೀಲ್, ದಿನೇಶ್‌ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಮತ್ತು ಶರಣ ಪ್ರಕಾಶ್ ಪಾಟೀಲ್ ಇದ್ದಾರೆ.

ಮಾಸ್ಕ್‌, ಔಷಧಿ, ಆಮ್ಲಜನಕ ಸಿಲಿಂಡರ್‌ಗಳು ಮತ್ತು ಪಿಪಿಇ ಕಿಟ್‌ ಸೇರಿದಂತೆ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅಕ್ರಮಗಳನ್ನು ವರದಿಯು ಬಹಿರಂಗಪಡಿಸಿದೆ. ಸರ್ಕಾರದ ಅನುಮೋದನೆಯಿಲ್ಲದೆ ಹಲವಾರು ವಸ್ತುಗಳನ್ನು ಖರೀದಿಸಲಾಗಿದೆ. ಸಾವಿನ ಗಣತಿಯನ್ನು ತಿರುಚುವುದು ಕೂಡ ಆರೋಪಗಳಲ್ಲಿ ಒಂದಾಗಿದೆ.

ಇದನ್ನೂ ಓದಿ; ಬಿಜೆಪಿ ಆಡಳಿತಾವಧಿಯ ಕೋವಿಡ್-19 ವಂಚನೆ; ಎಸ್‌ಐಟಿ ತನಿಖೆಗೆ ಸಚಿವ ಸಂಪುಟ ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಆರು ಜನರ ಹೆಸರು ಘೋಷಿಸಿದ ಕಾಂಗ್ರೆಸ್; ಸಿಂಘ್ವಿ-ನೇತಮ್ ಮರು ನಾಮನಿರ್ದೇಶನ

ರಾಜ್ಯಸಭೆಗೆ ಮುಂಬರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಆರು ಅಭ್ಯರ್ಥಿಗಳನ್ನು ಘೋಷಿಸಿದೆ. ಇಬ್ಬರು ಹಾಲಿ ಸದಸ್ಯರನ್ನು ಮತ್ತೆ ನಾಮನಿರ್ದೇಶನ ಮಾಡಿದ್ದು, ವಿವಿಧ ರಾಜ್ಯಗಳಿಂದ ಹಲವಾರು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ರಾಜ್ಯಸಭಾ ಸದಸ್ಯರಾದ ಅಭಿಷೇಕ್ ಮನು...

ರಾಷ್ಟ್ರ ರಾಜಕಾರಣಕ್ಕೆ ನಿತೀಶ್ ಕುಮಾರ್; ರಾಜ್ಯಸಭೆ ಪ್ರವೇಶ ದೃಢಪಡಿಸಿದ ಬಿಹಾರ ಸಿಎಂ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ನಿತೀಶ್ ಕುಮಾರ್, 20 ವರ್ಷಗಳಿಗೂ ಹೆಚ್ಚು ಕಾಲ ತಾವು ಹೊಂದಿದ್ದ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ತೆರಳುವುದಾಗಿ ದೃಢಪಡಿಸಿದ್ದಾರೆ. "ನನ್ನ ಸಂಸದೀಯ...

ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ : ಹಲವು ಅಧಿಕಾರಿಗಳ ಮನೆ, ಕಚೇರಿ ಶೋಧ

ರಾಜ್ಯಾದಾದ್ಯಂತ ವಿವಿಧ ಜಿಲ್ಲೆಗಳ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಗುರುವಾರ (ಮಾ.5) ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ,...

ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸಲು ಅಡ್ಡಿ : ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ಧ ಪ್ರತಿಭಟನೆ

ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸುವ ಕಾನೂನಾತ್ಮಕ ಅವಕಾಶವನ್ನು ಕಿತ್ತುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದ್ದು, ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ದ ಗುರುವಾರ (ಮಾ.5) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಉರೂಸ್‌ ಸಂದರ್ಭದಲ್ಲಿ ಬಾಬಾ ಬುಡನ್‌ಗಿರಿಯ...

ಟ್ರಂಪ್ ಯುದ್ಧಾಧಿಕಾರಕ್ಕೆ ಬ್ರೇಕ್ ಹಾಕುವ ಪ್ರಯತ್ನಕ್ಕೆ ಹಿನ್ನಡೆ; ಸೆನೆಟ್‌ನಲ್ಲಿ ನಿರ್ಣಯಕ್ಕೆ ಸೋಲು 

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯುದ್ಧಾಧಿಕಾರಕ್ಕೆ ಲಗಾಮು ಹಾಕುವ ನಿರ್ಣಯಕ್ಕೆ ಅಮೆರಿಕ ಸೆನೆಟ್‌ನಲ್ಲಿ (ಸಂಸತ್ತಿನ ಮೇಲ್ಮನೆ) ಸೋಲಾಗಿದೆ. ಇದರಿಂದ ಪ್ರಸ್ತುತ ನಡೆಸುತ್ತಿರುವ ಇರಾನ್ ಮೇಲಿನ ದಾಳಿಯನ್ನು ಇನ್ನಷ್ಟು ಹೆಚ್ಚಿಸಲು ಟ್ರಂಪ್‌ಗೆ ಅನುಮತಿ ಸಿಕ್ಕಂತಾಗಿದೆ....

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...