Homeಚಳವಳಿಉನ್ನಾವ್ ಅತ್ಯಾಚಾರ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ ಜೀವಾವಧಿ ಶಿಕ್ಷೆ ಘೋಷಿಸಿದ ಕೋರ್ಟ್‌

ಉನ್ನಾವ್ ಅತ್ಯಾಚಾರ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ ಜೀವಾವಧಿ ಶಿಕ್ಷೆ ಘೋಷಿಸಿದ ಕೋರ್ಟ್‌

- Advertisement -
- Advertisement -

ಉನ್ನಾವ್ ಅತ್ಯಾಚಾರ ಮತ್ತು ಅಪಹರಣ ಪ್ರಕರಣದ ಆರೋಪಿ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಗೆ ಜೀವಾವಧಿ ಶಿಕ್ಷೆಯನ್ನು ದೆಹಲಿಯ ಟಿಸ್ ಹಜಾರಿಯ ನ್ಯಾಯಾಲಯ ಘೋಷಿಸಿದೆ.

2017 ರಲ್ಲಿ ಉನ್ನಾವೊದಲ್ಲಿ ಅಪ್ರಾಪ್ತ ಹುಡುಗಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಂಗಾರ್ ಅವರನ್ನು ದೆಹಲಿ ವಿಚಾರಣಾ ನ್ಯಾಯಾಲಯ ಶಿಕ್ಷೆಗೊಳಪಡಿಸಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ ಕಾಯ್ದೆ) ಯ ಸೆಕ್ಷನ್ 5 (ಮಗುವಿನ ಮೇಲೆ ಉಲ್ಬಣಗೊಳ್ಳುವ ಲೈಂಗಿಕ ಕಿರುಕುಳ) ಯೊಂದಿಗೆ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಸೆಂಗಾರ್ ಶಿಕ್ಷೆಗೊಳಗಾಗಿದ್ದಾನೆ.

2017ರಲ್ಲಿ 17ವರ್ಷದ ಬಾಲಕಿ ಕೆಲಸ ಮುಗಿಸಿ ಬರುವಾಗ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ನಿಂದ ಲೈಂಗಿಕ ದೌರ್ಜನ್ಯವಾಗಿದೆಯೆಂದು ದೂರಿದ್ದಳು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ) 5 (ಸಿ) ಮತ್ತು 6 ಸೆಕ್ಷನ್ ಅಡಿಯಲ್ಲಿ ಶಿಕ್ಷೆಗೊಳಪಡಿಸಲಿದೆ.

ಆತನ ಸಹವರ್ತಿ ಶಸಿ ಸಿಂಗ್‌ ಕೂಡ ಅಪರಾಧಿಯೆಂದು ಘೋಷಿಸಿರುವ ನ್ಯಾಯಾಲಯ ಡಿಸೆಂಬರ್‌ 19 ಶಿಕ್ಷೆಯ ಪ್ರಮಾಣವನ್ನು ಘೋಷಿಸುವ ಸಾಧ್ಯತೆಯಿದೆ.

2017ರಲ್ಲಿಯೇ ಸಂತ್ರಸ್ತೆ ದೂರು ನೀಡಿದ್ದರು ಸಹ ಪೊಲೀಸರ ಸಮರ್ಪಕವಾಗಿ ವಿಚಾರಣೆ ನಡೆಸಿರಲಿಲ್ಲ. ಬದಲಿಗೆ ಅಂದಿನಿಂದ ಆಕೆಯ ಮತ್ತು ಆಕೆಯ ಕುಟುಂಬದ ಮೇಲೆ ನಿರಂತರ ದೌರ್ಜನ್ಯ ನಡೆದಿದೆ. ಆಕೆಯ ತಂದೆಯನ್ನು ಕಾನೂನುಬಾಹಿರವಾಗಿ ಶಶಸ್ತ್ರ ಹೊಂದಿದರೆಂಬ ಆರೋಪದಿಂದ ಬಂಧಿಸಲಾಗಿತ್ತು. ತದನಂತರ ಸಂತ್ರಸ್ತೆಯ ತಂದೆ ಜೈಲಿನಲ್ಲಿಯೇ ಅನುಮಾನಸ್ಪದವಾಗಿ ಸಾವನಪ್ಪಿದ್ದರು. ಅದಕ್ಕೂ ಮೊದಲು ಅವರಿಗೆ ಶಾಸಕನ ತಮ್ಮ ಅತುಲ್ ಸೆಂಗಾರ್ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು.

ಇನ್ನು ಸಂತ್ರಸ್ತೆಯು ಉನ್ನಾವೊದಿಂದ ನ್ಯಾಯಾಲಯಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ರಾಯ್ ಬರೇಲಿಯಲ್ಲಿ ಅಪಘಾತಕ್ಕೀಡಾಗಿದ್ದಳು. ಆಗ ಆಕೆಯ ಇಬ್ಬರು ಚಿಕ್ಕಮ್ಮಂದಿರು ಸಾವನಪ್ಪಿದ್ದಾರೆ. ಆಕೆಯು ಸಹ ಸದ್ಯ ಆಸ್ಪತ್ರೆಯಲ್ಲಿದ್ದಾಳೆ.

ಇಲ್ಲಿ ಪೊಲೀಸರ ಪಕ್ಷಪಾತಿತನ, ಅಧಿಕಾರಿಗಳ ನಿರ್ಲಕ್ಷ್ಯ, ಶಾಸಕನ ಹಣಬಲದಿಂದ ಆರೋಪವನ್ನು ಮುಚ್ಚಿಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಆಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರವರ ಮನೆ ಮುಂದೆ ಪ್ರತಿಭಟಿಸಿದ್ದಳು. ಸಾರ್ವಜನಿಕರ ಆಕೆಗೆ ಬೆಂಬಲ ನೀಡಿದ್ದರು. ಆನಂತರವಷ್ಟೇ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

ಆತನ ಬಂಧನವಾದ ನಂತರವಷ್ಟೇ ಸಾಕಷ್ಟು ಪ್ರತಿಭಟನೆಗಳು ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷವು ಆತನ ಶಾಸಕ ಸ್ಥಾನದಿಂದ ಉಚ್ಚಾಟಿಸಿತ್ತು. ಈ ವರ್ಷ ಸುಪ್ರೀಂ ಕೋರ್ಟ್‌ 45 ದಿನದಲ್ಲಿ ವಿಚಾರಣೆ ನಡೆಸಬೇಕು ಮತ್ತು ಉತ್ತರ ಪ್ರದೇಶ ಸರ್ಕಾರ 25 ಲಕ್ಷ ಪರಿಹಾರ ನೀಡಬೇಕು ಎಂದು ಆದೇಶ ನೀಡಿತ್ತು.

ಅದರಂತೆ ತನಿಖೆ ಪೂರ್ಣಗೊಂಡಿದೆ. ಸಿಬಿಐ ನ್ಯಾಯಾಲಯದ ತನಿಖೆಯು ಅಂತಿಮ ಹಂತದಲ್ಲಿದ್ದು ಸಂತ್ರಸ್ತೆಗೆ ಕೊನೆಗೂ ನ್ಯಾಯ ಸಿಕ್ಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...