Homeಮುಖಪುಟಲೋಕಸಭೆ ಚುನಾವಣೆ: ಬಿಜೆಪಿ ಸೇರಿದ್ದ ಜಡ್ಜ್‌ ವಿರುದ್ಧ ವಿದ್ಯಾರ್ಥಿ ನಾಯಕನನ್ನು ಕಣಕ್ಕಿಳಿಸಿದ ದೀದಿ

ಲೋಕಸಭೆ ಚುನಾವಣೆ: ಬಿಜೆಪಿ ಸೇರಿದ್ದ ಜಡ್ಜ್‌ ವಿರುದ್ಧ ವಿದ್ಯಾರ್ಥಿ ನಾಯಕನನ್ನು ಕಣಕ್ಕಿಳಿಸಿದ ದೀದಿ

- Advertisement -
- Advertisement -

ಬಿಜೆಪಿ ನಿನ್ನೆ 111 ಅಭ್ಯರ್ಥಿಗಳ 5ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕಲ್ಕತ್ತಾ ಹೈಕೋರ್ಟ್‌ಗೆ ರಾಜೀನಾಮೆ ನೀಡಿ ಇತ್ತೀಚೆಗೆ ಬಿಜೆಪಿಗೆ ಸೇರಿ ವಿವಾದವನ್ನು ಸೃಷ್ಟಿಸಿದ್ದ ಮಾಜಿ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರಿಗೆ ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ್ ಜಿಲ್ಲೆಯ ತಾಮ್ಲುಕ್ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ. ಅವರನ್ನು ಚುನಾವಣೆಗೆ ನಿಂತರೆ ಸೋಲಿಸುವುದಾಗಿ ಈ ಹಿಂದೆ ಶಪಥ ಮಾಡಿದ್ದ ಮಮತಾ ಬ್ಯಾನರ್ಜಿ, ತಾಮ್ಲುಕ್ ಕ್ಷೇತ್ರದಿಂದ ಗಂಗೋಪಾಧ್ಯಾಯ ಸ್ಪರ್ಧಿಸುವ ಮಾಹಿತಿ ತಿಳಿದು ಅವರ ವಿರುದ್ಧ ವಿದ್ಯಾರ್ಥಿ ನಾಯಕನನ್ನೇ ಕಣಕ್ಕಿಳಿಸಿದ್ದಾರೆ.

ತೃಣಮೂಲ ಕಾಂಗ್ರೆಸ್‌ನ ಸಾಮಾಜಿಕ ಐಟಿ ಸೆಲ್‌ನ ಮುಖ್ಯಸ್ಥರಾಗಿರುವ 27 ವರ್ಷದ ದೇಬಂಗ್ಶು ಭಟ್ಟಾಚಾರ್ಯ ವಿರುದ್ಧ ಬಿಜೆಪಿಯಿಂದ ಅಭಿಜಿತ್ ಗಂಗೋಪಾಧ್ಯಾಯ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಮಾರ್ಚ್ 10ರಂದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದ ಎಲ್ಲಾ 42 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಗಂಗೋಪಾಧ್ಯಾಯ ಸ್ಪರ್ಧೆ ಮಾಹಿತಿ ತಿಳಿದೇ ಅವರ ವಿರುದ್ಧ ದೇಬಂಗ್ಶು ಭಟ್ಟಾಚಾರ್ಯ ಅವರನ್ನು ದೀದಿ ಕಣಕ್ಕಿಳಿಸಿದ್ದಾರೆ ಎನ್ನಲಾಗಿದೆ.

ನಿವೃತ್ತ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಈ ಮೊದಲು ಚರ್ಚೆಗೆ ಗ್ರಾಸವಾಗಿದ್ದರು. ಏಪ್ರಿಲ್ 2023ರಲ್ಲಿ ಶಾಲಾ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸುತ್ತಿದ್ದ ನ್ಯಾ. ಗಂಗೋಪಾಧ್ಯಾಯ ಅವರು, ಈ ಹಗರಣದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅವರ ಪಾತ್ರದ ಬಗ್ಗೆ ಸ್ಥಳೀಯ ಬಂಗಾಳಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್, ಟಿವಿ ಚಾನೆಲ್‌ಗಳಿಗೆ ಸಂದರ್ಶನ ನೀಡುವುದು ಹಾಲಿ ನ್ಯಾಯಮೂರ್ತಿಗಳ ಕೆಲಸವಲ್ಲ ಎಂದಿತ್ತು. ನ್ಯಾ. ಗಂಗೋಪಾಧ್ಯಾಯ ಅವರು ಸಂದರ್ಶನ ನೀಡಿದ್ದಾರೆಯೇ ಅಥವಾ ಇಲ್ಲವೇ ಎಂಬುವುದನ್ನು ಪರಿಶೀಲಿಸಲು ಕಲ್ಕತ್ತಾ ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್ ಅವರಿಂದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂಕೋರ್ಟ್ ಪೀಠ ವರದಿ ಕೇಳಿತ್ತು.

ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಸಂದರ್ಶನ ನೀಡಿದ್ದು ನಿಜವಾಗಿದ್ದರೆ, ಅರ್ಜಿಗಳ ವಿಚಾರಣೆ ಮುಂದುವರಿಸಲು ಅವರಿಗೆ ಅವಕಾಶ ನೀಡುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿತ್ತು. ಅಲ್ಲದೆ, ಪ್ರಕರಣವನ್ನು ಮತ್ತೊಂದು ಪೀಠಕ್ಕೆ ನಿಯೋಜಿಸುವಂತೆ ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯವರಿಗೆ ಸಿಜೆಐ ಆದೇಶಿಸಿದ್ದರು. ಸುಪ್ರೀಂ ಕೋರ್ಟ್ ಆದೇಶ ನೀಡಿದ ಕೆಲವೇ ಗಂಟೆಗಳಲ್ಲಿ, ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಬಂಗಾಳಿ ಮಾಧ್ಯಮಗಳಿಗೆ ನೀಡಿದ ಸಂದರ್ಶನದ ವರದಿ ಮತ್ತು ಅಧಿಕೃತ ಅನುವಾದವನ್ನು ತಮ್ಮೆದುರು ಹಾಜರುಪಡಿಸುವಂತೆ ಸುಪ್ರೀಂ ಕೋರ್ಟ್ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿತ್ತು.

ಅವರ ತೀರ್ಪುಗಳ ಹಿಂದೆ ರಾಜಕೀಯ ದುರುದ್ದೇಶಗಳು ಇವೆ, ರಾಜಕೀಯಕ್ಕಾಗಿ ನ್ಯಾಯಾಂಗ ತೊರೆದು ಬಿಜೆಪಿ ಸೇರಿರುವುದು ಇಂತಹ ಆರೋಪಗಳನ್ನು ಬಲಪಡಿಸಿದೆ ಎಂದು ಟಿಎಂಸಿ ಹೇಳಿತ್ತು. ಮಾಜಿ ನ್ಯಾಯಾಧೀಶರ ವಿರುದ್ಧ ವಾಗ್ದಾಳಿ ನಡೆಸಿದ ಮಮತಾ ಬ್ಯಾನರ್ಜಿ, ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ನಿರಾಕರಿಸಿದ ನಂತರ ಅವರು ನಾಯಕರಾಗಿದ್ದಾರೆ, ಅವರು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಸೋಲಿಸುವುದಾಗಿ ಶಪಥ ಮಾಡಿದ್ದರು. ತಯಾರಾಗಿರಿ… ನೀವು ಎಲ್ಲಿಂದ ಸ್ಪರ್ಧಿಸುತ್ತೀರೋ, ನಾನು ನಿಮ್ಮ ವಿರುದ್ಧ ಹೋರಾಟಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸುತ್ತೇನೆ ಎಂದು ಹೇಳಿದ್ದರು.

ತಮ್ಲುಕ್‌ನಿಂದ ಗಂಗೋಪಾಧ್ಯಾಯ ಅವರ ನಾಮನಿರ್ದೇಶನಕ್ಕೆ ಸಂಬಂಧಿಸಿದಂತೆ ಮಾಧ್ಯಮ ವರದಿಗಳು ಬಹಿರಂಗವಾಗುತ್ತಿದ್ದಂತೆ, ತೃಣಮೂಲ ಕಾಂಗ್ರೆಸ್‌ ಮಾಜಿ ನ್ಯಾಯಾಧೀಶರ ವಿರುದ್ಧ ಭಟ್ಟಾಚಾರ್ಯರನ್ನು ಕಣಕ್ಕಿಳಿಸಿದೆ. ಭಟ್ಟಾಚಾರ್ಯ ಅವರು ಪಕ್ಷದ ವಿದ್ಯಾರ್ಥಿ ಘಟಕವಾದ ತೃಣಮೂಲ ಛತ್ರ ಪರಿಷತ್ತಿನ ಸದಸ್ಯರಾಗಿ ವಿದ್ಯಾರ್ಥಿ ರಾಜಕೀಯದಲ್ಲಿ ಸಕ್ರಿಯರಾಗಿದ್ದರು ಮತ್ತು 2022ರಿಂದ ಪಕ್ಷದ ಸಾಮಾಜಿಕ ಮಾಧ್ಯಮ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು.

ಇದನ್ನು ಓದಿ: ಮೂರು ದಶಕಗಳ ಬಳಿಕ ಜೆಎನ್‌ಯು ವಿದ್ಯಾರ್ಥಿ ಸಂಘಟನೆಗೆ ದಲಿತ ಅಧ್ಯಕ್ಷರ ಆಯ್ಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್‌ ವಿರುದ್ಧ ದೂರು ನೀಡಿದ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್

0
ದೆಹಲಿ ಎಎಪಿ ನಾಯಕಿ, ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ ವಿಭಿನ್ನ ತಿರುವನ್ನು ಪಡೆದುಕೊಂಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ಶುಕ್ರವಾರ ಎಎಪಿ...