Homeಮುಖಪುಟಬಿಜೆಪಿ ’ಸಮ್ಮಿಶ್ರ ಧರ್ಮ’ ನೀತಿ ಅನುಸರಿಸುತ್ತಿದೆ: ಚಿರಾಗ್ ಪಾಸ್ವಾನ್

ಬಿಜೆಪಿ ’ಸಮ್ಮಿಶ್ರ ಧರ್ಮ’ ನೀತಿ ಅನುಸರಿಸುತ್ತಿದೆ: ಚಿರಾಗ್ ಪಾಸ್ವಾನ್

ಮುಖ್ಯಮಂತ್ರಿ ನಿತೀಶ್ ಕುಮಾರ್, ಭಾರತೀಯ ಜನತಾ ಪಕ್ಷ ಮತ್ತು ಎಲ್‌ಜೆಪಿ ನಡುವೆ ಅಂತರವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪಾಸ್ವಾನ್ ಆರೋಪಿಸಿದ್ದಾರೆ.

- Advertisement -
- Advertisement -

ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರು ಬಿಜೆಪಿ ಮೇಲಿನ ಮಾತಿನ ದಾಳಿಯನ್ನು ಕಡಿಮೆ ಮಾಡಿದ್ದಾರೆ. ಜೊತೆಗೆ ಬಿಜೆಪಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಿತ್ರರಾಗಿ “ಸಮ್ಮಿಶ್ರ ಧರ್ಮ” ವನ್ನು ಅನುಸರಿಸುತ್ತಿದೆ ಎಂದು ಹೇಳಿದ್ದಾರೆ.

“ನಾನು ಪ್ರಧಾನ ಮಂತ್ರಿಯೊಂದಿಗಿನ ನನ್ನ ಸಂಬಂಧವನ್ನು ಪ್ರದರ್ಶಿಸುವ ಅಗತ್ಯವಿಲ್ಲ. ನನ್ನ ತಂದೆ ಆಸ್ಪತ್ರೆಯಲ್ಲಿದ್ದ ಸಮಯದಿಂದ ಅವರ ಕೊನೆಯ ವಿಧಿವಿಧಾನಗಳವರೆಗೆ, ಪ್ರಧಾನಿಗಳು ನನಗಾಗಿ ಮಾಡಿದ ಕೆಲಸಗಳನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ ”ಎಂದು ಪಾಸ್ವಾನ್ ಸರಣಿ ಟ್ವೀಟ್‌ಗಳಲ್ಲಿ ಹೇಳಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್, ಭಾರತೀಯ ಜನತಾ ಪಕ್ಷ ಮತ್ತು ಎಲ್‌ಜೆಪಿ ನಡುವೆ ಅಂತರವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪಾಸ್ವಾನ್ ಆರೋಪಿಸಿದ್ದಾರೆ.

ಜೆಡಿ (ಯು) ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ, ತಮ್ಮ ಮಿತ್ರರಿಗೆ ಕೃತಜ್ಞತೆ ತಿಳಿಸಬೇಕು. ಏಕೆಂದರೆ ನಿತೀಶ್ ಕುಮಾರ್ ವಿರುದ್ಧ ಅಷ್ಟು ಕೋಪವಿದ್ದರೂ ಸಹ ಸಮ್ಮಿಶ್ರ ಧರ್ಮ ಅನುಸರಿಸುತ್ತಿರುವುದಕ್ಕೆ ಎಂದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿ ತೊರೆದ ಚಿರಾಗ್ ಪಾಸ್ವಾನ್!

“ನನ್ನ ಕಾರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ಸಂದಿಗ್ಧ ಸ್ಥಿತಿಯಲ್ಲಿ ಇರುವುದು ನಾನು ಬಯಸುವುದಿಲ್ಲ. ಅವರು ತನ್ನ ಸಮ್ಮಿಶ್ರ ಧರ್ಮವನ್ನು ಅನುಸರಿಸಬೇಕು. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತೃಪ್ತಿಪಡಿಸಲು ಯಾವುದೇ ಸಂಕೋಚವಿಲ್ಲದೆ  ಅವರು ನನ್ನ ವಿರುದ್ಧ ಏನು ಬೇಕಾದರೂ ಹೇಳಬಹುದು, ”ಎಂದು ಹೇಳಿದ್ದಾರೆ.

ಬಿಹಾರದ ವಿಧಾನಸಭಾ ಚುನಾವಣೆಗಳಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಇತರ ಸಮ್ಮಿಶ್ರ ಮುಖಂಡರೊಂದಿಗೆ ಹಲವಾರು ಚುನಾವಣಾ ರ್‍ಯಾಲಿಗಳಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ಬಿಹಾರ ಚುನಾವಣೆಗಳಲ್ಲಿ ಸ್ವತಂತ್ರವಾಗಿ ಸ್ಫರ್ಧಿಸುವ ಇಚ್ಛೆಯಿಂದ ಬಿಜೆಪಿ ಮತ್ತು ಜೆಡಿಯು ಒಳಗೊಂಡ ಎನ್‌ಡಿಎಯಿಂದ ಎಲ್‌ಜೆಪಿ ಹೊರನಡೆದಿದೆ. ಈ ನಿರ್ಧಾರವು ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿಯೇ ಎಲ್‌ಜೆಪಿಯನ್ನು ನೀರಿನಲ್ಲಿ ಮುಳುಗಿಸಿದೆ ಎನ್ನಲಾಗಿದೆ.

ಇದನ್ನೂ ಓದಿ: ’ಮಹಾಘಟಬಂಧನ್’ ಗೆದ್ದರೆ ಕೇಂದ್ರದ ಕೃಷಿ ವಿರೋಧಿ ಕಾನೂನುಗಳು ರದ್ದು!

ಜೆಡಿಯು ವಿರುದ್ಧ ಅಭ್ಯರ್ಥಿಗಳನ್ನು ಹಾಕುವ ಮೂಲಕ ಅದನ್ನು ಗುರಿಯಾಗಿಸಲು ಪಾಸ್ವಾನ್ ದೃಢನಿಶ್ಚಯದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಮತ್ತೊಂದೆಡೆ ಅವರ ಪಕ್ಷ ಬಿಜೆಪಿ ಅಭ್ಯರ್ಥಿಗಳಿರುವ ಚುನಾವಣಾ ಕಣಗಳಲ್ಲಿ ಸ್ಪರ್ಧಿಸುತ್ತಿಲ್ಲ.

ಆದರೆ ಕಳೆದ ಕೆಲವು ದಿನಗಳಲ್ಲಿ ಚಿರಾಗ್ ತನ್ನ ಹಿರಿಯ ನಾಯಕರ ಸಾಮೀಪ್ಯವನ್ನು ತಿಳಿಸುವ ಮೂಲಕ ಗೊಂದಲವನ್ನು ಹರಡಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಎನ್‌ಡಿಎ ಮೈತ್ರಿಕೂಟವು ಜಯಗಳಿಸಿದರೆ ನಿತೀಶ್ ಕುಮಾರ್ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂದು ಪುನರುಚ್ಚರಿಸಿದೆ.

ಮೊನ್ನೆಯಷ್ಟೇ ಪಾಸ್ವಾನ್ ನನ್ನ ಹೃದಯದಲ್ಲಿ ಮೋದಿ ನೆಲೆಸಿದ್ದಾರೆ. ನಾನು ಚುನಾವಣಾ ಪ್ರಚಾರಕ್ಕೆ ಅವರ ಚಿತ್ರ ಬಳಸಬೇಕಿಲ್ಲ. ಬೇಕಿದ್ದರೇ ನನ್ನ ಹೃದಯ ತೆರೆದು ನೋಡಬಹುದು. ನಾನು ಮೋದಿಯ ಹನುಮನಿದ್ದಂತೆ ಎಂದಿದ್ದರು. ಆದರೆ ಬಿಜೆಪಿಯವರು ಪಾಸ್ವಾನ್ ಮತ ವಿಭಜಕ, ಮೈತ್ರಿಯಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಬಿಹಾರ: ಟ್ರಂಪ್ ಬಂದು ವಿಶೇಷ ಸ್ಥಾನಮಾನ ನೀಡುತ್ತಾರಾ?- ನಿತೀಶ್‌ಗೆ ತೇಜಸ್ವಿ ಯಾದವ್ ಪ್ರಶ್ನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...