HomeUncategorizedಬಿಜೆಪಿ ಮುಕ್ತವಾಯಿತು ದ್ರಾವಿಡ ಕುಟುಂಬದ ನೆಲ: ಸ್ಟಾಲಿನ್ ಟ್ವೀಟ್

ಬಿಜೆಪಿ ಮುಕ್ತವಾಯಿತು ದ್ರಾವಿಡ ಕುಟುಂಬದ ನೆಲ: ಸ್ಟಾಲಿನ್ ಟ್ವೀಟ್

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಅದ್ಭುತ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದು, ದ್ರಾವಿಡ ಕುಟುಂಬದ ನೆಲವು ಬಿಜೆಪಿಯನ್ನು ದೂರವಿರಿಸಿದೆ ಎಂದು ಹೇಳಿದ್ದಾರೆ.

ಈಗ ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಪುನಃಸ್ಥಾಪಿಸುವುದಕ್ಕಾಗಿ 2024ರ ಚುನಾವಣೆ ಗೆಲ್ಲಲು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಸ್ಟಾಲಿನ್ ಹೇಳಿದ್ದಾರೆ.

”ಕರ್ನಾಟಕದ ಅದ್ಭುತ ಗೆಲುವಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಸಹೋದರ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸುವುದು, ರಾಜಕೀಯ ವಿರೋಧಿಗಳ ವಿರುದ್ಧ ಪ್ರಧಾನ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವುದು, ಹಿಂದಿ ಹೇರಿಕೆ, ಅವ್ಯಾಹತ ಭ್ರಷ್ಟಾಚಾರ ಇವೆಲ್ಲವೂ ಮತದಾನದ ವೇಳೆ ಕರ್ನಾಟಕದ ಜನರ ಮನದಲ್ಲಿ ಪ್ರತಿಧ್ವನಿಸಿ ಬಿಜೆಪಿಗೆ ತಕ್ಕ ಪಾಠ ಕಲಿಸುವ ಮೂಲಕ ಕನ್ನಡಿಗರ ಅಭಿಮಾನವನ್ನು ಎತ್ತಿ ಹಿಡಿದಿವೆ” ಎಂದಿದ್ದಾರೆ.

”ದ್ರಾವಿಡ ಕುಟುಂಬದ ನೆಲ ಬಿಜೆಪಿಯಿಂದ ಮುಕ್ತವಾಗಿದೆ. ಈಗ ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಪುನಃಸ್ಥಾಪಿಸಲು 2024 ಅನ್ನು ಗೆಲ್ಲಲು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ” ಎಂದು ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬೀಳಗ್ಯಾಗ ರೊಕ್ಕ ನಡಿಲಿಲ್ಲ, ಬಾಗಲಕೋಟದಾಗ ಸೊಕ್ಕ ನಡಿಲಿಲ್ಲ; ಲೆಕ್ಕ ಚುಕ್ತಾ ಮಾಡಿದ ಮತದಾರರು

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ನಿನ್ನೆ ಹೊರಬಿದ್ದಿದ್ದು, ಕಾಂಗ್ರೆಸ್ ಪ್ರಕ್ಷ 135 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿ ಪಕ್ಷ ಕೇವಲ 66 ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ. ಇದು ಬಿಜೆಪಿ ನಾಯಕರಿಗೆ ಭಾರೀ ಮುಖಭಂಗ ಉಂಟುಮಾಡಿದೆ.

ಬಿಜೆಪಿಯ ದೆಹಲಿ ನಾಯಕರಿಗೆ ಕರ್ನಾಟಕದ ಗೆಲುವು ಬಹಳ ಮುಖ್ಯವಾಗಿತ್ತು. ಏಕೆಂದರೆ ದಕ್ಷಿಣ ಭಾರತದಲ್ಲಿ ಕರ್ನಾಟಕದಲ್ಲಿ ಮಾತ್ರ ಅವರಿಗೆ ಅಧಿಕಾರ ನೀಡಲಾಗಿತ್ತು. ಈ ಬಾರಿಯೂ ಗೆಲುವು ಸಾಧಿಸುವ ಮೂಲಕ ದಕ್ಷಿಣ ಭಾರತದಲ್ಲಿ ನೆಲೆಕಂಡುಕೊಳ್ಳಲು ಹೆಣಗಾಡುತ್ತಿದ್ದರು. ಹಾಗಾಗಿಯೇ ಕೇಂದ್ರ ನಾಯಕರೆಲ್ಲ ಚುನಾವಣೆ ಸಮಯದಲ್ಲಿ ಕರ್ನಾಟಕದಲ್ಲೇ ನೆಲೆಯೂರಿದ್ದರು. ಮೋದಿ ರೋಡ್ ಶೋ, ಆದಿತ್ಯನಾಥ್, ಅಮಿತ್ ಶಾ ಹಾಗೂ ನಡ್ಡಾ ಭಾಷಣಗಳು ಬಿಜೆಪಿಗೆ ಮತ ತಂದುಕೊಡಲಿಲ್ಲ.

ಶನಿವಾರ ಫಲಿತಾಂಶ ಹೊರಬಿಳುತ್ತಿದ್ದಂತೆ ಎಂಕೆ ಸ್ಟಾಲಿನ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಅಭಿನಂದೆ ತಿಳಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...