Homeಮುಖಪುಟಭಾರತ ಐಕ್ಯತಾ ಯಾತ್ರೆ ವಿರುದ್ಧ ಆಕ್ಷೇಪಾರ್ಹ ಸುದ್ದಿ ರೂಪದ ಜಾಹೀರಾತು ನೀಡಿದ ಬಿಜೆಪಿ: ತೀವ್ರ ಖಂಡನೆ

ಭಾರತ ಐಕ್ಯತಾ ಯಾತ್ರೆ ವಿರುದ್ಧ ಆಕ್ಷೇಪಾರ್ಹ ಸುದ್ದಿ ರೂಪದ ಜಾಹೀರಾತು ನೀಡಿದ ಬಿಜೆಪಿ: ತೀವ್ರ ಖಂಡನೆ

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಮಹತ್ವದ ಭಾರತ ಐಕ್ಯತಾ ಯಾತ್ರೆಯ 5ನೇ ದಿನವಾದ ಇಂದು ಪಾದಯಾತ್ರೆಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಹೆಜ್ಜೆ ಹಾಕಿದ್ದಾರೆ. ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವನ್ನು ನಿಂದಿಸುವ ಆಕ್ಷೇಪಾರ್ಹ ಸುದ್ದಿ ರೂಪದ ಜಾಹೀರಾತು ನೀಡಿರುವ ಬಿಜೆಪಿ ಪಕ್ಷದ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಮುಂಬೈ ಮೇಲೆ ಉಗ್ರರು ಎರಗಿದ್ದಾಗ ಮಜಾ ಮಾಡುತ್ತಿದ್ದ ರಾಹುಲ್ ಗಾಂಧಿ ಎಂಬ ತಲೆ ಬರಹ ಸೇರಿದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಟಿಪ್ಪು ಜಯಂತಿ ಮತ್ತು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಕುರಿತು ನಿಂದಿಸಿ ಸುದ್ದಿಯಂತೆ ಕಾಣುವ ಜಾಹೀರಾತನ್ನು ಬಿಜೆಪಿ ಪಕ್ಷವು ಹೊಸದಿಗಂತ, ವಿಶ್ವವಾಣಿ, ಕನ್ನಡ ಪ್ರಭ ಮತ್ತು ಸಂಯುಕ್ತ ಕರ್ನಾಟಕ ಪತ್ರಿಕೆಗಳಿಗೆ ನೀಡಿದೆ.

ಇದು ಬಿಜೆಪಿ ಪಕ್ಷದ ಕೀಳು ಮಟ್ಟದ ರಾಜಕೀಯ, ಭಾರತ ಐಕ್ಯತಾ ಯಾತ್ರೆಯ ಯಶಸ್ಸು ಸಹಿಸಲಾಗದೆ ಹತಾಶೆಗೆ ಬಿದ್ದು ಇಂತಹ ಜಾಹೀರಾತು ನೀಡಿದೆ ಎಂದು ಹಲವರು ಕಿಡಿಕಾರಿದ್ದಾರೆ. ಅಲ್ಲದೆ ಇಂತಹ ಪತ್ರಿಕಾ ನೀತಿಗೆ ಹೊರತಾದ ಜಾಹೀರಾತು ಪ್ರಕಟಿಸಿದ ಆ ನಾಲ್ಕು ಪತ್ರಿಕೆಗಳ ವಿರುದ್ಧ ಹರಿಹಾಯ್ದಿದ್ದಾರೆ.

“ಇದು ಅತ್ಯಂತ ನೀಚ ಜಾಹೀರಾತು. ಪತ್ರಿಕೋದ್ಯಮ ಪಾತಾಳಕ್ಕೆ ತಲುಪಿರುವುದಕ್ಕೆ ಸಾಕ್ಷಿ. ಮೂರೂ ಪತ್ರಿಕೆಗಳಿಗೆ ಲೀಡ್ ಸುದ್ದಿ ಜಾಹೀರಾತನ್ನು ಡಿಜೈನ್, ಹೆಡಿಂಗ್ ಸಮೇತ ನೀಡಿದೆ ಬಿಜೆಪಿ. ಬಿಲ್ಲು ಸಹ ದುಬಾರಿಯೇ ಇರಬಹುದು. ಉಳಿದೆರಡು ಪತ್ರಿಕೆಗಳ ವಿಷಯ ಹಾಗಿರಲಿ, ಕನ್ನಡಪ್ರಭ ಹೀಗೆ ಬೀದಿಯಲ್ಲಿ ಬೆತ್ತಲಾಗಬಾರದಿತ್ತು‌” ಎಂದು ಪತ್ರಕರ್ತ, ಹೋರಾಟಗಾರ ದಿನೇಶ್ ಕುಮಾರ್ ಎಸ್‌.ಸಿ ಅಭಿಪ್ರಾಯಪಟ್ಟಿದ್ದಾರೆ.

ಇಂದು ಬೆಳಗ್ಗೆ ನಾಲ್ಕು ಪತ್ರಿಕೆಗಳಲ್ಲಿ ಬಿಜೆಪಿಯ ಸುದ್ದಿ ಮುಖವಾಡದ ಪೂರ್ಣಪುಟ ಜಾಹೀರಾತುಗಳನ್ನು ನೋಡಿದ ಬಳಿಕ ಒಂದು ವಿಚಾರ ಸ್ಪಷ್ಟವಾಯಿತು. ರಾಹುಲ್ ಗಾಂಧಿ, ಪರಿವಾರವನ್ನು “ಬೆಳೆಸಿದ್ದಾರೆ!” ಅಂದರೆ, ರಾಹುಲ್ ಈಗ ಪಪ್ಪು ಅಲ್ಲ ಎಂಬುದನ್ನು ಸ್ವತಃ ಬಿಜೆಪಿ ಮತ್ತದರ ಪರಿವಾರ ಒಪ್ಪಿಕೊಂಡಿದೆ. ಅವರಿಗೀಗ ರಾಹುಲ್ ಅಧಿಕಾರಕ್ಕಾಗಿ ತಮಗೆ ಗಂಭೀರ ಪ್ರತಿಸ್ಪರ್ಧಿ ಅನ್ನಿಸತೊಡಗಿದೆ. ಹಾಗಾಗಿ ಮೊದಲ ಬಾರಿಗೆ, “ಪಪ್ಪು” ಪದ ಬಳಕೆ ಮಾಡದೆ, ರಾಹುಲ್ ಗಾಂಧಿ ಅವರ ವಿರುದ್ಧ ಗಂಭೀರವಾದ ರಾಜಕೀಯ ಆಪಾದನೆ ಮಾಡಿದೆ. ರಾಹುಲ್ ಅವರ ಭಾರತ್ ಜೋಡೋ ಯಾತ್ರೆ, ರಾಜಕೀಯವಾಗಿ ಯಶಸ್ಸು ಕಾಣುತ್ತಿದೆ ಎಂಬುದು ಬಿಜೆಪಿ ಮತ್ತದರ ಪರಿವಾರಕ್ಕೆ ಅನ್ನಿಸತೊಡಗಿರುವುದರ ಪರಿಣಾಮ ಇದು. ಇಷ್ಟರ ಮಟ್ಟಿಗೆ ಕಾಂಗ್ರೆಸ್ಸಿಗರು ಈ ಜಾಹೀರಾತುಗಳ ಬಗ್ಗೆ ಸಂತಸಪಡಬೇಕು ಎಂದು ಚಿಂತಕರಾದ ರಾಜರಾಂ ತಲ್ಲೂರುರವರು ಅಭಿಪ್ರಾಯಪಟ್ಟಿದ್ದಾರೆ.

ಕಳೆದ ವಾರ ಸಹ ಕರ್ನಾಟಕಕ್ಕೆ ಭಾರತ ಐಕ್ಯತಾ ಯಾತ್ರೆ ಆಗಮಿಸುವ ಸಂದರ್ಭದಲ್ಲಿ ಬಿಜೆಪಿ ಪಕ್ಷವು ಕನ್ನಡಪ್ರಭ ಪತ್ರಿಕೆಯಲ್ಲಿ ಸುಳ್ಳುಗಳಿಂದ ಕೂಡಿದ ನಿಂದನಾತ್ಮಕ ಜಾಹೀರಾತು ನೀಡಿ ಟೀಕೆಗೆ ಗುರಿಯಾಗಿತ್ತು. ಅದನ್ನು ಇಂದು ಸಹ ಮುಂದುವರೆಸಿದೆ. ಇದಕ್ಕೆ ಕಾಂಗ್ರೆಸ್ ಪಕ್ಷದ ಪ್ರತಿಕ್ರಿಯೆ ಹೇಗಿರುತ್ತದೆ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ: 5ನೇ ದಿನದ ಭಾರತ ಐಕ್ಯತಾ ಯಾತ್ರೆ ಆರಂಭ: ಜೊತೆಗೂಡಿದ ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಾರತ್ ಜೋಡೋ ಯಾತ್ರೆಯ ಯಶಸ್ಸು ಮನುವಾದಿಗಳನ್ನು ಕಂಗೆಡಿಸಿದೆ. ಅದ್ದರಿಂದ ಅವರು ಹೆಂಡ ಕುಡಿದ ಮಂಗನಂತೆ ಆಡುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...