Homeಮುಖಪುಟದ್ವೇಷಭಾಷಣ, ಕೋಮು ಹಿಂಸೆ ಸೇರಿ 385 ಪ್ರಕರಣಗಳನ್ನು ಕೈಬಿಟ್ಟ ಬಿಜೆಪಿ ಸರ್ಕಾರ

ದ್ವೇಷಭಾಷಣ, ಕೋಮು ಹಿಂಸೆ ಸೇರಿ 385 ಪ್ರಕರಣಗಳನ್ನು ಕೈಬಿಟ್ಟ ಬಿಜೆಪಿ ಸರ್ಕಾರ

ಬಿಜೆಪಿ ಸರ್ಕಾರದ ಈ ನಡೆಯಿಂದ ಸುಮಾರು 1000ಕ್ಕೂ ಹೆಚ್ಚು ಬಲಪಂಥೀಯ ಕಾರ್ಯಕರ್ತರು ಕಾನೂನಿನ ಕುಣಿಕೆಯಿಂದ ಪಾರಾಗಿದ್ದು, ಅವರಲ್ಲಿ ಕೆಲ ಬಿಜೆಪಿ ಸಂಸದರು ಮತ್ತು ಶಾಸಕರು ಸೇರಿದ್ದಾರೆ.

- Advertisement -
- Advertisement -

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಈ ನಾಲ್ಕು ವರ್ಷಗಳಲ್ಲಿ ಏಳು ಪ್ರತ್ಯೇಕ ಆದೇಶಗಳ ಮೂಲಕ ದ್ವೇಷಭಾಷಣ, ಕೋಮು ಹಿಂಸೆ ಸೇರಿ 385 ಪ್ರಕರಣಗಳನ್ನು ಹಿಂಪಡೆದಿದೆ ಎಂದು ತಿಳಿದುಬಂದಿದೆ. ಅವುಗಳಲ್ಲಿ 182 ದ್ವೇಷ ಭಾಷಣ, ಕೋಮು ಹಿಂಸೆ, ಮತೀಯ ಗೂಂಡಾಗಿರಿ ಪ್ರಕರಣಗಳು ಸೇರಿರುವುದು ಆತಂಕಕ್ಕೆ ಎಡೆ ಮಾಡಿದೆ.

ಬಿ.ಎಸ್ ಯಡಿಯೂರಪ್ಪನವರು ಸಿ.ಎಂ ಆಗಿದ್ದ ಮತ್ತು ಬಸವರಾಜ ಬೊಮ್ಮಾಯಿ ಗೃಹ ಸಚಿವರಾಗಿದ್ದ ಫೆಬ್ರವರಿ 11, 2020ರಿಂದ ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿರುವ, ಆರಗ ಜ್ಞಾನೇಂದ್ರ ಗೃಹ ಸಚಿವರಾಗಿರುವ ಫೆಬ್ರವರಿ 28, 2023ರ ನಡುವಿನ ಅವಧಿಯಲ್ಲಿ ಏಳು ಪತ್ಯೇಕ ಆದೇಶಗಳ ಮೂಲಕ 385 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂದು ಆರ್‌ಟಿಐ ಮಾಹಿತಿ ಆದರಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಿಜೆಪಿ ಸರ್ಕಾರದ ಈ ನಡೆಯಿಂದ ಸುಮಾರು 1000ಕ್ಕೂ ಹೆಚ್ಚು ಬಲಪಂಥೀಯ ಕಾರ್ಯಕರ್ತರು ಕಾನೂನಿನ ಕುಣಿಕೆಯಿಂದ ಪಾರಾಗಿದ್ದು, ಅವರಲ್ಲಿ ಕೆಲ ಬಿಜೆಪಿ ಸಂಸದರು ಮತ್ತು ಶಾಸಕರು ಸೇರಿದ್ದಾರೆ ಎನ್ನಲಾಗಿದೆ.

ಈ ರೀತಿ ಪ್ರಕರಣಗಳನ್ನು ವಾಪಸ್ ಪಡೆಯಬೇಕಾದರೆ ಗೃಹ ಸಚಿವರಿಂದ ಶಿಫಾರಸ್ಸಿನ ಮೇರೆಗೆ ರಾಜ್ಯ ಸಚಿವ ಸಂಪುಟ ಮತ್ತು ಸಚಿವ ಸಂಪುಟದ ಉಪ ಸಮಿತಿ ಅನುಮತಿ ನೀಡಬೇಕಿರುತ್ತದೆ. 2013 ರಿಂದ 2018ರ ಅವಧಿಯಲ್ಲಿ ದಾಖಲಾಗಿದ್ದ ಸುಮಾರು 182 ಕೋಮು ಹಿಂಸೆ ಪ್ರಕರಣಗಳನ್ನು ಬಿಜೆಪಿ ಸರ್ಕಾರ ಕೈಬಿಟ್ಟಿದೆ.

ಈಗ ಸರ್ಕಾರ ಕೈಬಿಟ್ಟಿರುವ ಪ್ರಕರಣಗಳಲ್ಲಿ ಸುಮಾರು 45 ಪ್ರಕರಣಗಳು ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಿಸಿವೆ. ಪರೇಶ್ ಮೇಸ್ತಾ ಎಂಬ ಯುವಕನ ಸಾವಿನ ಸಂದರ್ಭದಲ್ಲಿ ಬಲಪಂಥೀಯ ಕಾರ್ಯಕರ್ತರು ಕೋಮು ಗಲಭೆಗಳನ್ನು ಹುಟ್ಟು ಹಾಕಿದ್ದರು. ಮುಸ್ಲಿಮರ ಅಂಗಡಿಗಳಿಗೆ ಬೆಂಕಿ ಹಚ್ಚುವುದು, ಲೂಟಿ ಮಾಡುವುದು ಸೇರಿ 45 ಪ್ರಕರಣಗಳಲ್ಲಿ 300 ಆರೋಪಿಗಳನ್ನು ಗುರುತಿಸಲಾಗಿತ್ತು. ಅದರಲ್ಲಿ 66 ಜನ ಕೊಲೆಯತ್ನದ ಪ್ರಕರಣ ಎದುರಿಸುತ್ತಿದ್ದರು. ಆದರೆ ನಂತರ ಪರೇಶ್ ಮೇಸ್ತನ ಕೊಲೆ ಆಕಸ್ಮಿಕ ಎಂದು ಸಿಬಿಐ ತನಿಖೆ ನಡೆಸಿ ವರದಿ ಸಲ್ಲಿಸಿತ್ತು. ಈಗ ಆ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಲಾಗಿದೆ.

ಮೈಸೂರು ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಎಂ.ಪಿ ರೇಣುಕಾಚಾರ್ಯರವರ ಮೇಲಿನ ಪ್ರಕರಣಗಳನ್ನು ಸಹ ಕೈಬಿಡಲಾಗಿದೆ.

ಬಸವರಾಜ ಬೊಮ್ಮಾಯಿಯವರು ಗೃಹ ಸಚಿವರಾಗಿದ್ದ ವೇಳೆ ಆಗಸ್ಟ್ 13, 2020ರಂದು ಉಡುಪಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ “ಹಲವು ಗಲಭೆಗಳಲ್ಲಿ ಭಾಗಿಯಾಗಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ ಎದುರು ನೋಡ್ರಿ ನಿಮ್ಮ ಮೇಲೆ ಯಾವುದೇ ಕೇಸು ಇದ್ದರೂ ತೆಗೆದು ಹಾಕುತ್ತೇವೆ” ಎಂದು ಹೇಳಿದ್ದರು. ಆ ವಿಡಿಯೋವನ್ನು ನಾನುಗೌರಿ.ಕಾಂ ಬಯಲಿಗೆಳೆದಿತ್ತು.

ಈ ವಿಡಿಯೋ ವೈರಲ್ ಆಗುತ್ತದ್ದಂತೆ ಯೂಟರ್ನ್ ಹೊಡೆದಿದ್ದ ಬೊಮ್ಮಾಯಿಯವರು, “ವಿಶ್ವ ಹಿಂದೂ ಪರಿಷತ್ ಮುಖಂಡರ ಮೇಲಿನ ಯಾವುದೇ ಕೇಸ್ ಇದ್ದರೂ ತೆಗೆದುಹಾಕ್ತೀವಿ ಎಂದು ನಾನು ಹೇಳಿಲ್ಲ. ಅವರು ಮನವಿ ಕೊಟ್ಟು ಅನ್ಯಾಯ ಸರಿಪಡಿಸಿ ಎಂದು ಹೇಳಿದ್ದಾರೆ. ಹಾಗಾಗಿ ಯಾರಿಗೆ ಅನ್ಯಾಯವಾದರೂ ಅದನ್ನು ಸರಿಪಡಿಸುವ ಕೆಲಸ ನನ್ನದು” ಎಂದಿದ್ದರು. ಆದರೆ ಈಗ ಆರ್‌ಟಿಐ ದಾಖಲೆಗಳ ಪ್ರಕಾರ ಬಲಪಂಥೀಯ ಕಾರ್ಯಕರ್ತರ ಮೇಲಿನ 385 ಪ್ರಕರಣಗಳನ್ನು ತೆಗೆದು ಹಾಕಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...