Homeಮುಖಪುಟಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ...

ಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ ಬಹಿರಂಗ

- Advertisement -
- Advertisement -

ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು, ಬರೋಬ್ಬರಿ 1.2 ಲಕ್ಷ ಜನರ ಕೋವಿಡ್ ಸಾವಿನ ಅಂಕಿಅಂಶವನ್ನೇ ಮುಚ್ಚಿಟ್ಟಿತ್ತು ಎಂಬ ಆಘಾತಕಾರಿ ಮಾಹಿತಿಯು ನಿವೃತ್ತ ನ್ಯಾಯಮೂರ್ತಿ ಕುನ್ಹಾ ಆಯೋಗದ ತನಿಖಾ ವರದಿಯಿಂದ ಬಹಿರಂಗವಾಗಿದೆ ಎಂದು ‘ಈದಿನ.ಕಾಮ್’ ವರದಿ ಮಾಡಿದೆ.

ಬಿಜೆಪಿ ಅವಧಿಯ ಕೊರೋನ ಕಾಲದ ಆರ್ಥಿಕ ಹಗರಣದ ಕುರಿತು ತನಿಖೆ ನಡೆಸಿರುವ ನಿವೃತ್ತ ನ್ಯಾಯಮೂರ್ತಿ ಕುನ್ಹಾ ಆಯೋಗದ ವರದಿಯಲ್ಲಿ ಹಲವಾರು ಆಘಾತಕಾರಿ ಅಂಶಗಳು ಬಹಿರಂಗಗೊಳ್ಳುತ್ತಿವೆ. 2020ರಲ್ಲಿ ಅಂದಿನ ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ಸರ್ಕಾರ ₹330 ಪಿಪಿಇ ಕಿಟ್‌ಗಳಿಗೆ ಚೂನಾ ಕಂಪನಿಯಿಂದ ₹2,117 ಕೊಟ್ಟು ಖರೀದಿ ಮಾಡಿದೆ ಎಂಬ ಸ್ಪೋಟಕ ಸತ್ಯ ಹೊರಬಿದ್ದಿದೆ.

ತಮ್ಮ ವೈಯಕ್ತಿಕ ಲಾಭ ಹಾಗೂ ಚೀನಾ ಮೂಲದ ಕಂಪನಿಗಳ ಲಾಭಕ್ಕಾಗಿ ಅಂದಿನ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು ಆರ್ಥಿಕ ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಮಾಹಿತಿ ಕಳೆದ ವಾರ ಬಹಿರಂಗವಾಗಿತ್ತು. ಇದೀಗ, ಬಿಜೆಪಿ ಸರ್ಕಾರ, ಬರೋಬ್ಬರಿ 1.2 ಲಕ್ಷ ಜನರ ಸಾವಿನ ಅಂಕಿಅಂಶವನ್ನೇ ಮುಚ್ಚಿಟ್ಟಿತ್ತು ಎಂಬ ಆಘಾತಕಾರಿ ಮಾಹಿತಿಯು ತನಿಖಾ ವರದಿಯಿಂದ ಬಹಿರಂಗವಾಗಿದೆ.

ಕೇಂದ್ರ ಸರ್ಕಾರದ ಲೆಕ್ಕಪತ್ರ ಮತ್ತು ಅಂಕಿಅಂಶಗಳ ನಿರ್ದೇಶನಾಲಯವು ರಾಜ್ಯದಲ್ಲಿ 2020ರ ಜನವರಿಯಿಂದ ಜುಲೈವರೆಗೆ 2,69,029 ಹಾಗೂ 2021ರ ಜನವರಿಯಿಂದ ಜುಲೈವರೆಗೆ 4,26,943 ಮಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಅಂದರೆ, 2020ಕ್ಕಿಂತ 2021ರಲ್ಲಿ ಸಾವುಗಳ ಸಂಖ್ಯೆ 1,57,914ರಷ್ಟು ಹೆಚ್ಚಾಗಿದೆ. ಆದರೆ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾವಿನ ಸಂಖ್ಯೆಗಳ ಅಂತರವು ಕೇವಲ 37,206 ಎಂದು ತಪ್ಪು ಮಾಹಿತಿ ನೀಡಿದೆ. ಆ ಮೂಲಕ, ಸುಮಾರು 1,20,708 ಸಾವುಗಳ ಮಾಹಿತಿಯನ್ನೇ ಮುಚ್ಚಿಟ್ಟಿದೆ. ತಪ್ಪು ಮಾಹಿತಿ ನೀಡುವ ಮೂಲಕ ಸರ್ಕಾರ ಮತ್ತು ಅಧಿಕಾರಿಗಳು ಘೋರ ಅಪರಾಧ ಎಸಗಿದ್ದಾರೆ ಎಂದು ತನಿಖಾ ಆಯೋಗ ಹೇಳಿದೆ.

ಕೋವಿಡ್ ಹಗರಣದ ಸಂಬಂಧ ಕುನ್ಹಾ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ, “ಬಿ.ಎಸ್. ಯಡಿಯೂರಪ್ಪ ಮತ್ತು ಶ್ರೀರಾಮುಲು ಅವಧಿಯಲ್ಲಿ ಸರ್ಕಾರವು ಕೊರೋನ ಟೆಸ್ಟ್‌ಗಾಗಿ ಖಾಸಗಿ ಲ್ಯಾಬ್‌ಗಳಿಗೆ ₹6.93 ಕೋಟಿ ಕೊಟ್ಟಿದೆ. ಆದರೆ, ಅವುಗಳ ಪೈಕಿ 14 ಲ್ಯಾಬ್‌ಗಳು ಐಸಿಎಂಆರ್​ನಿಂದ ಮ್ಯಾನತೆಯನ್ನೇ ಪಡೆದಿಲ್ಲ. ಅವುಗಳು ಟಿಪಿಸಿಆರ್‌ (TPCR) ಟೆಸ್ಟ್​ಗೆ ಆ ಲ್ಯಾಬ್‌ಗಳ ಸಾಮರ್ಥ್ಯ ಮತ್ತು ಕ್ಷಮತೆ ಗುರುತಿಸಲಾಗಿಲ್ಲ. ಸಾಮರ್ಥ್ಯ, ಕ್ಷಮತೆ ಪರಿಶೀಲಿಸದೆ ಖಾಸಗಿ ಲ್ಯಾಬ್‌ಗಳಿಗೆ ಕೊರೋನ ಪರೀಕ್ಷೆಗೆ ಅನುಮತಿ ನೀಡಿ, ಹಣ ಸಂದಾಯ ಮಾಡಲಾಗಿದೆ. ಅಲ್ಲದೆ, 8 ಲ್ಯಾಬ್‌ಗಳಿಗೆ ಅನುಮತಿ ಪಡೆಯದೆ ₹4.28 ಕೋಟಿ ಸಂದಾಯ ಮಾಡಲಾಗಿದೆ” ಎಂದು ಹೇಳಿದೆ.

ಮತ್ತೊಂದೆಡೆ, ಕೋವಿಡ್ ಜಾಹೀರಾತುವಿನಲ್ಲಿಯೂ ಅಕ್ರಮ ನಡೆದಿದೆ ಎಂದು ವರದಿ ಹೇಳಿದೆ. “ಕೋವಿಡ್‌ ಕುರಿತ ಮಾಹಿತಿ ಮತ್ತು ಪ್ರಚಾರಕ್ಕಾಗಿ ಇಟ್ಟಿದ್ದ ₹7.3 ಕೋಟಿ ಹಣದಲ್ಲೂ ಸಾಕಷ್ಟು ಅಕ್ರಮ ನಡೆದಿವೆ. ಬಿಎಂಟಿಸಿ ಮಾನ್ಯೇಜಿಂಗ್ ಡೈರೆಕ್ಟರ್‌ (ಎಂಡಿ) ಸಲಹೆ ಮೇರೆಗೆ ಯಾವುದೇ ಅನುಮತಿ ಪಡೆಯದೆ, ಚುಕ್ಕಿ ಟಾಕೀಸ್ ಎಂಬ ಸಂಸ್ಥೆಗೆ ₹8.85 ಲಕ್ಷ ಹಣವನ್ನು ನಿಯಮ ಬಾಹಿರವಾಗಿ ಪಾವತಿ ಮಾಡಲಾಗಿದೆ. ಪ್ರಚಾರದ ಹಣದಲ್ಲಿ ₹5 ಕೋಟಿ ಹಣಕ್ಕೆ ಯಾವುದೇ ದಾಖಲೆಗಳನ್ನು ಇಲಾಖೆ ಒದಗಿಸಿಲ್ಲ” ಎಂದು ಆಯೋಗ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

“ಕೋವಿಡ್‌ ಆಪ್ತಮಿತ್ರ ಸೇವೆಯಲ್ಲಿಯೂ ಗೋಲ್‌ಮಾಲ್ ನಡೆದಿದೆ. ಈ ಸೇವೆಗಾಗಿ ಸುಮಾರು ₹5 ಕೋಟಿ ಹಣ ನಿಗದಿ ಮಾಡಲಾಗಿತ್ತು. ಆಪ್ತಮಿತ್ರ ಸೇವೆ ಒದಗಿಸಲು ಎರಡು ಬಿಪಿಓ ಸಂಸ್ಥೆಗಳಿಗೆ ₹4.9 ಕೋಟಿ ಹಣ ಸಂದಾಯ ಮಾಡಲಾಗಿದೆ” ಎಂಬುದನ್ನು ತನಿಖಾ ಆಯೋಗ ಗಮನಿಸಿದೆ.

“ಈ ಎರಡೂ ಬಿಪಿಓ ಸೇವಾ ಸಂಸ್ಥೆಗಳಿಗೆ ಯಾವುದೇ ಅಗ್ರಿಮೆಂಟ್ ಇಲ್ಲದೆ ಕೆಲಸ ಮಾಡಲಾಗಿದೆ. ಕೆಲಸ ನೀಡಿದ್ದಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಬಳಿ ಯಾವುದೇ ಸೂಕ್ತ ದಾಖಲೆಗಳಿಲ್ಲ. ಬಿಪಿಓ ಸಂಸ್ಥೆಗಳಿಗೆ ಹಣ ಪಾವತಿ ಮಾಡಿರುವ ಫೈಲ್‌ ಅನ್ನು ತನಿಖಾ ಆಯೋಗಕ್ಕೆ ಇಲಾಖೆ ಒದಗಿಸಿಲ್ಲ. ಹೀಗಾಗಿ, ಆ ಬಿಪಿಓ ಸಂಸ್ಥೆಗೆ ನೀಡಿರುವ ಹಣವನ್ನ ವಾಪಸ್ ಪಡೆಯಬೇಕು” ಎಂದು ತನಿಖಾ ಆಯೋಗ ಶಿಫಾರಸ್ಸು ಮಾಡಿದೆ.

ಇದನ್ನೂ ಓದಿ; ಕೋವಿಡ್ ತನಿಖೆ ಕುರಿತು ಹೇಳಿಕೆ; ಪ್ರಲ್ಹಾದ್ ಜೋಶಿ ವಿರುದ್ಧ ಕ್ರಮಕ್ಕೆ ರಾಜ್ಯಪಾಲರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...