Homeಕರ್ನಾಟಕಬಿಜೆಪಿ ಸರ್ಕಾರ ಒಂದೂ ಯೋಜನೆ ರೂಪಿಸಿಲ್ಲ: ಸಿಡಿದ ಸಿದ್ದರಾಮಯ್ಯ!

ಬಿಜೆಪಿ ಸರ್ಕಾರ ಒಂದೂ ಯೋಜನೆ ರೂಪಿಸಿಲ್ಲ: ಸಿಡಿದ ಸಿದ್ದರಾಮಯ್ಯ!

ನಾವು ರೂಪಿಸಿ ಅನುಷ್ಠಾನಕ್ಕೆ ತಂದ ಯೋಜನೆಗಳಿಗೂ ಅನುದಾನವನ್ನು ನಿಲ್ಲಿಸಿದ್ದಾರೆ. ಯಡಿಯೂರಪ್ಪ ಸರ್ಕಾರ ಅಭಿವೃದ್ಧಿ ಕೆಲಸಗಳನ್ನೇ ಮಾಡಿಲ್ಲ

- Advertisement -
ಅನ್ನಭಾಗ್ಯ ಯೋಜನೆ ಅನುಷ್ಠಾನದಿಂದ ಬಡವರ ಹಸಿವು ನೀಗಿಸಲು ಸಾಧ್ಯವಾಯಿತು. ನಮ್ಮ ಸರ್ಕಾರ ಇದ್ದ ಸಂದರ್ಭದಲ್ಲಿ ಜಾರಿಯಾದ ಜನಪರ ಯೋಜನೆಗಳನ್ನು ಬಿಟ್ಟು ಮತ್ತೆ ಬಂದ ಸರ್ಕಾರಗಳು ಯಾವುದೇ ಯೋಜನೆಯನ್ನು ರೂಪಿಸಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಿರಾ ಉಪಚುನಾವಣೆಯ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಅಭ್ಯರ್ಥಿ ಟಿ.ಬಿ.ಜಯಚಂದ್ರ ಪರವಾಗಿ ಮತಯಾಚನೆ ಮಾಡಿ, ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಅನ್ನಭಾಗ್ಯ, ಶಾದಿ ಭಾಗ್ಯ, ಶೂ ಭಾಗ್ಯ ಹೀಗೆ ಹಲವು ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಅನುಷ್ಠಾನಗೊಳಿಸಿದೆವು. ಇದರಿಂದ ಬಡವರು ಹಸಿವು ನೀಗಿಸಿಕೊಳ್ಳಲು, ವಿವಾಹಕ್ಕೆ ನೆರವು, ಶಾಲಾ ಮಕ್ಕಳ ಶೂ ಹಾಕಿಕೊಂಡು ಶಾಲೆಗೆ ಹೋಗಲು ಅವಕಾಶ ನೀಡಿದಂತಾಯಿತು ಎಂದು ತಿಳಿಸಿದರು.

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ಕಾಂಗ್ರೆಸ್ ಸರ್ಕಾರದ ನಂತರ ಬಂದ ಎಚ್.ಡಿ.ಕುಮಾರಸ್ವಾಮಿ ಮತ್ತು ಈಗಿನ ಬಿ.ಎಸ್.ಯಡಿಯೂರಪ್ಪ ಸರ್ಕಾರಗಳು ಯಾವುದೇ ಯೋಜನೆ ರೂಪಿಸಿಲ್ಲ. ನಾವು ರೂಪಿಸಿ ಅನುಷ್ಠಾನಕ್ಕೆ ತಂದ ಯೋಜನೆಗಳಿಗೂ ಅನುದಾನವನ್ನು ನಿಲ್ಲಿಸಿದ್ದಾರೆ. ಯಡಿಯೂರಪ್ಪ ಸರ್ಕಾರ ಅಭಿವೃದ್ಧಿ ಕೆಲಸಗಳನ್ನೇ ಮಾಡಿಲ್ಲ. ಹಾಗಾಗಿ ಅಭಿವೃದ್ಧಿಗಾಗಿ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಿ ಗೆಲ್ಲಿಸಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ತಮ್ಮ ಗ್ರಾಮಕ್ಕೆ ಬರುವಂತೆ ಸಿದ್ದರಾಮಯ್ಯ ಅವರನ್ನು ಕೋರಿದರು. “ನಿಗದಿಪಡಿಸಿರುವ ಗ್ರಾಮಗಳಲ್ಲಿ ಪ್ರಚಾರ ನಡೆಸುತ್ತೇನೆ. ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಲು ಆಗುವುದಿಲ್ಲ. ಟಿ.ಬಿ.ಜಯಚಂದ್ರ ಅವರು ಏನೆಂಬುದು ನಿಮಗೆ ಗೊತ್ತಿದೆ. ನವೆಂಬರ್ 3ರಂದು ಮತಕೇಂದ್ರಕ್ಕೆ ಬಂದು ಕಾಂಗ್ರೆಸ್ ಪರವಾಗಿ ಹಕ್ಕು ಚಲಾಯಿಸಿ” ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಸಿದ್ದರಾಮಯ್ಯ ಅವರನ್ನು ನೋಡಲು ಜನರು ಮುಗಿಬೀಳುತ್ತಿದ್ದ ದೃಶ್ಯ ಸಾಮಾನ್ಯವಾಗಿ ಕಂಡು ಬಂತು. ಈ ಸಂದರ್ಭದಲ್ಲಿ ಅಭ್ಯರ್ಥಿ ಟಿ.ಬಿ.ಜಯಚಂದ್ರ ಮತ್ತು ಶಿರಾ ಚುನಾವಣೆಯ ಉಸ್ತುವಾರಿ ಕೆ.ಎನ್.ರಾಜಣ್ಣ ಉಪಸ್ಥಿತರಿದ್ದರು.
- Advertisement -

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ಬಂಧನದ ವಿರುದ್ಧ ಎಎಪಿಯಿಂದ ಸಹಿ ಅಭಿಯಾನ

0
ದೆಹಲಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ವಿರುದ್ಧ ಆಮ್ ಆದ್ಮಿ ಪಕ್ಷ ಗುರುವಾರ ಸಹಿ ಅಭಿಯಾನವನ್ನು ಪ್ರಾರಂಭಿಸಿದೆ. ಮಾರ್ಚ್ 21ರಂದು ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ...