ಸಾಲದ ವಿಚಾರದಲ್ಲಿ ಸುಳ್ಳು ಹೇಳುವುದು ಬಿಟ್ಟು, ಬಡವರಿಗೆ ಆಹಾರ, ಪ್ಯಾಕೇಜ್ ಘೋಷಿಸಿ- ಸಿದ್ದರಾಮಯ್ಯ

ಮೀಸಲಾತಿ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳಿಗೆ ಸ್ಪಷ್ಟತೆಯಾಗಲೀ, ಇಚ್ಛಾಶಕ್ತಿಯಾಗಲೀ ಇಲ್ಲ. ಅವರ ಹೋರಾಟಗಳೇನಿದ್ದರೂ ಮತ ಗಳಿಕೆ ಉದ್ದೇಶಕ್ಕಷ್ಟೇ ಸೀಮಿತವಾದುದ್ದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಭಾನುವಾರ ಮೈಸೂರಿನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ರಾಜ್ಯದಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ದೊಡ್ಡ ಮಟ್ಟದಲ್ಲಿ ಹೋರಾಟಗಳು ನಡೆಯುತ್ತಿವೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಅಧ್ಯಯನ ನಡೆಸಿ, ವರದಿ ಪಡೆಯುವುದು ಸಮಸ್ಯೆ ಬಗೆಹರಿಸಲು ಇರುವ ಏಕೈಕ ಮಾರ್ಗ. ಅದನ್ನು ಬಿಟ್ಟು ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸುವುದರಿಂದ ಯಾವುದೇ ಪ್ರಯೋಜನವಾಗಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನಗೆ ರಕ್ಷಣೆ ಕೊಡಿ ಎಂದ ಯುವತಿ – ವೀಡಿಯೋ ವೈರಲ್

“ಪ್ರತೀ ಬಾರಿ ಮೀಸಲಾತಿಗೆ ಸಂಬಂಧಿಸಿದ ವಿಚಾರಗಳು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌‌ನಲ್ಲಿ ವಿಚಾರಣೆಗೆ ಬಂದಾಗ, ನ್ಯಾಯಾಲಯವು ಜಾತಿವಾರು ಜನಸಂಖ್ಯೆಯ ಬಗ್ಗೆ ಅಧಿಕೃತ ಮಾಹಿತಿಯನ್ನು ಕೇಳುತ್ತದೆ. ಈ ವರೆಗೆ ನಮ್ಮಲ್ಲಿ ಇಂಥದ್ದೊಂದು ಅಧಿಕೃತ ಮಾಹಿತಿ ಇರಲಿಲ್ಲ. ಹೀಗಾಗಿ ಈ ಮಾಹಿತಯನ್ನು ನ್ಯಾಯಾಲಯಕ್ಕೆ ಒದಗಿಸಲು, ಜನಸಂಖ್ಯೆಗೆ ಅನುಗುಣವಾಗಿ ಯೋಜನೆ ರೂಪಿಸಿ ಅನುಷ್ಠಾನಗೊಳಿಸಲು ಹೀಗೆ ಹಲವು ವಿಧಗಳಲ್ಲಿ ನೆರವಾಗುವ ಉದ್ದೇಶದಿಂದ ನಮ್ಮ ಸರ್ಕಾರ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುವಂತೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಆದೇಶಿಸಿತ್ತು” ಎಂದು ಅವರು ಹೇಳಿದ್ದಾರೆ.

“ಈಗ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ಧವಾಗಿರುವುದರಿಂದ ಸರ್ಕಾರ ಅದನ್ನು ಕೂಡಲೇ ಸ್ವೀಕರಿಸಬೇಕು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗಲೂ ಉದ್ದೇಶಪೂರ್ವಕವಾಗಿ ವರದಿ ಸ್ವೀಕರಿಸಲಿಲ್ಲ, ಈಗಿನ ಬಿಜೆಪಿ ಸರ್ಕಾರ ಅವರ ದಾರಿಯಲ್ಲೇ ಸಾಗುತ್ತಿದೆ” ಎಂದು ಅವರು ಅಸಮಧಾನ ವ್ಯಕ್ತಪಡಿಸಿದ್ದಾರೆ.

“ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ದೇವರಾಜ್ ಅರಸ್ ಅಭಿವೃದ್ಧಿ ನಿಗಮವೊಂದಕ್ಕೆ ರೂ.414 ಕೋಟಿ ಅನುದಾನ ನೀಡಿದ್ದೆ. ಈಗಿನ ಸರ್ಕಾರ ಸುಮಾರು 16 ನಿಗಮಗಳಿಗೆ ಒಟ್ಟುಸೇರಿ ರೂ.500 ಕೋಟಿ ಕೊಟ್ಟಿದೆ. ಇದು ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಬೇಕಾದ ಸರ್ಕಾರವೊಂದು ವರ್ತಿಸುವ ರೀತಿಯೇ?” ಎಂದು ಅವರು ಪ್ರಶ್ನಿಸಿದ್ದಾರೆ.

“ಮೀಸಲಾತಿ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳಿಗೆ ಸ್ಪಷ್ಟತೆಯಾಗಲೀ, ಇಚ್ಛಾಶಕ್ತಿಯಾಗಲೀ ಇಲ್ಲ. ಅವರ ಹೋರಾಟಗಳೇನಿದ್ದರೂ ಮತ ಗಳಿಕೆ ಉದ್ದೇಶಕ್ಕಷ್ಟೇ ಸೀಮಿತವಾದುದ್ದು” ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಕನ್ನಡಿಗರದ್ದು, ವಿವಾದದಲ್ಲಿ ಮೋದಿ ಸೇರಿದಂತೆ ಯಾರ ಮಧ್ಯಸ್ಥಿತಿಕೆಯೂ ಬೇಡ: ಕುಮಾರಸ್ವಾಮಿ

LEAVE A REPLY

Please enter your comment!
Please enter your name here