HomeUncategorizedಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದ ನಂತರ 8,350 ಕೋಟಿ ರೂ. ಮೊತ್ತದ ಚುನಾವಣಾ ಬಾಂಡ್‌ಗಳನ್ನು ಮುದ್ರಿಸಿದ...

ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದ ನಂತರ 8,350 ಕೋಟಿ ರೂ. ಮೊತ್ತದ ಚುನಾವಣಾ ಬಾಂಡ್‌ಗಳನ್ನು ಮುದ್ರಿಸಿದ ಬಿಜೆಪಿ ಸರ್ಕಾರ: ಆರ್‌ಟಿಐನಿಂದ ಬಹಿರಂಗ

- Advertisement -
- Advertisement -

ಚುನಾವಣಾ ಬಾಂಡ್ ಯೋಜನೆಯ ಸಾಂವಿಧಾನಿಕ ಮಾನ್ಯತೆಯ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದ ನಂತರ ನರೇಂದ್ರ ಮೋದಿ ಸರ್ಕಾರವು 2024 ರಲ್ಲಿ ತಲಾ 1 ಕೋಟಿ ರೂಪಾಯಿಗಳ 8,350 ಚುನಾವಣಾ ಬಾಂಡ್‌ಗಳನ್ನು ಮುದ್ರಿಸಿದೆ ಎಂಬುವುದು ಆರ್‌ಟಿಐ ಮಾಹಿತಿಯಿಂದ ಬಹಿರಂಗವಾಗಿದೆ.

ಸಾಮಾಜಿಕ ಕಾರ್ಯಕರ್ತ ಕಮೊಡೊರ್ ಲೋಕೇಶ್ ಬಾತ್ರಾ ಅವರು ಮಾಹಿತಿ ಹಕ್ಕು (ಆರ್‌ಟಿಐ) ಅಡಿ ಸಲ್ಲಿಸಿದ್ದ ಅರ್ಜಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೀಡಿದ ಪ್ರತಿಕ್ರಿಯೆಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ.

ಈ ವರ್ಷ ಮುದ್ರಿಸಲಾದ 8,350 ಕೋಟಿ ರೂಪಾಯಿ ಮೌಲ್ಯದ ಬಾಂಡ್‌ಗಳು ಭಾರತೀಯ ಜನತಾ ಪಕ್ಷ (ಬಿಜೆಪಿ) ಯೋಜನೆಯ ಪ್ರಾರಂಭದಿಂದಲೂ ಸಂಗ್ರಹಿಸಿದ್ದಕ್ಕಿಂತ ಮೊತ್ತಕ್ಕಿಂತ ಹೆಚ್ಚಿದೆ.

ಚುನಾವಣಾ ಆಯೋಗವು ಪ್ರಕಟಿಸಿದ ಅಂಕಿ ಅಂಶಗಳ ಪ್ರಕಾರ, 2018 ರಿಂದೀಚೆಗೆ ಬಿಜೆಪಿಯು ಚುನಾವಣಾ ಬಾಂಡ್‌ಗಳ ಮೂಲಕ 8,251.8 ಕೋಟಿ ರೂಪಾಯಿಗಳನ್ನು ಸ್ವೀಕರಿಸಿದೆ. ಈ ಅವಧಿಯಲ್ಲಿ ಮಾರಾಟವಾದ ಬಾಂಡ್‌ಗಳ ಒಟ್ಟು ಮೌಲ್ಯ 16,518 ಕೋಟಿ ರೂಪಾಯಿಗಳು. ಇದರರ್ಥ ಬಿಜೆಪಿಯು ಮಾರಾಟವಾದ ಎಲ್ಲಾ ಬಾಂಡ್‌ಗಳಲ್ಲಿ ಸುಮಾರು 50% ಅನ್ನು ಪುನಃ ಪಡೆದುಕೊಂಡಿದೆ.

ಬಾತ್ರಾ ಅವರು ಸಲ್ಲಿಸಿದ ಹಿಂದಿನ ಆರ್‌ಟಿಐ ಅರ್ಜಿಯಲ್ಲಿ ಚುನಾವಣಾ ಬಾಂಡ್‌ಗಳ ಮುದ್ರಣ ಮತ್ತು ನಿರ್ವಹಣೆಯ ಬಿಲ್ ಅನ್ನು ತೆರಿಗೆದಾರರೇ ಪಾವತಿಸಬೇಕೆ ಹೊರತು ದಾನಿಗಳು ಅಥವಾ ರಾಜಕೀಯ ಪಕ್ಷಗಳಲ್ಲ ಎಂದು ಹೇಳಲಾಗಿತ್ತು.

ಚುನಾವಣಾ ಬಾಂಡ್‌ಗಳನ್ನು ವಿತರಿಸಲು ಅಧಿಕಾರ ಹೊಂದಿದ್ದ ಎಸ್‌ಬಿಐ 2018-2023ರ ನಡುವೆ “ಚುನಾವಣಾ ಬಾಂಡ್‌ ಯೋಜನೆಯನ್ನು ನಿರ್ವಹಿಸಲು ಮತ್ತು ಸರ್ಕಾರದಿಂದ 13.50 ಕೋಟಿ ರೂಪಾಯಿಗಳನ್ನು ಪಡೆದುಕೊಂಡಿದೆ ಎಂದು ಆರ್‌ಟಿಐ ಮಾಹಿತಿ ಬಹಿರಂಗಪಡಿಸಿದೆ.

ಈ ವರ್ಷ ಹೆಚ್ಚುವರಿ 8,350 ಬಾಂಡ್‌ಗಳ ಮುದ್ರಣ ಮತ್ತು ನಿರ್ವಹಣೆಯ ವೆಚ್ಚ ಇನ್ನೂ ತಿಳಿದು ಬಂದಿಲ್ಲ. ಫೆಬ್ರವರಿ 15ರಂದು ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ್ದು, ಇದು ಅಸಂವಿಧಾನಿಕ ಮತ್ತು ಈ ಮಾಹಿತಿ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಹೇಳಿದೆ.

ಇದನ್ನೂ ಓದಿ : ಬಿಹಾರ: ‘ಜನ್ ಅಧಿಕಾರ್ ಪಕ್ಷ’ವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸಿದ ಪಪ್ಪು ಯಾದವ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...