Homeಮುಖಪುಟಲೋಕಸಭೆ ಚುನಾವಣೆ: ಅಸಂವಿಧಾನಿಕ 'CAA' ಅಬ್ಬರ

ಲೋಕಸಭೆ ಚುನಾವಣೆ: ಅಸಂವಿಧಾನಿಕ ‘CAA’ ಅಬ್ಬರ

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದೇಶದಲ್ಲಿ ಸಿಎಎ ಮತ್ತೆ ಮುನ್ನೆಲೆಗೆ ಬಂದಿದೆ. ಬಿಜೆಪಿ ಈ ಚುನಾವಣೆವರೆಗೂ ಸಿಎಎ ಅಬ್ಬರವನ್ನು ಜೋರಾಗಿರಿಸಿ, ಆ ಮೇಲೆ ಮತ್ತೊಮ್ಮೆ ಮರೆಯುವ ತಂತ್ರ ಹೂಡಿದೆಯೆ? ಅಥವಾ ಹಿಂದುತ್ವದ ರಾಜಕಾರಣ ಮಾಡುತ್ತಿರುವ ಬಿಜೆಪಿ ಈ ಅಸಂವಿಧಾನಿಕ ಕಾಯ್ದೆಯನ್ನು ತಂದೇ ಬಿಡುತ್ತಾ ಎನ್ನುವುದು ಅಸ್ಪಷ್ಟ, ಆದರೆ ಇದೀಗ ಕಾಯ್ದೆ ಭಾರೀ ಸದ್ದು ಮಾಡುತ್ತಿದೆ.

ಡಿಸೆಂಬರ್ 2019ರಲ್ಲಿ ಸಂಸತ್ತು ಅಂಗೀಕರಿಸಿದ ಬಳಿಕ ಮೌನವಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ 2023ರ ಡಿಸೆಂಬರ್‌ನಲ್ಲಿ ಅಮಿತ್ ಶಾ ಹೇಳಿಕೆ ಮೂಲಕ ಮತ್ತೆ ಮುನ್ನೆಲೆಗೆ ಬಂದಿತ್ತು. ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ರಾಮಮಂದಿರ, ಜಮ್ಮು-ಕಾಶ್ಮೀರದ 370ನೇ ವಿಧಿ ರದ್ಧತಿ, ಏಕರೂಪ ನಾಗರಿಕ ಸಂಹಿತೆ ಮುನ್ನೆಲೆಯಲ್ಲಿದೆ. ಈ ಎಲ್ಲಾ ಕಾಯ್ದೆಗಳು ಮತ್ತು ಕ್ರಮಗಳು ಅಲ್ಪಸಂಖ್ಯಾತ ವಿರೋಧಿ, ಅದರಲ್ಲೂ ಮುಸ್ಲಿಂ ವಿರೋಧಿ ಎಂದು ಬಣ್ಣಿಸಲಾಗಿದೆ. ಈ ಭಾವನಾತ್ಮಕ, ಅಸಂವಿಧಾನಿಕ ಮತ್ತು ವಿವಾದಾತ್ಮಕ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ಬಿಜೆಪಿ ಮಾಡುತ್ತಿರುವ ತುಷ್ಟೀಕರಣ ರಾಜಕೀಯ ಅದು ಎಷ್ಟರ ಮಟ್ಟಿಗೆ ಫಲ ಪ್ರದವಾಗಲಿದೆ ಎಂದು ಕಾದು ನೋಡಬೇಕಿದೆ.

370ನೇ ವಿಧಿಯನ್ನು ರದ್ದುಗೊಳಿಸಿದ್ದೇವೆ. ಹಾಗಾಗಿ ದೇಶದ ಜನರು ಬಿಜೆಪಿಗೆ 370 ಸ್ಥಾನಗಳನ್ನು ಮತ್ತು ಎನ್‌ಡಿಎಗೆ 400 ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಿ ಆಶೀರ್ವದಿಸುತ್ತಾರೆ ಎಂದು ನಾವು ನಂಬುತ್ತೇವೆ ಎಂದು ಖುದ್ದು ಅಮಿತ್‌ ಶಾ ಅವರು ಹೇಳಿದ್ದಾರೆ. ವಿವಾದಾತ್ಮಕ ಸಿಎಎ ಜಾರಿಗೊಳಿಸುವ ಭರವಸೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ.ಬಂಗಾಳದಲ್ಲಿ ಬಿಜೆಪಿಯ ಪ್ರಮುಖ ಚುನಾವಣಾ ಅಸ್ತ್ರವಾಗಿತ್ತು. ಕೇಸರಿ ಪಕ್ಷದ ನಾಯಕರು ಬಂಗಾಳದಲ್ಲಿ ಬಿಜೆಪಿಯ ಉದಯಕ್ಕೆ ಕಾರಣವಾದ ಅಂಶವೆಂದು ಇದನ್ನು ಪರಿಗಣಿಸುತ್ತಾರೆ. ಆದ್ದರಿಂದ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಇದೀಗ ಸಿಎಎಯನ್ನು ಮುನ್ನಲೆಗೆ ತಂದಿದೆ ಎನ್ನಲಾಗಿದೆ.

ಡಿಸೆಂಬರ್ 2019ರಲ್ಲಿ ಸಂಸತ್ತು ಅಂಗೀಕರಿಸಿದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಅಧಿಸೂಚನೆ ಹೊರಡಿಸಿ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಹೇಳಿದ್ದಾರೆ. ಸಿಎಎ ಜಾರಿಗೊಳಿಸುವ ಭರವಸೆಯಿಂದ ಕಾಂಗ್ರೆಸ್ ಹಿಂದೆ ಸರಿದಿದೆ. ಸಿಎಎ ಕಾಂಗ್ರೆಸ್ ಸರ್ಕಾರದ ಭರವಸೆಯಾಗಿತ್ತು. ದೇಶ ವಿಭಜನೆಯಾದಾಗ ಮತ್ತು ಆ ದೇಶಗಳಲ್ಲಿ ಅಲ್ಪಸಂಖ್ಯಾತರು ಕಿರುಕುಳಕ್ಕೊಳಗಾದಾಗ, ನಿರಾಶ್ರಿತರಿಗೆ ಭಾರತದಲ್ಲಿ ಸ್ವಾಗತವಿದೆ ಮತ್ತು ಅವರಿಗೆ ಭಾರತೀಯ ಪೌರತ್ವವನ್ನು ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು ಎಂದು ಇಟಿ ನೌ ಗ್ಲೋಬಲ್ ಶೃಂಗಸಭೆ 2024ರಲ್ಲಿ ಅಮಿತ್‌ ಶಾ ಹೇಳಿದ್ದಾರೆ. ಪೌರತ್ವವನ್ನು ಒದಗಿಸಲು ಸಿಎಎಯನ್ನು ತರಲಾಗಿದೆಯೇ ಹೊರತು ಯಾರ ಪೌರತ್ವವನ್ನು ಕಸಿದುಕೊಳ್ಳಲು ಅಲ್ಲ. ನಮ್ಮ ದೇಶದಲ್ಲಿ ಅಲ್ಪಸಂಖ್ಯಾತರು ಮತ್ತು ವಿಶೇಷವಾಗಿ ನಮ್ಮ ಮುಸ್ಲಿಂ ಸಮುದಾಯವನ್ನು ಪ್ರಚೋದಿಸಲಾಗುತ್ತಿದೆ. ಕಾಯಿದೆಯಲ್ಲಿ ಯಾವುದೇ ನಿಬಂಧನೆ ಇಲ್ಲದ ಕಾರಣ CAA ಯಾರ ಪೌರತ್ವವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಸಿಎಎ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ನಿರಾಶ್ರಿತರಿಗೆ ಪೌರತ್ವವನ್ನು ನೀಡುವ ಕಾಯಿದೆಯಾಗಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಕೋಲ್ಕತ್ತಾದಲ್ಲಿ ಲೋಕಸಭೆಯ ಚುನಾವಣಾ ಪ್ರಚಾರದ ಭಾಗವಾಗಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್‌ ಶಾ, ಸಿಎಎಯನ್ನು ಮಮತಾ ಬ್ಯಾನರ್ಜಿ ವಿರೋಧಿಸುತ್ತಿದ್ದಾರೆ. ಆದರೆ ಯಾರೊಬ್ಬರೂ ಅದರ ಅನುಷ್ಠಾನವನ್ನು ತಡೆಯಲು ಸಾಧ್ಯವಿಲ್ಲ. ಪ್ರತಿಪಕ್ಷಗಳ ಬಲವಾದ ವಿರೋಧದ ಮಧ್ಯೆ ಕೇಂದ್ರವು ಸಿಎಎ ಕುರಿತು ನಿಯಮವನ್ನು ರೂಪಿಸಲಿದೆ ಎಂದು ಹೇಳಿದ್ದರು.

ಇದಲ್ಲದೆ ಪಶ್ಚಿಮ ಬಂಗಾಳದ ಠಾಕೂರ್ ನಗರದಲ್ಲಿ ದಲಿತ ಮಟುವಾ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅಜಯ್ ಮಿಶ್ರಾ, ಪೌರತ್ವದ ಹಕ್ಕುಗಳನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎಯ ಅಂತಿಮ ಕರಡು 2024ರ ಮಾ.30ರೊಳಗೆ ಸಿದ್ಧವಾಗಲಿದೆ  ಎಂದು ಹೇಳಿದ್ದರು.

ಇತ್ತೀಚೆಗೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ರಾಜ್ಯಸಚಿವ ಶಾಂತನು ಠಾಕೂರ್, ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಿದೆ ಮತ್ತು ಮುಂದಿನ 7 ದಿನಗಳಲ್ಲಿ ಸಿಎಎ ದೇಶಾದ್ಯಂತ ಜಾರಿಗೆ ಬರಲಿದೆ. ಇದು ನನ್ನ ಗ್ಯಾರಂಟಿ, ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲ, ಭಾರತದ ಪ್ರತಿಯೊಂದು ರಾಜ್ಯದಲ್ಲೂ ಸಿಎಎಯನ್ನು ಒಂದು ವಾರದೊಳಗೆ ಜಾರಿಗೆ ತರಲಾಗುವುದು ಎಂದು ಹೇಳಿದ್ದರು. ಆ ಬಳಿಕ ಅವರು ತಮ್ಮ ಮಾತಿನಿಂದ ಹಿಂದೆ ಸರಿದಿದ್ದರು.

ಇತ್ತೀಚಿನ ಇಂಡಿಯಾ ಟುಡೇ ವರದಿ ಪ್ರಕಾರ, ಸಿಎಎ ನಿಯಮಾವಳಿಗಳ ಬಗ್ಗೆ ಸರಕಾರ ಅಧಿಸೂಚನೆ ಹೊರಡಿಸಲಿದೆ. ನಿಯಮಗಳನ್ನು ಹೊರಡಿಸಿದ ನಂತರ ಕಾನೂನನ್ನು ಜಾರಿಗೆ ತರಬಹುದು ಮತ್ತು ಅರ್ಹರಿಗೆ ಭಾರತೀಯ ಪೌರತ್ವವನ್ನು ನೀಡಬಹುದು ಎಂದು ಅಧಿಕಾರಿಯೋರ್ವರು ಹೇಳಿರುವ ಬಗ್ಗೆ ಉಲ್ಲೇಖಿಸಿದೆ.

ದಿ ಇಂಡಿಯನ್ ವರದಿಯ ಎಕ್ಸ್‌ಪ್ರೆಸ್ ವರದಿಯು, ಸಿಎಎ ನಿಯಮಗಳು ಈಗ ಸಿದ್ಧವಾಗಿವೆ ಮತ್ತು ಸಿಎಎ ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಆನ್‌ಲೈನ್ ಪೋರ್ಟಲ್ ಸಹ ಸಿದ್ದವಾಗಿದೆ. ಇದು ಸಂಪೂರ್ಣವಾಗಿ ಆನ್‌ಲೈನ್‌ ಪ್ರಕ್ರಿಯೆಯಾಗಿದೆ ಎಂದು ಹೇಳಿತ್ತು.

ಸಿಎಎ ಕುರಿತು ಎಲ್ಲಾ ವಿಷಯಗಳು ಸಿದ್ದವಾಗಿದೆ ಮತ್ತು ಚುನಾವಣೆಯ ಮೊದಲು ಅವುಗಳನ್ನು ಕಾರ್ಯಗತಗೊಳಿಸುವ ಸಾಧ್ಯತೆಯಿದೆ. ಅರ್ಜಿದಾರರು ಪ್ರಯಾಣ ದಾಖಲೆಗಳಿಲ್ಲದಿದ್ದರೂ, ಭಾರತವನ್ನು ಪ್ರವೇಶಿಸಿದ ವರ್ಷವನ್ನು ತಿಳಿಸಬೇಕಾಗುತ್ತದೆ. ಅರ್ಜಿದಾರರಿಂದ ಯಾವುದೇ ದಾಖಲೆಗಳನ್ನು ಕೇಳಲಾಗುವುದಿಲ್ಲ. 2014ರ ನಂತರ ಅರ್ಜಿ ಸಲ್ಲಿಸಿದ ಅರ್ಜಿದಾರರ ಅರ್ಜಿ ಹೊಸ ನಿಯಮಗಳ ಪ್ರಕಾರ ವಿಲೇವಾರಿ ಮಾಡಲಾಗುತ್ತದೆ. ಇದಲ್ಲದೆ ಡಿ.31, 2014ರ ಮೊದಲು ಭಾರತಕ್ಕೆ ಬಂದವರಿಗೆ ಮಾತ್ರ ಸೀಮಿತವಾಗಿದ್ದ ಗಡುವನ್ನು ವಿಸ್ತರಿಸುವ ಸಾಧ್ಯತೆಯಿದೆ ಎಂದು ಎಕನಾಮಿಕ್ ಟೈಮ್ಸ್ ಕೂಡ ವರದಿ ಮಾಡಿತ್ತು.

ಏನಿದು ಕಾಯ್ದೆ:

2019ರಲ್ಲಿ ಮೋದಿ ಸರ್ಕಾರವು ಪರಿಚಯಿಸಿದ ಪೌರತ್ವ ತಿದ್ದುಪಡಿ ಕಾಯ್ದೆ, ಡಿಸೆಂಬರ್ 31, 2014ಕ್ಕಿಂತ ಮೊದಲು ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ವಲಸೆ ಬಂದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವವನ್ನು ನೀಡುವ ಗುರಿಯನ್ನು ಹೊಂದಿದೆ. ಈ ಪೌರತ್ವದಿಂದ ಮುಸ್ಲಿಮರನ್ನು ಹೊರಗಿಡಲಾಗಿದೆ. ಧರ್ಮದ ಆಧಾರದಲ್ಲಿ ಇದು ಪೌರತ್ವವನ್ನು ನೀಡುವುದನ್ನು ಉದ್ದೇಶಿಸಿರುವ ಕಾರಣ ಇದು ಅಸಂವಿಧಾನಿಕವಾಗಿದೆ.

CAAನ್ನು ಡಿ.10, 2019ರಂದು ಲೋಕಸಭೆಯಲ್ಲಿ ಮತ್ತು ಎರಡು ದಿನಗಳ ನಂತರ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡಿಸಿದ ನಂತರ ಅಂಗೀಕರಿಸಲಾಯಿತು. ಈ ಪ್ರಸ್ತಾವಿತ ಕಾಯ್ದೆ ದೇಶದಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು.

ಇದನ್ನು ಓದಿ: ಉತ್ತರಖಂಡ: ಕೋರ್ಟ್‌ ಆದೇಶವಿಲ್ಲದೆಯೇ ಮದರಸಾ ಧ್ವಂಸ: ದಾಖಲೆಯಲ್ಲಿ ಬಯಲು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...