HomeಅಂಕಣಗಳುSIRಕನ್ನಾಟ್ ಪ್ಲೇಸ್‌ನಲ್ಲಿ ಬಿಜೆಪಿ ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿದೆ; ವ್ಯಾಪಾರಿಗಳಿಗೆ ನಷ್ಟ ಉಂಟುಮಾಡುತ್ತಿದೆ: ರಾಹುಲ್ ಗಾಂಧಿ ಆರೋಪ

ಕನ್ನಾಟ್ ಪ್ಲೇಸ್‌ನಲ್ಲಿ ಬಿಜೆಪಿ ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿದೆ; ವ್ಯಾಪಾರಿಗಳಿಗೆ ನಷ್ಟ ಉಂಟುಮಾಡುತ್ತಿದೆ: ರಾಹುಲ್ ಗಾಂಧಿ ಆರೋಪ

- Advertisement -
- Advertisement -

ನವದೆಹಲಿ: ಚುನಾವಣಾ ಅಕ್ರಮಗಳು ಮತ್ತು ಮತದಾರರ ಹಕ್ಕುಗಳ ಮೇಲಿನ ದಾಳಿಯ ವಿರುದ್ಧ ಇಂಡಿಯಾ ಬ್ಲಾಕ್ ನಡೆಸುತ್ತಿರುವ ಬೃಹತ್ ‘ಚಲೋ ದಿಲ್ಲಿ’ ಪ್ರತಿಭಟನೆಗೆ ರಾಷ್ಟ್ರ ರಾಜಧಾನಿಯಲ್ಲಿ ಜನಸಾಗರವೇ ಹರಿದುಬಂದಿದೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾನುವಾರ ನಡೆಯುತ್ತಿರುವ ಬೃಹತ್ ರ್ಯಾಲಿಯಲ್ಲಿ ವಿವಿಧ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಈ ನಡುವೆ ಕನ್ನಾಟ್ ಪ್ಲೇಸ್‌ನಲ್ಲಿ ಬಿಜೆಪಿ ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಪ್ರತಿಭಟನೆಯಿಂದ ವ್ಯಾಪಾರಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಮೊದಲೇ ಸ್ಪಷ್ಟಪಡಿಸಿದ್ದರೂ, ಬಿಜೆಪಿ ಉದ್ದೇಶಪೂರ್ವಕವಾಗಿ ಅಂಗಡಿಗಳನ್ನು ಮುಚ್ಚಿಸಿ ಸ್ಥಳೀಯ ವ್ಯಾಪಾರಿಗಳಿಗೆ ನಷ್ಟ ಉಂಟುಮಾಡುತ್ತಿದೆ ಎಂದು ಅವರು ದೂರಿದ್ದಾರೆ.

ಮಿಂಟೋ ರಸ್ತೆ-ಕನ್ನಾಟ್ ಪ್ಲೇಸ್ ಜಂಕ್ಷನ್ ಮೂಲಕ ತೆರೆದ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ವಿಡಿಯೊ ಸಂದೇಶ ಬಿಡುಗಡೆ ಮಾಡಿದ ರಾಹುಲ್ ಗಾಂಧಿ, ಇಂಡಿಯಾ ಬ್ಲಾಕ್‌ನ ಮೆರವಣಿಗೆ ಮತ್ತು ರ್ಯಾಲಿಯಲ್ಲಿ ಭಾಗವಹಿಸಲು ದೆಹಲಿಗೆ ಬಂದಿರುವವರು ಸ್ಥಳೀಯ ವ್ಯಾಪಾರಿಗಳ ಅಂಗಡಿಗಳಲ್ಲಿ ಖರೀದಿ ಮಾಡುವಂತೆ ಮನವಿ ಮಾಡಿದರು. ಆದರೆ ಕನ್ನಾಟ್ ಪ್ಲೇಸ್‌ಗೆ ತಲುಪಿದಾಗ ಬಿಜೆಪಿ ಎಲ್ಲ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿರುವುದು ಗಮನಕ್ಕೆ ಬಂದಿದೆ. ಬಿಜೆಪಿ ಸ್ಥಳೀಯ ಅಂಗಡಿಯವರಿಗೆ ಹೇಗೆ ನಷ್ಟ ಉಂಟುಮಾಡುತ್ತಿದೆ ಎಂಬುದನ್ನು ದೇಶವೇ ನೋಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಶನಿವಾರ ರಾತ್ರಿ ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ವಿಡಿಯೊ ಸಂದೇಶ ಪ್ರಕಟಿಸಿದ್ದ ರಾಹುಲ್ ಗಾಂಧಿ, ದೀಪಾವಳಿ, ಛಠ್ ಮತ್ತು ಭಾಯ್ ದೂಜ್ ಹಬ್ಬಗಳ ಸಂದರ್ಭದಲ್ಲಿ ದೆಹಲಿಗೆ ಆಗಮಿಸುವ ಜನರು ಸ್ಥಳೀಯ ಸಣ್ಣ ವ್ಯಾಪಾರಿಗಳನ್ನು ಬೆಂಬಲಿಸಬೇಕು ಎಂದು ಕರೆ ನೀಡಿದ್ದರು. ಪ್ರತಿಭಟನೆ, ಮೆರವಣಿಗೆ ಮತ್ತು ರ್ಯಾಲಿಯಲ್ಲಿ ಭಾಗವಹಿಸುವುದರ ಜೊತೆಗೆ ಸ್ವಲ್ಪ ಸಮಯವನ್ನು ಶಾಪಿಂಗ್‌ಗೂ ಮೀಸಲಿಡುವಂತೆ ಅವರು ಮನವಿ ಮಾಡಿದ್ದರು. ಇದರಿಂದ ಸ್ಥಳೀಯ ವ್ಯಾಪಾರಿಗಳಿಗೆ ಆರ್ಥಿಕವಾಗಿ ನೆರವಾಗಲಿದೆ ಎಂದು ಹೇಳಿದ್ದರು.

ಇಂಡಿಯಾ ಬ್ಲಾಕ್‌ನ ಪ್ರತಿಭಟನೆಯಿಂದ ವ್ಯಾಪಾರ ವಹಿವಾಟಿಗೆ ಯಾವುದೇ ತೊಂದರೆಯಾಗುವುದಿಲ್ಲ. ಆದರೆ ಬಿಜೆಪಿ ಆತಂಕಗೊಂಡಿರುವುದರಿಂದ ಪ್ರತಿಭಟನೆಯ ವಿರುದ್ಧ ವದಂತಿಗಳನ್ನು ಹರಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಒಂದೆಡೆ ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕುಗಳ ರಕ್ಷಣೆಗಾಗಿ ಮೆರವಣಿಗೆ ನಡೆಯಲಿದೆ; ಮತ್ತೊಂದೆಡೆ ಜನರು ಸ್ಥಳೀಯ ಸಣ್ಣ ಅಂಗಡಿಗಳಲ್ಲಿ ಖರೀದಿ ಮಾಡುವ ಮೂಲಕ ವ್ಯಾಪಾರಿಗಳಿಗೆ ಬೆಂಬಲ ನೀಡಲಿದ್ದಾರೆ ಎಂದು ಅವರು ಹೇಳಿದ್ದರು.

ಚುನಾವಣಾ ಅಕ್ರಮಗಳ ಆರೋಪ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಮತ್ತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಬ್ಲಾಕ್ ಈ ಬೃಹತ್ ಪ್ರತಿಭಟನೆಯನ್ನು ಆಯೋಜಿಸಿದೆ. ವಿವಿಧ ರಾಜ್ಯಗಳ ವಿರೋಧ ಪಕ್ಷಗಳ ನಾಯಕರು, ಕಾರ್ಯಕರ್ತರು ಮತ್ತು ಬೆಂಬಲಿಗರು ದೆಹಲಿಗೆ ಆಗಮಿಸಿದ್ದು, ರಾಮಲೀಲಾ ಮೈದಾನದಲ್ಲಿ ಭಾರಿ ಜನಸ್ತೋಮ ಸೇರಿದೆ. ಚುನಾವಣಾ ಆಯೋಗದ ಕಾರ್ಯವೈಖರಿ ವಿರುದ್ಧ ರಾಷ್ಟ್ರಮಟ್ಟದಲ್ಲಿ ಹೆಚ್ಚುತ್ತಿರುವ ವಿರೋಧದ ನಡುವೆ ನಡೆಯುತ್ತಿರುವ ಈ ರ್ಯಾಲಿ, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಇಂಡಿಯಾ ಬ್ಲಾಕ್ ನಡೆಸುತ್ತಿರುವ ರಾಜಕೀಯ ಪ್ರತಿರೋಧದ ಪ್ರಮುಖ ಶಕ್ತಿ ಪ್ರದರ್ಶನವಾಗಿ ಹೊರಹೊಮ್ಮಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಥನಾಲ್ ಪ್ರಮಾಣವನ್ನು ಶೇ. 20ರಿಂದ 30ಕ್ಕೆ ಏರಿಸಲು ಕೇಂದ್ರ ಸರ್ಕಾರದಲ್ಲಿ ಈ ಹಿಂದೆಯೇ ಚರ್ಚೆಯಾಗಿತ್ತು!: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!

ಬೆಂಗಳೂರು: ಕರ್ನಾಟಕದಲ್ಲಿ E20 ಪೆಟ್ರೋಲ್‌ನಲ್ಲಿ ನಿಗದಿತ ಮಿತಿಗಿಂತಲೂ ಅಧಿಕ ಪ್ರಮಾಣದ ಎಥನಾಲ್ ಬೆರೆಸಿ ಸಾರ್ವಜನಿಕರಿಗೆ ವಂಚಿಸಲಾಗುತ್ತಿದೆ ಎನ್ನುವ ರಾಜ್ಯ ಸರ್ಕಾರದ ಗಂಭೀರ ಆರೋಪಗಳ ನಡುವೆಯೇ, ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ...

ಬಂಗಾಳ ಎಸ್‌ಐಆರ್ ನ್ಯಾಯಮಂಡಳಿಗೆ ನಿವೃತ್ತ ನ್ಯಾಯಾಧೀಶ ಬಿಸ್ವಜಿತ್ ಬಸು ರಾಜೀನಾಮೆ

ಕಲ್ಕತ್ತಾ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಬಿಸ್ವಜಿತ್ ಬಸು ಪಶ್ಚಿಮ ಬಂಗಾಳ ಎಸ್‌ಐಆರ್ ನ್ಯಾಯಮಂಡಳಿಗಳಿಗೆ ರಾಜೀನಾಮೆ ನೀಡಿದ್ದಾರೆ, ಒಂದು ತಿಂಗಳಲ್ಲಿ ಸಮಿತಿಯಿಂದ ಹೊರಗುಳಿದ 19 ಸದಸ್ಯರಲ್ಲಿ ನಾಲ್ಕನೇ ವ್ಯಕ್ತಿಯಾಗಿದ್ದಾರೆ. ರಾಜ್ಯದ ಮತದಾರರ ಪಟ್ಟಿಯಿಂದ ಹೊರಗುಳಿದ...

‘ನೋಟ್ ಬಂದಿ’ ಆರ್ಥಿಕತೆ ಹಾಳು ಮಾಡಿದೆ, ‘ವೋಟ್ ಬಂದಿ’ ರಾಜಕೀಯ ನಾಶಪಡಿಸುತ್ತಿದೆ: ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೊಮ್ಮೆ ತೀವ್ರ ವಾಗ್ದಾಳಿ ನಡೆಸಿದೆ. 2016ರಲ್ಲಿ ಜಾರಿಗೊಳಿಸಿದ 'ನೋಟ್ ಬಂದ್' ದೇಶದ ಆರ್ಥಿಕತೆಯನ್ನು ಹಾಳುಮಾಡಿದ್ದರೆ, ಈಗ ನಡೆಯುತ್ತಿರುವ 'ವೋಟ್ ಬಂದ್' ದೇಶದ ರಾಜಕೀಯ...

“ಪಟಾಕಿಗಳನ್ನು ಸಿಡಿಸುವುದರಿಂದ ಹಲವು ರೋಗ-ರುಜಿನಗಳು ಗುಣಮುಖವಾಗುತ್ತವೆ” – ಪಶ್ಚಿಮ ಬಂಗಾಳ ಬಿಜೆಪಿ ಶಾಸಕಿ ಪಾಪಿಯಾ ಅಧಿಕಾರಿ ಹೇಳಿಕೆ!

ಕಾಳಿ ಪೂಜೆ ಮತ್ತು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪರಿಸರ ಮಾಲಿನ್ಯ ಹಾಗೂ ಶಬ್ದ ನಿಯಂತ್ರಿಸಲು ಆಡಳಿತ ಮಂಡಳಿಗಳು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ವಿಧಿಸುತ್ತಿರುವ ಬೆನ್ನಲ್ಲೇ, ಕೋಲ್ಕತ್ತಾದ ಟಾಲಿಗಂಜ್ ಕ್ಷೇತ್ರದ ಬಿಜೆಪಿ ಶಾಸಕಿ ಪಾಪಿಯಾ ಅಧಿಕಾರಿ...

ಎನ್‌ಡಿಎ ಪರೀಕ್ಷೆ; ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಶಿವಮೊಗ್ಗದ ವಿದ್ಯಾರ್ಥಿನಿ

ಕರ್ನಾಟಕದ 18 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ಎನ್‌ಡಿಎ) ಪ್ರವೇಶ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ...

ಗೂಗಲ್ ‘ರೀಯೂನಿಯನ್’ ಜಾಹೀರಾತು ಬಿಡುಗಡೆಯಾಗಿ 13 ವರ್ಷ: ಕುನಾಲ್ ಕಾಮ್ರಾ ಪೋಸ್ಟ್‌ನಿಂದ ಮತ್ತೆ ನೆನಪಾದ ಗಡಿ ಮೀರಿದ ಸೌಹಾರ್ದತೆ!

13 ವರ್ಷಗಳ ಹಿಂದೆ ಅಂದರೆ 2013ರ ನವೆಂಬರ್ 13ರಂದು ಗೂಗಲ್ ಇಂಡಿಯಾ ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಮಾಡಿದ್ದ ಜಾಗತಿಕ ಪ್ರಸಿದ್ಧ ‘ರೀಯೂನಿಯನ್’ (Google Reunion) ಜಾಹೀರಾತು, ಇಂದು ಸಾಮಾಜಿಕ ಜಾಲತಾಣ...

ಕೇಂದ್ರ ಸಚಿವರ ಜೇಬು ತುಂಬಿಸಲು ಎಥನಾಲ್ ದಂಧೆ!: 130 ಕೋಟಿ ಜನರಿಗೆ 20% ಹೆಸರಲ್ಲಿ 40% ಎಥನಾಲ್ – ಪ್ರಿಯಾಂಕ್‌ ಖರ್ಗೆ!

ಕರ್ನಾಟಕದಲ್ಲಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು (OMCs) ಸರಬರಾಜು ಮಾಡುತ್ತಿರುವ ಪೆಟ್ರೋಲ್‌ನಲ್ಲಿ ನಿಯಮಾನುಸಾರ ಇರಬೇಕಾದ ಶೇಕಡಾ 20 ಕ್ಕಿಂತಲೂ ಅಧಿಕ ಪ್ರಮಾಣದ ಎಥನಾಲ್ ಮಿಶ್ರಣ ಮಾಡುತ್ತಿರುವುದು ಈಗ ರಾಜ್ಯ ಸರ್ಕಾರ ನಡೆಸಿದ ತನಿಖೆಯಿಂದ...

ಎಥೆನಾಲ್ ಅತಿಯಾದ ಮಿಶ್ರಣ: ಸಾವಿರಾರು ವಾಹನಗಳಿಗೆ ಸಮಸ್ಯೆ, ಎಂಜಿನ್‌ಗಳು ಸ್ಥಗಿತ; ಆರೋಪ ಮತ್ತಷ್ಟು ತೀವ್ರಗೊಳಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಪೆಟ್ರೋಲ್‌ನಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ವಿವಾದ ಕರ್ನಾಟಕದಲ್ಲಿ ಮತ್ತಷ್ಟು ತೀವ್ರಗೊಂಡಿದೆ. ರಾಜ್ಯದ ವಿವಿಧೆಡೆ ಸಾವಿರಾರು ವಾಹನಗಳು ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿವೆ, ಎಂಜಿನ್‌ಗಳು ಪದೇಪದೇ ಸ್ಥಗಿತಗೊಳ್ಳುತ್ತಿವೆ ಮತ್ತು...

‘ಕಾಂಗ್ರೆಸಿಗರನ್ನು ಕತ್ತರಿಸಿ ಸಮುದ್ರಕ್ಕೆ ಎಸೆಯುತ್ತೇವೆ’ ಎಂದಿದ್ದ ನಾರಾಯಣಸ್ವಾಮಿ ಮನೆಗೆ ಬ್ಲಿಂಕಿಟ್ ಮೂಲಕ 20 ಚಾಕುಗಳ ಆರ್ಡರ್: ದೂರು ದಾಖಲಿಸಿದ ಬಿಜೆಪಿ

ಬೆಂಗಳೂರು: ಕ್ವಿಕ್ ಕಾಮರ್ಸ್ ವೇದಿಕೆ ಬ್ಲಿಂಕಿಟ್ ಮೂಲಕ ತನಗೆ 20 ಚಾಕುಗಳನ್ನು ಕಳುಹಿಸಲಾಗಿದೆ. ಕಾಂಗ್ರೆಸ್ ಬೆಂಬಲಿತ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರೇ ಈ ಚಾಕುಗಳನ್ನು ಆರ್ಡರ್ ಮಾಡಿದ್ದಾರೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ...

ಫಿರೋಜಾಬಾದ್‌ನಲ್ಲಿ ಸಾಮೂಹಿಕ ಅತ್ಯಾಚಾರ; ಬಹು ಅಂಗಾಂಗ ಹಾನಿಯಿಂದ 16 ವರ್ಷದ ದಲಿತ ಬಾಲಕಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ನವೆಂಬರ್ 1 ರಂದು ಬರ್ಬರ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 16 ವರ್ಷದ ದಲಿತ ಬಾಲಕಿ, ಆಗ್ರಾದ ಆಸ್ಪತ್ರೆಯೊಂದರಲ್ಲಿ ಸುಮಾರು ಒಂದು ವಾರಗಳ ಕಾಲ ಸಾವಿನೊಂದಿಗೆ ಹೋರಾಡಿದ ನಂತರ ಶುಕ್ರವಾರ ಕೊನೆಯುಸಿರೆಳೆದಿದ್ದಾಳೆ. ಆಕೆಯನ್ನು...