Homeಮುಖಪುಟಬಿಜೆಪಿಯು ಮಧ್ಯಪ್ರದೇಶವನ್ನು 'ದಲಿತ ದೌರ್ಜನ್ಯಗಳ ಪ್ರಯೋಗಶಾಲೆ'ಯನ್ನಾಗಿಸಿದೆ: ಮಲ್ಲಿಕಾರ್ಜುನ್ ಖರ್ಗೆ

ಬಿಜೆಪಿಯು ಮಧ್ಯಪ್ರದೇಶವನ್ನು ‘ದಲಿತ ದೌರ್ಜನ್ಯಗಳ ಪ್ರಯೋಗಶಾಲೆ’ಯನ್ನಾಗಿಸಿದೆ: ಮಲ್ಲಿಕಾರ್ಜುನ್ ಖರ್ಗೆ

- Advertisement -
- Advertisement -

ಬಿಜೆಪಿಯು ಮಧ್ಯಪ್ರದೇಶವನ್ನು ದಲಿತ ದೌರ್ಜನ್ಯಗಳ ಪ್ರಯೋಗಶಾಲೆಯನ್ನಾಗಿ ಮಾಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದ್ದಾರೆ.

ಮಧ್ಯಪ್ರದೇಶದಲ್ಲಿ ಬಿಜೆಪಿ ಆಡಳಿತದಲ್ಲಿದ್ದು, ಈ ರಾಜ್ಯದಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ ಎಂದು ಖರ್ಗೆ ದೂರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದಲ್ಲಿ ಮುಂದಿನ ವಿಧಾನಸಭೆಯಲ್ಲಿ ಬಿಜೆಪಿಗೆ ಸೋಲು ಖಚಿತ ಎಂದು ಹೇಳಿದ್ದಾರೆ.

”ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ದಲಿತ ಯುವಕನ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಲಾಗಿದೆ. ಗೂಂಡಾಗಳು ಯುವಕನ ತಾಯಿಯನ್ನೂ ಬಿಟ್ಟಿಲ್ಲ. ಬಿಜೆಪಿ ಮಧ್ಯಪ್ರದೇಶವನ್ನು ದಲಿತ ದೌರ್ಜನ್ಯಗಳ ಪ್ರಯೋಗಶಾಲೆಯನ್ನಾಗಿ ಮಾಡಿದೆ. ಬಿಜೆಪಿ ಆಡಳಿತದ ಮಧ್ಯ ಪ್ರದೇಶದಲ್ಲಿ ದಲಿತರ ಮೇಲಿನ ಅಪರಾಧಗಳ ಪ್ರಮಾಣವು ರಾಷ್ಟ್ರೀಯ ಸರಾಸರಿಗಿಂತಲೂ ಮೂರು ಪಟ್ಟು ಹೆಚ್ಚಾಗಿದೆ” ಎಂದು ಅವರು ತಿಳಿಸಿದ್ದಾರೆ.

”ಸಾಗರದಲ್ಲಿ ಸಂತ ರವಿದಾಸ್ ದೇವಾಲಯ ನಿರ್ಮಿಸುತ್ತೇನೆ ಎಂದು ಹೇಳುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಮಧ್ಯಪ್ರದೇಶದಲ್ಲಿ ದಲಿತ ಹಾಗೂ ಆದಿವಾಸಿಗಳ ಮೇಲಿನ ನಿರಂತರ ದೌರ್ಜನ್ಯದ ಬಗ್ಗೆ ಮಾತನಾಡುತ್ತಿಲ್ಲ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

”ಮುಖ್ಯಮಂತ್ರಿ ಶಿವರಾಜ್‌ ಚೌಹಾಣ್ ವಿರುದ್ಧವೂ ವಾಗ್ದಾಳಿ ನಡೆಸಿದ ಖರ್ಗೆ, ”ಕ್ಯಾಮೆರಾ ಮುಂದೆ ಹಿಂದುಳಿದವರ ಪಾದಗಳನ್ನು ತೊಳೆಯುವ ಮೂಲಕ ತಮ್ಮ ಅಪರಾಧವನ್ನು ಮರೆಮಾಡಲು ಪ್ರಯತ್ನಿಸುತ್ತಾರೆ” ಎಂದು ಆರೋಪಿಸಿದ್ದಾರೆ.

”ಮಧ್ಯಪ್ರದೇಶದ ಜನರು ಬಿಜೆಪಿಯ ಬಲೆಗೆ ಬೀಳುವುದಿಲ್ಲ, ಕೆಲವೇ ತಿಂಗಳಲ್ಲಿ ಸಮಾಜದ ಶೋಷಿತ ವರ್ಗಗಳ ಸಂಕಟಕ್ಕೆ ತಕ್ಕ ಉತ್ತರ ಸಿಗಲಿದೆ” ಎಂದು ಖರ್ಗೆ ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...