Homeಮುಖಪುಟರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ: ಕಾಂಗ್ರೆಸ್ ಆರೋಪ

ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ: ಕಾಂಗ್ರೆಸ್ ಆರೋಪ

- Advertisement -
- Advertisement -

ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ! ಒಬ್ಬ ಶಾಸಕರದ್ದೇ ಈ ಪರಿ ಲೂಟಿ ಇರುವಾಗ ಮಂತ್ರಿಗಳ ಲೂಟಿ ಇನ್ನೆಷ್ಟು ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ.

ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಪುತ್ರ 40 ಲಕ್ಷ ರೂ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರ ಕೈಗೆ ವೇಳೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಮತ್ತು ಶಾಸಕರ ಮನೆಯಲ್ಲಿ 6 ಕೋಟಿ ರೂ. ಹಣ ಪತ್ತೆಯಾದ ವಿಚಾರಕ್ಕೆ ಕಾಂಗ್ರೆಸ್ ಟೀಕಿಸಿದೆ.

ಇಂದು ಅಮಿತ್ ಶಾ ಬರುತ್ತಿರುವುದಕ್ಕೂ, ಈ ನಿಧಿ ಸಂಗ್ರಹಕ್ಕೂ ಸಂಬಂಧವಿದೆಯೇ? ಅಮಿತ್ ಶಾ ಬರುತ್ತಿರುವುದೇ ಇಲ್ಲಿನ ‘ಸಂಪತ್ತು’ ಕೊಂಡೊಯ್ಯುವುದಕ್ಕಾ? ಇದೆಲ್ಲದಕ್ಕೂ ಬಿಜೆಪಿ ಪಕ್ಷ ಉತ್ತರಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಶಾಸಕರ ಮನೆಯಲ್ಲಿ ಸಿಕ್ಕ ಹಣದ ರಹಸ್ಯವೇನು? ಈ ಹಣ #PayCM ಗೆ ತಲುಪಿಸುವುದಕ್ಕಾ ಅಥವಾ #PayPM ಗೆ ತಲುಪಿಸುವುದಕ್ಕಾ? ಪದೇ ಪದೇ ಕರ್ನಾಟಕಕ್ಕೆ ಬರುತ್ತಿರುವ ಮೊ-ಶಾ ಜೋಡಿಗೆ ಕರ್ನಾಟಕ ಎಟಿಎಂ ಆಗಿದೆಯೇ? ಸಂಪತ್ತಿನ ಕ್ರೋಡೀಕರಣಕ್ಕಾಗಿಯೇ 40% ಕಮಿಷನ್ ಬಗ್ಗೆ ಮೋದಿ, ಶಾ ಮಾತಾಡುತ್ತಿಲ್ಲವೇ? ಎಂಬ ಪ್ರಶ್ನೆಗಳನ್ನು ಕಾಂಗ್ರೆಸ್ ಕೇಳಿದೆ.

ಕಮಿಷನ್ ಲೂಟಿಗೆ ದಾಖಲೆ ಕೇಳುವ ಬಸವರಾಜ ಬೊಮ್ಮಾಯಿಯವರೆ, ದಾಖಲೆಗಳು ಕಂತೆ ಕಂತೆಯಾಗಿ ಸಿಕ್ಕಿವೆ ನೋಡಿ. ಈಗ ಕಮಿಷನ್ ಆರೋಪ ಒಪ್ಪುವಿರಾ? ಚುನಾವಣೆ ಖರ್ಚಿಗಾಗಿ ಬಿಜೆಪಿಯ #ElectionCollection ಬಿರುಸಿನಿಂದ ಸಾಗಿದೆ, ಅಧಿಕಾರಾವಧಿ ಮುಗಿಯುತ್ತಿದೆ, ಮತ್ತೆಂದೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿ
ಬಕಾಸುರನಂತೆ ದೋಚಿ ಬಾಚುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: 40 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಬಿಜೆಪಿ ಶಾಸಕರ ಪುತ್ರನ ಬಂಧನ: ಮನೆಯಲ್ಲಿ 6 ಕೋಟಿ ರೂ. ಪತ್ತೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಅರವಿಂದ್ ಕೇಜ್ರಿವಾಲ್ ನಿವಾಸದ ಹೊಸ ವೀಡಿಯೊ ವೈರಲ್

0
ದೆಹಲಿಯ ಸಿವಿಲ್ ಲೈನ್ಸ್‌ನಲ್ಲಿರುವ ಮುಖ್ಯಮಂತ್ರಿಯ ಮನೆಯೊಳಗೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಎಎಪಿ ನಾಯಕಿ ಸ್ವಾತಿ ಮಲಿವಾಲ್ ಅವರು,...